ಬಿಜೆಪಿಗೆ ಖುಷ್ಬೂ ಎಂಟ್ರಿಯೊಂದಿಗೆ ಸಿಟಿ ರವಿಗೆ ರಾಷ್ಟ್ರೀಯ ಮಟ್ಟದಲ್ಲಿ ಶುಭಾರಂಭ!

ನೂತನವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಸಿಟಿ ರವಿ, ತಮಿಳುನಾಡಿನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸಂಪೂರ್ಣ ಜವಾಬ್ದಾರಿಯನ್ನು ಪಡೆಯುವ ಸಾಧ್ಯತೆಯಿದೆ.
ಸಿ ಟಿ ರವಿ ಸಮ್ಮುಖದಲ್ಲಿ ಖುಷ್ಬೂ ಬಿಜೆಪಿ ಸೇರ್ಪಡೆ
ಸಿ ಟಿ ರವಿ ಸಮ್ಮುಖದಲ್ಲಿ ಖುಷ್ಬೂ ಬಿಜೆಪಿ ಸೇರ್ಪಡೆ

ಬೆಂಗಳೂರು: ನೂತನವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಸಿಟಿ ರವಿ, ತಮಿಳುನಾಡಿನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸಂಪೂರ್ಣ ಜವಾಬ್ದಾರಿಯನ್ನು ಪಡೆಯುವ ಸಾಧ್ಯತೆಯಿದೆ.

ಮಾಜಿ ಕಾಂಗ್ರೆಸ್ ವಕ್ತಾರೆ ಮತ್ತು ನಟಿ ಖುಷ್ಬೂ ಸುಂದರ್ ಅವರನ್ನು ಸೋಮವಾರ ನವದೆಹಲಿಯಲ್ಲಿ ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಸಿ. ಟಿ. ರವಿಗೆ ರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಆರಂಭ ಸಿಕ್ಕಿದೆ ಎಂದು ಪಕ್ಷದ ಮೂಲಗಳು ಹೇಳಿವೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ನಂತರ ಸಿ. ಟಿ. ರವಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಪಕ್ಷದ ಕೆಲಸದ ಕಡೆಗೆ ಗಮನ ಹರಿಸಿದ್ದಾರೆ. 

ಕಳೆದ ವಾರ ನವದೆಹಲಿಗೆ ಭೇಟಿ ನೀಡಿದ್ದ ವೇಳೆಯಲ್ಲಿ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ ಸಿಟಿ ರವಿಗೆ, ಕರ್ನಾಟಕ ಮತ್ತಿತರ ದಕ್ಷಿಣ ರಾಜ್ಯಗಳಲ್ಲಿ ಪಕ್ಷದ ಕೆಲಸ ನೋಡಿಕೊಳ್ಳುವಂತೆ ವರಿಷ್ಠರು  ಹೇಳಿರುವ ಬಗ್ಗೆ ವರದಿಯಾಗಿದೆ.

 ಆಯಾ ರಾಜ್ಯಗಳಿಗೆ ಪ್ರಧಾನ ಕಾರ್ಯದರ್ಶಿ ನೇಮಕ ಆಗುವವರೆಗೂ ಇದು ತಾತ್ಕಾಲಿಕ ವ್ಯವಸ್ಥೆಯಾಗಿರುವುದಾಗಿ ತಿಳಿದುಬಂದಿದೆ. ಅಕ್ಟೋಬರ್ 17 ರಂದು ಸಿ. ಟಿ. ರವಿ ಚೆನ್ನೈಗೆ ಭೇಟಿ ನೀಡಲಿದ್ದು, ತಮಿಳು ನಾಡು ಬಿಜೆಪಿ ಮುಖಂಡರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ಸಿ. ಟಿ. ರವಿ ಅವರನ್ನು ತಮಿಳುನಾಡಿಗೆ ತಾತ್ಕಾಲಿಕ ಉಸ್ತುವಾರಿಯನ್ನಾಗಿ ನೇಮಿಸಿದ ವಾರದ ಬಳಿಕ ಖುಷ್ಬೂ ಬಿಜೆಪಿಗೆ ಸೇರ್ಪಡೆಯಾದದ್ದು ಸಿಟಿ ರವಿಗೆ ಶುಭಾ ರಂಭ ಎನ್ನಲಾಗಿದೆ. ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಕೂಡಾ ಬಿಜೆಪಿಗೆ ಇತ್ತೀಚಿಗೆ ಸೇರ್ಪಡೆಯಾಗಿದ್ದರು.

2016ರಲ್ಲಿ ಬಿಎಲ್ ಸಂತೋಷ್ ಅವರನ್ನು ತಮಿಳುನಾಡು ಮತ್ತು ಕೇರಳ ಚುನಾವಣೆಯ ಉಸ್ತುವಾರಿ ವಹಿಸಲಾಗಿತ್ತು. ನಳಿನ್ ಕುಮಾರ್ ಕಟೀಲ್ ಮತ್ತು ಸಿಟಿ ರವಿ ಕೂಡಾ ಸಂತೋಷ್ ಅವರೊಂದಿಗೆ ಕೆಲಸ ಮಾಡಿದ್ದರು. ಈ ಅನುಭವ ತಮಿಳುನಾಡಿನ ಚುನಾವಣೆ ವಹಿಸಿಕೊಳ್ಳಲು ಸಿಟಿ ರವಿಗೆ ನೆರವಾಗಿದೆ ಎಂದು ಪಕ್ಷದ ಮೂಲಗಳು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿವೆ.

ನಾಲ್ಕು ಬಾರಿ ಚಿಕ್ಕಮಗಳೂರಿನಿಂದ ಶಾಸಕರಾಗಿರುವ ಸಿ. ಟಿ. ರವಿಗೆ ಆರ್ ಎಸ್ ಎಸ್ ಬೆಂಬಲವಿದೆ. ಮೊದಲಿಗೆ ಕಾಂಗ್ರೆಸ್ ಪ್ರಾಬಲ್ಯವಿದ್ದ ಚಿಕ್ಕಮಗಳೂರನ್ನು ಸಿಟಿ ರವಿ ಕೇಸರಿ ಪ್ರಾಬಲ್ಯವಿರುವಂತೆ ಮಾಡಿದ್ದಾರೆ ಎಂಬುದು ಮೂಲಗಳು ಹೇಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com