ರಾಮುಲು-ಸುಧಾಕರ್ ಬಿಕ್ಕಟ್ಟಿಗೆ ತಾತ್ಕಾಲಿಕ ವಿರಾಮ: ಮುಖ್ಯಮಂತ್ರಿ ಜತೆ ಸಮಾಲೋಚನೆ

ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ನಡುವಿನ ವಿವಾದಕ್ಕೆ ತಾತ್ಕಾಲಿಕ ತೆರೆ ಬಿದ್ದಿದೆ.
ರಾಮುಲು, ಬಿಎಸ್ ಯಡಿಯೂರಪ್ಪ, ಸುಧಾಕರ್
ರಾಮುಲು, ಬಿಎಸ್ ಯಡಿಯೂರಪ್ಪ, ಸುಧಾಕರ್

ಬೆಂಗಳೂರು: ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ನಡುವಿನ ವಿವಾದಕ್ಕೆ ತಾತ್ಕಾಲಿಕ ತೆರೆ ಬಿದ್ದಿದೆ.

ಇಂದು ತಮ್ಮನ್ನು ಭೇಟಿಯಾದ ಸಚಿವರ ಜತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮಾಲೋಚನೆ ಮಾಡಿ ಬಿಕ್ಕಟ್ಟು ನಿವಾರಿಸುವ ಪ್ರಯತ್ನ ಮಾಡಿದರು. ಉಪ ಚುನಾವಣೆ ಸಂದರ್ಭದಲ್ಲಿ ಸರ್ಕಾರದಲ್ಲಿ ಯಾವುದೇ ಸಮಸ್ಯೆ ಉಂಟು ಮಾಡುವುದು ಸರಿಯಲ್ಲ. ಒಟ್ಟಿಗೆ ಕೆಲಸ ಮಾಡಿ ಎಂದು ಸಲಹೆ ನೀಡಿದರು ಎನ್ನಲಾಗಿದೆ. ಈ ಇಬ್ಬರೂ ಸಚಿವರು ಪರಸ್ಪರ ಸೌಹಾರ್ದಯುತವಾಗಿ ಮುಖ್ಯಮಂತ್ರಿ ಅವರ ಜತೆ ಸಮಾಲೋಚನೆ ನಡೆಸಿದರು.

ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಶ್ರೀರಾಮುಲು, ಈ ಹಿಂದೆ ನನಗೆ ಸಮಾಜ ಕಲ್ಯಾಣ ಖಾತೆ ನೀಡಬೇಕೆಂದು ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿಕೊಂಡಿದ್ದೆ. ಅದರಂತೆ ಯಡಿಯೂರಪ್ಪ ಅವರು ಆ ಖಾತೆಯನ್ನ ನೀಡಿದ್ದಾರೆ. ಮಾಧ್ಯಮಗಳಲ್ಲಿ ಬಿತ್ತರವಾಗಿರುವಂತೆ ಯಾವುದೇ ಅಸಮಾಧಾನ ಇಲ್ಲ ಎಂದು ಹೇಳಿದ್ದಾರೆ. 

ಕೊರೊನಾ ಕಾಲದಲ್ಲಿ ವೈದ್ಯಕೀಯ ಮತ್ತು ಆರೋಗ್ಯ ಇಲಾಖೆ ಒಬ್ಬರೇ ಬಳಿ ಇರೋದು ಉತ್ತಮ. ಹಾಗಾಗಿ ಆರೋಗ್ಯ ಇಲಾಖೆ ಖಾತೆಯನ್ನ ಸೋದರರಾಗಿರುವ ಸುಧಾಕರ್ ಅವರಿಗೆ ನೀಡಲಾಗಿದೆ. ಸುಧಾಕರ್ ವೈದ್ಯರಾಗಿದ್ದು, ಆರೋಗ್ಯ ಇಲಾಖೆಯನ್ನ ಉತ್ತಮವಾಗಿ ನಿರ್ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. 

ಬಳಿಕ ಮಾತನಾಡಿದ ಸುಧಾಕರ್ ಅವರು, ಬಿಹಾರ ಮತ್ತು ಉಪ ಚುನಾವಣೆ ಹಿನ್ನೆಲೆ ಸಂಪುಟ ವಿಸ್ತರಣೆಗೆ ಹೈಕಮಾಂಡ್ ನಿಂದ ಗ್ರೀನ್ ಸಿಗ್ನಲ್ ದೊರೆತಿಲ್ಲ. ಈ ಹಿನ್ನೆಲೆ ಕೆಲ ತಾಂತ್ರಿಕೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಖಾತೆಗಳ ಬದಲಾವಣೆಯಾಗಿದೆ. ಶ್ರೀರಾಮುಲು ಅಣ್ಣನವರು ರಾಜಕೀಯದಲ್ಲಿ ನನಗಿಂತ ಹಿರಿಯರು. ಸಮಾಜ ಕಲ್ಯಾಣ ಅನ್ನೋದು ಪ್ರಬಲ ಖಾತೆ. ಮುಖ್ಯಮಂತ್ರಿಗಳ ಖಾತೆಯ ಬದಲಾವಣೆ ಬಗ್ಗೆ ಒಂದು ತಿಂಗಳಿನಿಂದ ನಮ್ಮೊಂದಿಗೆ ಚರ್ಚೆ ನಡೆಸಿದ್ದರು. ಸಮಾಜದ ಸ್ವಾಸ್ಥ್ಯವನ್ನ ಚೆನ್ನಾಗಿ ಮಾಡಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಹೊಣೆಯನ್ನ ಶ್ರೀರಾಮುಲು ಅವರಿಗೆ ನೀಡಲಾಗಿದೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com