ಬೆಳಗಾವಿ ಉಪ ಚುನಾವಣೆ ಟಿಕೆಟ್ ಆಕಾಂಕ್ಷಿಯಲ್ಲ: ರಮೇಶ್ ಜಾರಕಿಹೊಳಿ ಪುತ್ರ ಅಮರ್ ನಾಥ್

ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಪುತ್ರ ಅಮರ್ ನಾಥ್ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.ಈ ಕುರಿತಂತೆ ಪ್ರತಿಕ್ರಿಯಿಸಿರುವ ಅಮರ್ ನಾಥ್, ನಾನು ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಟಿಕೆಟ್ ಆಕಾಂಕ್ಷಿಯಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.
ಅಮರ್ ನಾಥ್
ಅಮರ್ ನಾಥ್

ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಪುತ್ರ ಅಮರ್ ನಾಥ್ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ಕುರಿತಂತೆ ಪ್ರತಿಕ್ರಿಯಿಸಿರುವ ಅಮರ್ ನಾಥ್, ನಾನು ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಟಿಕೆಟ್ ಆಕಾಂಕ್ಷಿಯಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ರಾಜಕೀಯದಲ್ಲಿ ನಾನಿನ್ನು ಬಾಲಕನಾಗಿದ್ದು, ಇತ್ತೀಚಿಗಷ್ಟೇ ಬಿಜೆಪಿ ಸೇರಿದ್ದೇನೆ. ಮೊದಲು ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಬೇಕಾಗಿದೆ. ನಮ್ಮ ತಂದೆ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದಾರೆ.  ಗೋಕಾಕ್ ಜನರ ಕುಂದುಕೊರತೆಗಳನ್ನು ನೋಡಿಕೊಳ್ಳುವ ಮತ್ತು ಪರಿಹರಿಸುವ ಜವಾಬ್ದಾರಿ ತಮ್ಮ ಮೇಲಿದೆ ಎಂದು ಅವರು ಹೇಳಿದ್ದಾರೆ.

ದಿವಂಗತ ಸುರೇಶ್ ಅಂಗಡಿ ಅವರು ರೈಲ್ವೆ ಖಾತೆ ಸಹಾಯಕ ಸಚಿವರಾಗಿ ದೇಶ ಹಾಗೂ ರಾಜ್ಯಕ್ಕೆ ಅಸಾಧಾರಣ ಕೆಲಸ ಮಾಡಿದ್ದಾರೆ. ಅಂಗಡಿ ಕುಟುಂಬಕ್ಕೆ ಅನ್ಯಾಯ ಮಾಡಲು ಎಂಬುದನ್ನು ಸ್ಪಷ್ಟಪಡಿಸುತ್ತೇನೆ. ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಪಕ್ಷದ ಎಲ್ಲಾ ಕಾರ್ಯಕರ್ತರು ಒಗ್ಗೂಡಿ ಕೆಲಸ ಮಾಡುವುದಾಗಿ ಅವರು ತಿಳಿಸಿದ್ದಾರೆ.

ರಾಜಕೀಯದಲ್ಲಿ ಬೆಳೆಯಲು ಇನ್ನೂ ಸಾಕಷ್ಟು ಸಮಯ ಇರುವುದಾಗಿ ಅಮರ್ ನಾಥ್ ಹೇಳಿದ್ದಾರೆ.  ಅಮರ್ ನಾಥ್ ಕರ್ನಾಟಕ ಹಾಲು ಮಹಾಮಂಡಳಿಯ ನಿರ್ದೇಶಕರಾಗಿಯೂ ಕೆಲಸ ಮಾಡುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com