ನೇಷನ್ ಫಸ್ಟ್, ಪಾರ್ಟಿ ನೆಕ್ಸ್ಟ್, ಸೆಲ್ಫ್ ಲಾಸ್ಟ್: ತುಳಸಿ ಮುನಿರಾಜು ಗೌಡ!

ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಟಿಕೆಟ್ ಆಕಾಂಕ್ಷಿ ತುಳಸಿ ಮುನಿರಾಜುಗೌಡ ತೇಜಸ್ವಿನಿ ಅನಂತ್ ಕುಮಾರ್ ಅವರ ಹಾದಿ ಅನುಸರಿಸಿದ್ದಾರೆ.

Published: 16th October 2020 08:17 AM  |   Last Updated: 16th October 2020 01:46 PM   |  A+A-


Tulasi Muniraju Gowda

ತುಳಸಿ ಮುನಿರಾಜು ಗೌಡ

Posted By : Shilpa D
Source : The New Indian Express

ಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಟಿಕೆಟ್ ಆಕಾಂಕ್ಷಿ ತುಳಸಿ ಮುನಿರಾಜುಗೌಡ ತೇಜಸ್ವಿನಿ ಅನಂತ್ ಕುಮಾರ್ ಅವರ ಹಾದಿ ಅನುಸರಿಸಿದ್ದಾರೆ.

ಕಳೆದ ಲೋಕಸಭೆ ಚುನಾವಣಾ ವೇಳೆ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿನಿ ಅವರಿಗೆ ಟಿಕೆಟ್ ನಿರಾಕರಿಸಿದಾಗ ಅವರು ನೀಡಿದ್ದ ಮೊದಲ ಪ್ರತಿಕ್ರಿಯೆ, ದೇಶ ಮೊದಲು ಎಂದು ಹೇಳಿದ್ದರು. ಸದ್ಯ ಅದೇ ಮಾರ್ಗ ಅನುಸರಿಸಿರುವ ತುಳಸಿ ಮುನಿರಾಜು ಗೌಡ 
“ನೇಷನ್ ಫಸ್ಟ್, ಪಾರ್ಟಿ ನೆಕ್ಸ್ಟ್, ಸೆಲ್ಫ್ ಲಾಸ್ಟ್” ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ.

ಆರ್ ಆರ್ ನಗರ ಉಪ ಚುನಾವಣೆಯ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ತುಳಸಿ ಮುನಿರಾಜು ಟಿಕೆಟ್ ತಮಗೆ ದೊರೆಯುತ್ತದೆ ಎಂಬ ಆತ್ಮ ವಿಶ್ವಾಸದಿಂದ ತಮ್ಮ ಬೆಂಬಲಿಗರ ಜೊತೆ ಪ್ರಚಾರ ಮಾಡಿದ್ದರು. ಆದರೆ ಬಿಜೆಪಿ ನಾಯಕರು ನೀಡಿದ್ದ ಭರವಸೆಯಂತೆ ಮುನಿರತ್ನಗೆ ಟಿಕೆಟ್ ನೀಡಲಾಗಿದೆ. ಹೀಗಾಗಿ ಪಕ್ಷದ ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ತುಳಸಿ ಹೇಳಿದ್ದಾರೆ.

Stay up to date on all the latest ರಾಜಕೀಯ news
Poll
Rohit Sharma

ಮುಂಬರುವ ಆಸ್ಟ್ರೇಲಿಯಾ ಪ್ರವಾಸದಲ್ಲಿ ರೋಹಿತ್ ಶರ್ಮಾ ಅವರ ಅನುಪಸ್ಥಿತಿಯು ಟೀಮ್ ಇಂಡಿಯಾದ ಸಾಧನೆಯ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp