2020ರಲ್ಲೇ ಗ್ರಾಮ ಪಂಚಾಯತ್ ಚುನಾವಣೆ ನಡೆಸಬೇಕು: ಸರ್ಕಾರಕ್ಕೆ ಆಯೋಗದ ಸೂಚನೆ

ರಾಜ್ಯ ಸರ್ಕಾರ ಮತ್ತೆ ಮತ್ತೆ ಗ್ರಾಮ ಪಂಚಾಯತ್ ಚುನಾವಣೆಯನ್ನು ಮುಂದೂಡುತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರಕ್ಕೆ ಪತ್ರ ಬರೆದಿರುವ ರಾಜ್ಯ ಚುನಾವಣಾ ಆಯೋಗ 2020 ರಲ್ಲಿ ಕಡ್ಡಾಯವಾಗಿ ಚುನಾವಣೆ ನಡೆಸುವಂತೆ ಸೂಚಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯ ಸರ್ಕಾರ ಮತ್ತೆ ಮತ್ತೆ ಗ್ರಾಮ ಪಂಚಾಯತ್ ಚುನಾವಣೆಯನ್ನು ಮುಂದೂಡುತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರಕ್ಕೆ ಪತ್ರ ಬರೆದಿರುವ ರಾಜ್ಯ ಚುನಾವಣಾ ಆಯೋಗ 2020 ರಲ್ಲಿ ಕಡ್ಡಾಯವಾಗಿ ಚುನಾವಣೆ ನಡೆಸುವಂತೆ ಸೂಚಿಸಿದೆ.

ಕೊರೋನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಗ್ರಾಮ ಪಂಚಾಯತ್ ಚುನಾವಣೆಯನ್ನು ಮುಂದೂಡುತ್ತಾ ಬಂದಿದೆ, ಆದರೆ 2020ರಲ್ಲೆ ಚುನಾವಣೆ ನಡೆಸಬೇಕು ಎಂದು ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದಾರೆ.

ಜೂನ್ ತಿಂಗಳಲ್ಲೇ ಗ್ರಾಮ ಪಂಚಾಯತ್ ಸದಸ್ಯರ ಅಧಿಕಾರಾವಧಿ ಮುಗಿದಿದ್ದು, ಸರ್ಕಾರ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿದೆ, ಆದರೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿದ ಆರು ತಿಂಗಳೊಳಗೆ ಚುನಾವಣೆ ನಡೆಸುವುದು ಕಡ್ಡಾಯವಾಗಿದೆ, ಈ ಸಂಬಂಧ ಹೈಕೋರ್ಟ್ ಗೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕೂಡ ಬಾಕಿ ಉಳಿದಿದೆ.

ಮುಂದಿನ ವರ್ಷದ ಆರಂಭದ ವೇಳೆಗೆ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಗಳ ಅಧಿಕಾರವಧಿ ಕೂಡ ಅಂತ್ಯವಾಗಲಿದೆ,  ಹೀಗಾಗಿ ಅವುಗಳಿಗೂ ಕೂಡ ಚುನಾವಣೆ ನಡೆಸುವ ಅಗತ್ಯವಿದೆ,  ಹಲವು ಹೊಸ ತಾಲೂಕುಗಳು ರಚನೆಯಾಗಿದ್ದು, ಚುನಾವಣಾ ಆಯೋಗ ಈ ಪಂಚಾಯತ್ ಗಳಿಗೆ ಮೀಸಲಾತಿ ನಿಗದಿ ಮಾಡಬೇಕಾಗಿದೆ, ಇದರ ಜೊತೆಗೆ ಬಿಬಿಎಂಪಿ ಚುನಾವಣೆ ಕೂಡ ನಡೆಸಬೇಕಾಗಿದೆ, ಎಲ್ಲಾ ಚುನಾವಣೆಗಳನ್ನು 2021ರಲ್ಲಿ ನಡೆಸಲು ಸಾಧ್ಯವಿಲ್ಲ,  ಹೀಗಾಗಿ ಗ್ರಾಮ ಪಂಚಾತ್ ಚುನಾವಣೆಯನ್ನು ಮತ್ತೆ ಮುಂದೂಡದೇ 2020ರಲ್ಲಿಯೆ ನಡೆಸಬೇಕು ಎಂದು ಚುನಾವಣಾ ಆಯೋಗ ಸರ್ಕಾರಕ್ಕೆ ಪತ್ರದಲ್ಲಿ ಸೂಚಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com