ಮನುಷ್ಯ ದೊಡ್ಡ ಹುದ್ದೆಗೆ ಹೋದಂತೆ ಗರ್ವ ಬರಬಾರದು: ಸಿ.ಟಿ.ರವಿಗೆ ಕುಮಾರಸ್ವಾಮಿ ಟಾಂಗ್

ಮನುಷ್ಯ ದೊಡ್ಡ ಹುದ್ದೆಗೆ ಹೋದಂತೆಲ್ಲ ಬುದ್ದಿಮತ್ತೆ ಕೂಡ ಹೆಚ್ಚಾಗಬೇಕೇ ವಿನಃ ಗರ್ವ ಬರಬಾರದು. ಆದರೆ, ಸಿ.ಟಿ.ರವಿಯವರ ಮಾತುಗಳು ಆ ಹಂತ ತಲುಪಿದಂತೆ ಭಾಸವಾಗುತ್ತದೆ. ಬಳಸುವ ಭಾಷೆ ಅದನ್ನು ಪ್ರತಿಧ್ವನಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
ಎಚ್ ಡಿ ಕುಮಾರಸ್ವಾಮಿ-ಸಿಟಿ ರವಿ
ಎಚ್ ಡಿ ಕುಮಾರಸ್ವಾಮಿ-ಸಿಟಿ ರವಿ

ಬೆಂಗಳೂರು: ಮನುಷ್ಯ ದೊಡ್ಡ ಹುದ್ದೆಗೆ ಹೋದಂತೆಲ್ಲ ಬುದ್ದಿಮತ್ತೆ ಕೂಡ ಹೆಚ್ಚಾಗಬೇಕೇ ವಿನಃ ಗರ್ವ ಬರಬಾರದು. ಆದರೆ, ಸಿ.ಟಿ.ರವಿಯವರ ಮಾತುಗಳು ಆ ಹಂತ ತಲುಪಿದಂತೆ ಭಾಸವಾಗುತ್ತದೆ. ಬಳಸುವ ಭಾಷೆ ಅದನ್ನು ಪ್ರತಿಧ್ವನಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕಾರ್ಯದರ್ಶಿ ಸ್ಥಾನಕ್ಕೆ ಅಂದಿನ ಬಿಜೆಪಿ ಅಧ್ಯಕ್ಷ ಹಾಗೂ ಗೃಹ ಸಚಿವ ಅಮಿತ್ ಶಾ ಪುತ್ರ ರಾತ್ರೋರಾತ್ರಿ ಬಂದು ಕುಳಿತಿದ್ದಾರೆ. ಜಯ್ ಶಾ ಎಷ್ಟು ಸೆಂಚುರಿ, ಎಲ್ಲಿ ಬಾರಿಸಿದ್ದಾರೆ? ಸಿ.ಟಿ.ರವಿಗೆ ಅಲ್ಪಜ್ಞಾನ ಇರುವುದಕ್ಕೆ ನನಗೆ ಕನಿಕರ. ಜಯ್ ಶಾ ಪದವಿ ಕೂಡ ಅವರಪ್ಪನ ಬಳುವಳಿ ಎಂದು ಹೇಳುವ ಧೈರ್ಯ ರವಿಗೆ ಇಲ್ಲ ಎಂದು ಕುಟುಕಿದ್ದಾರೆ.

ಸಿ.ಟಿ.ರವಿಗೆ ಬಹುಶಃ ತನ್ನದೇ ಪಕ್ಷದಲ್ಲಿ ಹೆಮ್ಮರವಾಗುತ್ತಿರುವ ವಂಶವಾಹಿ ರಾಜಕಾರಣದ ವಿರುದ್ಧ ಕೋಪ ಇರಬೇಕು. ಅದಕ್ಕಾಗಿ ಈ ವಿಚಾರ ಕೆಣಕಿದ್ದಾರೆ ಎಂದೆನಿಸುತ್ತಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಸಿ.ಟಿ.ರವಿಯವರು ಮಂತ್ರಿ ಪದವಿ ಹೋದದ್ದಕ್ಕೆ ಅಥವಾ ಭವಿಷ್ಯದಲ್ಲಿ ವಂಶವಾಹಿ ರಾಜಕಾರಣದಲ್ಲಿ ಬೆಳೆದು, ಪಕ್ಷದಲ್ಲಿ ತನ್ನ ಬುಡಕತ್ತರಿಸುವ ಆತಂಕದಿಂದ ಹಾಗೂ ಬಿಜೆಪಿಯಲ್ಲಿನ ವೈರುದ್ಯಗಳ ಬಗ್ಗೆ ಧ್ವನಿ ಎತ್ತಲು ಧೈರ್ಯ ಇಲ್ಲದೇ ಬೇರೆ ಪಕ್ಷಗಳ ವಂಶವಾಹಿ ಆಡಳಿತದ ಬಗೆಗೆ ಪರೋಕ್ಷವಾಗಿ ಮಾತನಾಡುತ್ತಿದ್ದಾರೆ ಎಂದು ಭಾಸವಾಗುತ್ತಿದೆ ಎಂದು ಮಾಜಿ ಸಿಎಂ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com