ಕರ್ನಾಟಕದ ಉಪಚುನಾವಣೆಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸದ ಬಿಜೆಪಿ: ಜೆಡಿಎಸ್ ಗೆ ಜಿಗಿಯಲಿದ್ದಾರಾ 'ತುಳಸಿ'?

ಭಾರತೀಯ ಜನತಾ ಪಕ್ಷ ಬಿಹಾರದಲ್ಲಿ ಎರಡನೇ ಹಂತದ ವಿಧಾನಸಭಾ ಚುನಾವಣೆಗೆ ಮತ್ತು ಐದು ರಾಜ್ಯಗಳಲ್ಲಿ ಉಪಚುನಾವಣೆಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಭಾನುವಾರ ಪ್ರಕಟಿಸಿದೆ. ಆದರೆ ರಾಜ್ಯದ ಶಿರಾ ಮತ್ತು ರಾಜರಾಜೇಶ್ವರಿ ನಗರಗಳ ಉಪಚುನಾವಣೆ ಅಭ್ಯರ್ಥಿಗಳನ್ನು ಪ್ರಕಟಿಸಿಲ್ಲ.
ತುಳಸಿ ಮುನಿರಾಜು ಗೌಡ
ತುಳಸಿ ಮುನಿರಾಜು ಗೌಡ

ಬೆಂಗಳೂರು: ಭಾರತೀಯ ಜನತಾ ಪಕ್ಷ ಬಿಹಾರದಲ್ಲಿ ಎರಡನೇ ಹಂತದ ವಿಧಾನಸಭಾ ಚುನಾವಣೆಗೆ ಮತ್ತು ಐದು ರಾಜ್ಯಗಳಲ್ಲಿ ಉಪಚುನಾವಣೆಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಭಾನುವಾರ ಪ್ರಕಟಿಸಿದೆ. ಆದರೆ ರಾಜ್ಯದ ಶಿರಾ ಮತ್ತು ರಾಜರಾಜೇಶ್ವರಿ ನಗರಗಳ ಉಪಚುನಾವಣೆ ಅಭ್ಯರ್ಥಿಗಳನ್ನು ಪ್ರಕಟಿಸಿಲ್ಲ.

ಮುಂಬರುವ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ  ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರ ನೇತೃತ್ವದಲ್ಲಿ ಶನಿವಾರ ಸಭೆ ಸೇರಿದ ನಂತರ ಪಕ್ಷವು ಹೆಸರುಗಳನ್ನು ಬಿಡುಗಡೆ ಮಾಡಿತು.

ಬಿಹಾರದಲ್ಲಿ ಎರಡನೇ ಹಂತದ ಚುನಾವಣೆಗೆ 46 ಅಭ್ಯರ್ಥಿಗಳ ಹೆಸರುಗಳು ಮತ್ತು ಛತ್ತೀಸ್‌ಗಡ, ಗುಜರಾತ್, ಜಾರ್ಖಂಡ್, ಮಣಿಪುರ ಮತ್ತು ಒಡಿಶಾದಲ್ಲಿ ಉಪಚುನಾವಣೆಗೆ 16 ಸ್ಥಾನಗಳ ಅಭ್ಯರ್ಥಿಗಳನ್ನು ಘೋಷಿಸಲಾಗಿದ್ದರೂ, ಕರ್ನಾಟಕದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿಲ್ಲ,

10 ದಿನಗಳ ಹಿಂದೆಯೇ 2 ಕ್ಷೇತ್ರಗಳ ಉಪಚುನಾವಣೆಗೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಅಭ್ಯರ್ಥಿಗಳ ಹೆಸರನ್ನು ಶಿಫಾರಸ್ಸು ಮಾಡಿದೆ, ರಾಜರಾಜೇಶ್ವರಿ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಬಿಜೆಪಿ ಸೇರಿರುವ ಮುನಿರತ್ನ ಕಣಕ್ಕಳಿಸಲು ಸ್ಥಳೀಯ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ, ಆದರೆ ಬಿಜೆಪಿ ಕೊನೆಯ ಕ್ಷಣದವರೆಗೂ ಅಭ್ಯರ್ಥಿ ಘೋಷಿಸುವ ಸಾಧ್ಯತೆಯಿಲ್ಲ ಎಂದು ಹೇಳಲಾಗುತ್ತಿದೆ.

2018ರ ಚುನಾವಣೆಯಲ್ಲಿ ಆರ್ ಆರ್ ನಗರದಿಂದ ಸ್ಪರ್ಧಿಸಿದ್ದ ತುಳಸಿ ಮುನಿರಾಜು ಟಿಕೆಟ್ ಆಕಾಂಕ್ಷಿಯಾಗಿದ್ದು, ಬಂಡಾಯ ಸಾಧ್ಯತೆಯಿಂದ ರಾಜ್ಯ ಬಿಜೆಪಿ ನಾಯಕರು ಆತಂಕಕ್ಕೊಳಗಾಗಿದ್ದಾರೆ. ಹೀಗಾಗಿ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದ ವರೆಗೂ ಕಾಯಬೇಕಾಗಿದೆ.

ಆದರೆ ಕಾಂಗ್ರೆಸ್ ಅಭ್ಯರ್ಥಿಗೆ ಈಗಾಗಲೇ ಬಿ ಫಾರಂ ನೀಡಲಾಗಿದೆ, ಇದೇ ವೇಳೆ ಮುನಿರತ್ನ ಮತ್ತು ತುಳಸಿ ಮುನಿರಾಜು ಗೌಡ ಬೆಂಬಲಿಗರು ಮನೆ ಮನೆಗೆ ತೆರಳಿ  ಪ್ರಚಾರ ಮಾಡುತ್ತಿದ್ದಾರೆ, ಒಂದು ವೇಳೆ ಬಿಜೆಪಿ ಟಿಕೆಟ್ ನಿರಾಕರಿಸಿದರೆ ತುಳಸಿ ಮುನಿರಾಜು ಗೌಡ ಜೆಡಿಎಸ್ ನಿಂದ ಸ್ಪರ್ಧಿಸುವ ಸಾಧ್ಯತೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com