ಶಿರಾ, ಆರ್ ಆರ್ ನಗರ ಉಪ ಚುನಾವಣೆ: ಜೆಡಿಎಸ್ ಗೆಲ್ಲುವ ವಿಶ್ವಾಸದಲ್ಲಿ ಎಚ್ ಡಿಕೆ

ಕಳೆದ ವರ್ಷ ನಡೆದ ಎಲ್ಲಾ 15 ಉಪ ಚುನಾವಣೆಯಲ್ಲಿ ಜೆಡಿಎಸ್ ಸೋಲು ಕಂಡಿದ್ದು, ಇದೀಗ ನಡೆಯಲಿರುವ ಶಿರಾ ಮತ್ತು ರಾಜರಾಜೇಶ್ವರಿ ನಗರ ಉಪ ಚುನಾವಣೆ ಬಗ್ಗೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಆತಂಕಗೊಂಡಿದ್ದಾರೆ.
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಕಳೆದ ವರ್ಷ ನಡೆದ ಎಲ್ಲಾ 15 ಉಪ ಚುನಾವಣೆಯಲ್ಲಿ ಜೆಡಿಎಸ್ ಸೋಲು ಕಂಡಿದ್ದು, ಇದೀಗ ನಡೆಯಲಿರುವ ಶಿರಾ ಮತ್ತು ರಾಜರಾಜೇಶ್ವರಿ ನಗರ ಉಪ ಚುನಾವಣೆ ಬಗ್ಗೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಆತಂಕಗೊಂಡಿದ್ದಾರೆ.

ಶಿರಾ ಕ್ಷೇತ್ರದ ಅಭ್ಯರ್ಥಿ ದಿವಂಗತ ಶಾಸಕ ಬಿ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಕೋವಿಡ್-19 ನಿಂದ ಆಸ್ಪತ್ರೆಯಲ್ಲಿರುವುದು ಮತ್ತು ಆರ್ ಆರ್ ನಗರಕ್ಕೆ ಇನ್ನೂ ಅಭ್ಯರ್ಥಿ ಹೆಸರನ್ನು ಅಂತಿಮಗೊಳಿಸದಿರುವುದು ಅವರಲ್ಲಿ ಕಳವಳ ಮೂಡಿಸಿದೆ.

ಆದಾಗ್ಯೂ, ಈ ಅಂಶಗಳು ಪಕ್ಷದ ನೈತಿಕತೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸೋಮವಾರ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಕುಮಾರಸ್ವಾಮಿ, ಕಲಬುರಗಿ ದಕ್ಷಿಣ ಚುನಾವಣೆಯಲ್ಲಿ ಆದ್ದಂತೆ ಶಿರಾದಲ್ಲಿಯೂ ಆಗಲಿದೆ. ಶಾಸಕ ಚಂದ್ರಶೇಖರ್ ಪಾಟೀಲ್ ರೆವೂರ್ ಮೃತಪಟ್ಟ ನಂತರ ಅವರ ಪತ್ನಿ ಅರುಣಾ ಪಾಟೀಲ್ ರೆವೂರ್ ಅವರನ್ನು ಗೆಲ್ಲಿಸಿಕೊಂಡು ಬರುವಲ್ಲಿ ಜೆಡಿಎಸ್ ಯಶಸ್ವಿಯಾಗಿತ್ತು. ಆದೇ ರೀತಿ ಶಿರಾದಲ್ಲಿಯೂ ಜೆಡಿಎಸ್ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ. ಕಾರ್ಯಕರ್ತರು ಪ್ರಚಾರ ಆರಂಭಿಸಿದ್ದಾರೆ. ಶಿರಾದಲ್ಲಿ ನಮ್ಮ ಪ್ರಾಬಲ್ಯವಿದ್ದು, ಖಂಡಿತ ಗೆಲುವು ಸಾಧಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

 ಕಲ್ಕರೆ ರಾಜು ಪಕ್ಷ ತೊರೆದಿರುವುದರಿಂದ ಯಾವುದೇ ನಷ್ಟವಿಲ್ಲ, ಟಿಕೆಟ್ ದೊರೆಯದ ಕಾರಣ ಅವರು ಪಕ್ಷ ತೊರೆದಿದ್ದಾರೆ ಎಂದು ಹೇಳಿದ ಅವರು, ಮುಂದಿನ ಕೆಲ ದಿನಗಳಲ್ಲಿ ಆರ್ ಆರ್ ನಗರ ಕ್ಷೇತ್ರದ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುವುದು ಎಂದು ಎಚ್ ಡಿ ಕುಮಾರಸ್ವಾಮಿ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com