ಒಕ್ಕಲಿಗ ಸ್ವಾಮೀಜಿಗಳಿಂದ ಡಿಕೆ ಶಿವಕುಮಾರ್ ಭೇಟಿ: ಉಪ ಚುನಾವಣೆ ಫಲಿತಾಂಶದ ಮೇಲೆ ಪರಿಣಾಮ?

ಒಕ್ಕಲಿಗರ ಪ್ರಭಾವಿ ನಾಯಕ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ರಾಜ್ಯದಲ್ಲಿ ಉಪ ಚುನಾವಣೆ ಘೋಷಣೆಯಾಗಿದೆ, ಇದು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಅವರಿಗೆ ಸತ್ವ ಪರೀಕ್ಷೆಯಾಗಿದೆ
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ತುಮಕೂರು: ಒಕ್ಕಲಿಗರ ಪ್ರಭಾವಿ ನಾಯಕ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ರಾಜ್ಯದಲ್ಲಿ ಉಪ ಚುನಾವಣೆ ಘೋಷಣೆಯಾಗಿದೆ, ಇದು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಅವರಿಗೆ ಸತ್ವ ಪರೀಕ್ಷೆಯಾಗಿದೆ. 

ಶಿವಕುಮಾರ್ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ಮೇಲೆ ಒಕ್ಕಲಿಗ ಮಠಗಳ ಸ್ವಾಮೀಜಿಗಳು ಶಿವಕುಮಾರ್ ಅವರನ್ನು  ಭೇಟಿ ಮಾಡಿದ್ದರು, ಇದು ಉಪ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಪಟ್ಟನಾಯಕನಹಳ್ಳಿಯ ಸ್ಪಟಿಕಪುರಿ ಗುರುಗುಂಡ ಮಠದ ಶ್ರೀ ನಂಜಾವಧೂತ   ಸ್ವಾಮೀಜಿ ಸಮುದಾಯದ ಮುಖಂಡರು ಕಷ್ಟದಲ್ಲಿ ಸಿಲುಕಿದಾಗ ಅವರ ಬೆನ್ನೆಲುಬಾಗಿ ನಿಲ್ಲುತ್ತಾರೆ. ಡಿವಿ ಸದಾನಂದಗೌಡ 2012 ರಲ್ಲಿ ಸಿಎಂ ಹುದ್ದೆಯಿಂದ ಕೆಳಗಿಳಿಸಿದಾಗ
ಸ್ವಾಮೀಜಿಗಳು ರಸ್ತೆಗಿಳಿದು ಪ್ರತಿಭಟಿಸಿದ್ದರು. ಶಿವಕುಮಾರ್ ಮನೆಗೆ ಭೇಟಿ ನೀಡಿ ನೈತಿಕ ಬೆಂಬಲ ನೀಡಿದ್ದರು.

ಈ ಧಾರ್ಮಿಕ ಮುಖಂಡರು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಕುಟುಂಬಕ್ಕೂ ಆಪ್ತರಾಗಿದ್ದು. ದಿವಂಗತ ಶಾಸಕ ಬಿ ಸತ್ಯನಾರಾಯಣ ಅವರು 2018 ರಲ್ಲಿ ವಿಧಾನಸಭೆ ಚುನಾವಣೆಗೆ ನಿಂತಿದ್ದಾಗ ಆಶೀರ್ವದಿಸಿದ್ದರು. ಇದು ಕಾಂಗ್ರೆಸ್ ನ ಟಿಬಿ ಜಯಚಂದ್ರ ಅವರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಯಿತ್ತು, ಆದರೆ ಶಿವಕುಮಾರ್ ಕಾರಣದಿಂದ ಶ್ರೀಗಳು ಜಯಚಂದ್ರ ಅವರಿಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಇನ್ನೂ ಆದಿ ಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಕೂಡ ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ಉಪ ಚುನಾವಣೆ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ನಿಗದಿತ ಪ್ರದೇಶದಲ್ಲಿ ಕುಂಚಟಿಗ ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು ಪ್ರಭಾವ ಬೀರುವ ಸಾಧ್ಯತೆಯಿದೆ.

ಆದರೆ ಸಿಎಂ ಯಡಿಯೂರಪ್ಪ ಪುತ್ರವಿಜಯೇಂದ್ರ ಶಿರಾ ಕ್ಷೇತ್ರಕ್ಕೆ ನೀಡಿದ ಮೊದಲ ಭೇಟಿಯಲ್ಲಿ ಸ್ವಾಮೀಜಿ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು.  ಉಪ ಚುನಾವಣೆಯಲ್ಲಿ ಒಕ್ಕಲಿಗರ ಪ್ರಾಬಲ್ಯ ಅಧಿಕವಾಗಿದೆ, ಶಿರಾ ಮತ್ತು ಆರ್ ಆರ್ ನಗರ ಕ್ಷೇತ್ರಗಳಿಗೆ ಕಾಂಗ್ರೆಸ್ ಒಕ್ಕಲಿಗ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ,  ಆರ್ ಆರ್ ನಗರಕ್ಕೆ ಒಕ್ಕಲಿಗ ಅಭ್ಯರ್ಥಿ ಡಿಕೆ ರವಿ ಪತ್ನಿ ಕುಸುಮಾ ಅವರನ್ನು ಕಣಕ್ಕಿಳಿಸಿದೆ.

ಶಿರಾ ಮತ್ತು ಆರ್ ಆರ್ ನಗರ ಕ್ಷೇತ್ರಗಳಲ್ಲಿ ಗಣನೀಯ ಪ್ರಮಾಣದಲ್ಲಿ ಒಕ್ಕಲಿಗ ಮತದಾರರಿದ್ದಾರೆ. ಶಿರಾದಲ್ಲಿ ಕುಂಚಿಟಿಗ ಒಕ್ಕಲಿಗ ಸಮುದಾಯದ ಸತ್ಯನಾರಾಯಣ ಗೆಲುವು   ಕಂಡಿದ್ದರು, ಆರ್ ಆರ್ ನಗರದಲ್ಲಿ ಕಾಂಗ್ರೆಸ್ ನ ಮುನಿರತ್ನ ಗೆದ್ದಿದ್ದರು.  ಎಚ್ ಡಿ ದೇವೇಗೌಡ ತುಮಕೂರು ಮತ್ತಿ ನಿಖಿಲ್ ಕುಮಾರಸ್ವಾಮಿ 2019 ರ ಲೋಕಸಭೆ ಚುನಾವಣೆಯಲ್ಲಿ ಸೋಲನುಭವಿಸಿದ್ದರು, ಈ ಎರಡು ಕ್ಷೇತ್ರಗಳು ಒಕ್ಕಲಿಗರ ಪ್ರಬಲ ಕ್ಷೇತ್ರಗಳು ಹೀಗಿದ್ದರೂ ಅವರು ಸೋತರು ಎಂದು ಸಿದ್ದರಾಮಯ್ಯ ನಿನ್ನೆ ಹೇಳಿಕೆ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com