ಆರೋಗ್ಯ ಖಾತೆ ಶ್ರೀರಾಮುಲು ಬದಲಿಗೆ ಡಾ. ಸುಧಾಕರ್ ಹೆಗಲಿಗೆ?

ಮಹಾಮಾರಿ ಕೋವಿಡ್ 19 ನಿಯಂತ್ರಣ ರಾಜ್ಯ ಸರ್ಕಾರಕ್ಕೆ ಕಬ್ಬಿಣದ ಕಡಲೆಯಾಗಿದ್ದು ಈ ಹಿನ್ನೆಲೆಯಲ್ಲಿ ಆರೋಗ್ಯ ಖಾತೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಖಾತೆಯನ್ನು ಒಬ್ಬರಿಗೆ ನೀಡಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮುಂದಾಗಿದ್ದಾರೆ ಎನ್ನಲಾಗಿದೆ.
ಶ್ರೀರಾಮುಲು-ಸುಧಾಕರ್
ಶ್ರೀರಾಮುಲು-ಸುಧಾಕರ್

ಬೆಂಗಳೂರು: ಮಹಾಮಾರಿ ಕೋವಿಡ್ 19 ನಿಯಂತ್ರಣ ರಾಜ್ಯ ಸರ್ಕಾರಕ್ಕೆ ಕಬ್ಬಿಣದ ಕಡಲೆಯಾಗಿದ್ದು ಈ ಹಿನ್ನೆಲೆಯಲ್ಲಿ ಆರೋಗ್ಯ ಖಾತೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಖಾತೆಯನ್ನು ಒಬ್ಬರಿಗೆ ನೀಡಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮುಂದಾಗಿದ್ದಾರೆ ಎನ್ನಲಾಗಿದೆ.

ಶ್ರೀರಾಮುಲು ನಿರ್ವಹಿಸುತ್ತಿರುವ ಆರೋಗ್ಯ ಖಾತೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಗೆ ನೀಡಲು ಯಡಿಯೂರಪ್ಪ ನಿರ್ಧರಿಸಿದ್ದು ನಾಳೆ ಅಂತಿಮ ಆದೇಶ ಪ್ರಕಟಣೆ ಸಾಧ್ಯತೆ.

ಕೊರೋನಾ ನಿರ್ವಹಣೆಯಲ್ಲಿ ಸಂವಹನ ಕೊರತೆ ಇದೆ ಎಂಬ ದೂರುಗಳು ಕೇಳಿಬರುತ್ತಿದ್ದು ಹೀಗಾಗಿ ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯನ್ನು ಒಬ್ಬರಿಗೆ ನೀಡಲು ನಿರ್ಧರಿಸಲಾಗಿದೆ. ಇನ್ನು ಸುಧಾಕರ್ ಅವರು ವೈದ್ಯರೂ ಆಗಿರುವುದರಿಂದ ಎರಡು ಖಾತೆಯನ್ನು ಸುಧಾಕರ್ ಅವರಿಗೆ ನೀಡಲು ಯಡಿಯೂರಪ್ಪ ನಿರ್ಧರಿಸಿದ್ದಾರೆ. 

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಪಿಡಬ್ಲ್ಯೂಡಿ ಜೊತೆಗೆ ಸಮಾಜ ಕಲ್ಯಾಣ ಖಾತೆಯನ್ನು ನಿಭಾಯಿಸುತ್ತಿದ್ದರು. ಇದೀಗ ಸಮಾಜ ಕಲ್ಯಾಣ ಇಲಾಖೆ ಖಾತೆಯನ್ನು ಶ್ರೀರಾಮುಲು ಅವರಿಗೆ ನೀಡಲಾಗುತ್ತದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com