ದಕ್ಷಿಣ ಭಾರತದಲ್ಲಿ ಪಕ್ಷ ಬಲಪಡಿಸಲು ಕಾರ್ಯ ಆರಂಭಿಸಿದ ಸಿ.ಟಿ. ರವಿ

ದಕ್ಷಿಣ ಭಾರತದ ಬಿಜೆಪಿ ತಾತ್ಕಾಲಿಕ ಉಸ್ತುವಾರಿಯಾಗಿ ನೇಮಕಗೊಂಡಿರುವ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿಯವರು. ದಕ್ಷಿಣ ಭಾರತದಲ್ಲಿ ಪಕ್ಷವನ್ನು ಬುಡದಿಂದ ಬಲಪಡಿಸಲು ಕಾರ್ಯತಂತ್ರಗಳನ್ನು ರೂಪಿಸಿದ್ದು, ಇದರಂತೆ ಚೆನ್ನೈ ಮೂಲಕ ತಮ್ಮ ಪ್ರವಾಸವನ್ನು ಆರಂಭಿಸಿದ್ದಾರೆ. 
ಸಿಟಿ ರವಿ
ಸಿಟಿ ರವಿ

ಬೆಂಗಳೂರು: ದಕ್ಷಿಣ ಭಾರತದ ಬಿಜೆಪಿ ತಾತ್ಕಾಲಿಕ ಉಸ್ತುವಾರಿಯಾಗಿ ನೇಮಕಗೊಂಡಿರುವ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿಯವರು. ದಕ್ಷಿಣ ಭಾರತದಲ್ಲಿ ಪಕ್ಷವನ್ನು ಬುಡದಿಂದ ಬಲಪಡಿಸಲು ಕಾರ್ಯತಂತ್ರಗಳನ್ನು ರೂಪಿಸಿದ್ದು, ಇದರಂತೆ ಚೆನ್ನೈ ಮೂಲಕ ತಮ್ಮ ಪ್ರವಾಸವನ್ನು ಆರಂಭಿಸಿದ್ದಾರೆ. 

ಚೆನ್ನೈಗೆ ಗುರುವಾರ ಭೇಟಿ ನೀಡಿದ ಸಿಟಿ ರವಿಯವರು, ಶುಕ್ರವಾರ ಅಲ್ಲಿನ ಬಿಜೆಪಿ ಕಚೇರಿಗೆ ಭೇಟಿ ನೀಡಿ ನಾಯಕರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಮುಂದಿನ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತಮಿಳುನಾಡಿನಲ್ಲಿ ಪಕ್ಷವನ್ನು ಬಲಪಡಿಸುವತ್ತ ಗಮನ ಹರಿಸಬೇಕೆಂದು ಸೂಚಿಸಿದ್ದಾರೆಂದು ತಿಳಿದುಬಂದಿದೆ. 

ಪಕ್ಷವನ್ನು ಬಲಪಡಿಸಲು ಮುಂದಾಗಿರುವ ಸಿಟಿ ರವಿಯವರಿಗೆ ಅದಾಗಲೇ ನಟಿ ಹಾಗೂ ಮಾಜಿ ಕಾಂಗ್ರೆಸ್ ವಕ್ತಾರೆ ಖುಷ್ಬು ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಆರಂಭವನ್ನು ನೀಡಿದೆ ಎಂದು ಮೂಲಗಳು ತಿಳಿಸಿವೆ. 

ಕೇರಳದಲ್ಲಿಯೂ ಪಂಚಾಯತ್ ಚುನಾವಣೆ ನಡೆಯಲಿದ್ದು, ಚೆನ್ನೈ ಬಳಿಕ ಕೇರಳ ರಾಜ್ಯಕ್ಕೂ ರವಿಯವರು ಭೇಟಿ ನೀಡಲಿದ್ದಾರೆ. ಕೇರಳ ಅಷ್ಟೇ ಅಲ್ಲದೆ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಕ್ಕು ಭೇಟಿ ನೀಡಲಿದ್ದಾರೆ. 

ಪಕ್ಷದ ನಾಯಕರು ಯಾವುದೇ ಕೆಲಸ ನೀಡಿದರೂ ನಾನು ಅದನ್ನು ಮಾಡುತ್ತೇನೆಂದು ಸಿಟಿ ರವಿಯವರು ಹೇಳಿದ್ದಾರೆ.

ಇದೇ ವೇಳೆ ತಮ್ಮ ಕ್ಷೇತ್ರದ ಕುರಿತು ಮಾತನಾಡಿದ ಅವರು, ನನ್ನ ಕ್ಷೇತ್ರದ ಜನರೊಂದಿಗೆ ಈಗಾಗಲೇ ಮಾತುಕತೆ ನಡೆಸಿದ್ದು, 15 ದಿನಗಳಿಗೊಮ್ಮೆ ಕ್ಷೇತ್ರಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದೇನೆ. ಬಹುತೇಕ ಸಮಯದಲ್ಲಿ ನಾನು ಇತರೆ ರಾಜ್ಯಗಳಲ್ಲಿಯೇ ಇರಲಿದ್ದೇನೆಂದು ತಿಳಿಸಿದ್ದೇನೆಂದು ಹೇಳಿದ್ದಾರೆ. 

ಈ ನಡುವೆ ರವಿಯವರು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಇನ್ನೂ ಅಂಗೀಕಾರಗೊಂಡಿಲ್ಲ. ಕನ್ನಡ ರಾಜ್ಯೋತ್ಸವದ ಬಳಿಕ ರಾಜೀನಾಮೆ ಅಂಗೀಕಾರಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com