ರೈತ ವಿರೋಧಿ ಬಿಜೆಪಿ ಸರ್ಕಾರಕ್ಕೆ ಜೆಡಿಎಸ್ ಬೆಂಬಲ ನೀಡುತ್ತಿದೆ: ಸಿದ್ದರಾಮಯ್ಯ

ರೈತ ವಿರೋಧಿ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡುತ್ತಿದ್ದಾರೆಂದು ಜೆಡಿಎಸ್ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ. 

Published: 11th October 2020 09:00 AM  |   Last Updated: 11th October 2020 09:00 AM   |  A+A-


Siddaramaiah

ಸಿದ್ದರಾಮಯ್ಯ

Posted By : Manjula VN
Source : The New Indian Express

ಮಂಡ್ಯ: ರೈತ ವಿರೋಧಿ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡುತ್ತಿದ್ದಾರೆಂದು ಜೆಡಿಎಸ್ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ವೈದ್ಯಕೀಯ ಸಲಕರಣೆ ಖರೀದಿಯಲ್ಲಿ ಭ್ರಷ್ಟಾಚಾರ ಹಾಗೂ ಕೃಷಿ ಮಸೂದೆ ಕುರಿತಂತೆ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ನಿರ್ಧಾರ ಕೈಗೊಳ್ಳಲಾಗಿತ್ತು. ಇದಕ್ಕಾಗಿ ಜೆಡಿಎಸ್ ಬೆಂಬಲವನ್ನು ಕೋರಲಾಗಿತ್ತು. ಆದರೆ, ಈ ಕುರಿತು ಸಭೆ ನಡೆಸಿದ್ದ ಜೆಡಿಎಸ್ ನಂತರ ಬೆಂಬಲ ನೀಡದಿರಲು ನಿರ್ಧರಿಸಿತ್ತು. ಇದರ ಅರ್ಥವೇನು? ಎಂದು ಪ್ರಶ್ನಿಸಿದ್ದಾರೆ. 

ಮಂಡ್ಯ ಸಕ್ಕರೆ ಕಾರ್ಖಾನೆ ಮುಚ್ಚಲು ಮತ್ತು ಪಾಂಡವಪುರ ಸಕ್ಕರೆ ಕಾರ್ಖಾನೆಯ ಖಾಸಗೀಕರಣಗೊಳ್ಳಲು ಸಾಧ್ಯವಾಗದೆ ಇರುವುದಕ್ಕೆ ಹಿಂದಿನ ಸರ್ಕಾರವೇ ಕಾರಣರಾಗಿದ್ದಾರೆ. ಇದಕ್ಕೆ ಈ ಮಣ್ಣಿನ ಮಕ್ಕಳೇ ಕಾರಣ ಎಂಬುದು ದುರಾದೃಷ್ಟಕರ ವಿಚಾರ. ಕೃಷಿ ಸಮುದಾಯವನ್ನು ನಾಶಪಡಿಸುತ್ತಿರುವ ಬಿಜೆಪಿ ಸರ್ಕಾರವನ್ನು ಜೆಡಿಎಸ್ ಯಾವ ಕಾರಣಕ್ಕೆ ಬೆಂಬಲಿಸುತ್ತಿದೆ ಎಂಬುದೇ ನನಗೆ ಆಶ್ಚರ್ಯವಾಗುತ್ತಿದೆ ಎಂದು ತಿಳಿಸಿದ್ದಾರೆ. 

Stay up to date on all the latest ರಾಜಕೀಯ news
Poll
Farmers_ride_tractors1

ರೈತರು ದೆಹಲಿಯಲ್ಲಿ ತಮ್ಮ ಗಣರಾಜ್ಯೋತ್ಸವ ದಿನದ ಟ್ರಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಕೇ?


Result
ಹೌದು
ಬೇಡ
flipboard facebook twitter whatsapp