ಆರ್.ಆರ್.ನಗರ ಟಿಕೆಟ್ ಹಂಚಿಕೆ ಗೊಂದಲ: ಸಿಎಂ ನಿವಾಸದಲ್ಲಿ ಸಚಿವರ ಸಭೆ, ಮುನಿರತ್ನಗೆ ಟಿಕೆಟ್ ನೀಡುವಂತೆ ಒತ್ತಾಯ

ಆರ್​​.ಆರ್​.ನಗರ ಉಪ ಚುನಾವಣೆ ನಾಮಪತ್ರ ಸಲ್ಲಿಸಲು ಕೇವಲ ನಾಲ್ಕು ದಿನ ಮಾತ್ರ ಬಾಕಿ ಉಳಿದಿದೆ. ಈ ನಡುವೆ ಮಾಜಿ ಶಾಸಕ ಮುನಿರತ್ನಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡುತ್ತಾ ಎಂಬುದು ಭಾರಿ ಚೆರ್ಚೆಗೆ ಗ್ರಾಸವಾಗಿದೆ.
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಆರ್​​.ಆರ್​.ನಗರ ಉಪ ಚುನಾವಣೆ ನಾಮಪತ್ರ ಸಲ್ಲಿಸಲು ಕೇವಲ ನಾಲ್ಕು ದಿನ ಮಾತ್ರ ಬಾಕಿ ಉಳಿದಿದೆ. ಈ ನಡುವೆ ಮಾಜಿ ಶಾಸಕ ಮುನಿರತ್ನಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡುತ್ತಾ ಎಂಬುದು ಭಾರಿ ಚೆರ್ಚೆಗೆ ಗ್ರಾಸವಾಗಿದೆ.

ಈ ನಡುವೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸರ್ಕಾರಿ ನಿವಾಸದಲ್ಲಿ ಕೆಲವು ಸಚಿವರು ಸಭೆ ನಡೆಸಿ ಮುನಿರತ್ನ ಅವರಿಗೆ ಟಿಕೆಟ್ ನೀಡುವಂತೆ ಮುಖ್ಯಮಂತ್ರಿಗೆ ಒತ್ತಾಯ ಮಾಡಿದ್ದಾರೆ.

ಡಿಸಿಎಂ ಗೋವಿಂದ ಕಾರಜಹೋಳ, ಸಚಿವ ರಮೇಶ್ ಜಾರಕಿಹೊಳಿ, ಎಸ್.ಟಿ.ಸೋಮಶೇಖರ್ ಸೇರಿದಂತೆ ಹಲವು ಪ್ರಮುಖ ನಾಯಕರು ಸಭೆ ನಡೆಸಿ ಇಂದು ಅಥವಾ ನಾಳೆಯೊಳಗೆ ಟಿಕೆಟ್ ಪ್ರಕಟಿಸುವಂತೆ ಒತ್ತಡ ಹೇರಿದ್ದಾರೆ.

ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಪ್ರಚಾರ ಆರಂಭಿಸಿದೆ. ಜೆಡಿಎಸ್ ಕೂಡ ಅಭ್ಯರ್ಥಿಯನ್ನು ಅಂತಿಮಗೊಳಿಸಿ ಬಿಜೆಪಿ ಅಭ್ಯರ್ಥಿ ಯಾರಾಗುತ್ತಾರೆ ಎಂಬುದನ್ನು ಕಾದು ನೋಡುತ್ತಿದ್ದಾರೆ. ಬಿಜೆಪಿಯಿಂದ ಮುನಿರತ್ನಗೆ ಟಿಕೆಟ್ ನೀಡದಿದ್ದರೆ ಜೆಡಿಎಸ್ ಮತ್ತು ಕಾಂಗ್ರೆಸ್ ಅವರನ್ನು ಪಕ್ಷಕ್ಕೆ ಕರೆದು ಚುನಾವಣೆಗೆ ಇಳಿಸುವ ಚಿಂತನೆಯನ್ನು ನಡೆಸಿವೆ.

ಮತ್ತೊಂದೆಡೆ ಬಿಜೆಪಿ ನಾಯಕ ತುಳಸಿ ಮುನಿರಾಜು ಬೆಂಬಲಿಗರು ಆರ್ ಆರ್ ನಗರದಲ್ಲಿ ಪ್ರಚಾರ ಆರಂಭಿಸಿದ್ದಾರೆ. ಇಬ್ಬರ ನಡುವಿನ ಸಂಘರ್ಷ ಮುನಿರತ್ನ ಗೆಲುವಿಗೆ ಅಡ್ಡಿಯಾಗಲಿದೆ ಎಂಬ ಆತಂಕವನ್ನು ಸಭೆಯಲ್ಲಿ ಸಚಿವರು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com