ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ, ಗ್ರಾಮ ಪಂಚಾಯತಿ ಚುನಾವಣೆಗೆ ಸಿದ್ಧರಿದ್ದೇವೆ: ನಳಿನ್ ಕುಮಾರ್ ಕಟೀಲ್

ಶಿರಾ ಹಾಗೂ ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಗ್ರಾಮ ಪಂಚಾಯತಿ ಚುನಾವಣೆ ಎದುರಿಸಲು ಸಿದ್ಧರಿದ್ದೇವೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ. 

Published: 16th October 2020 07:47 AM  |   Last Updated: 16th October 2020 07:47 AM   |  A+A-


Nalin kumar kateel

ನಳಿನ್ ಕುಮಾರ್ ಕಟೀಲ್

Posted By : Manjula VN
Source : The New Indian Express

ಮೈಸೂರು: ಶಿರಾ ಹಾಗೂ ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಗ್ರಾಮ ಪಂಚಾಯತಿ ಚುನಾವಣೆ ಎದುರಿಸಲು ಸಿದ್ಧರಿದ್ದೇವೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿರಾದಲ್ಲಿ ವಾಸ್ತವ ಸ್ಥಿತಿ ಬದಲಾಗಿದೆ. ಇತರೆ ಪಕ್ಷಗಳ ನಾಯಕರು ಹಾಗೂ ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಟ್ರೆಂಡ್ ಬದಲಾಗುತ್ತಿದ್ದು, ಜನರು ಪ್ರಧಾನಿ ಮೋದಿ ಹಾಗೂ ಬಿಎಸ್ ಯಡಿಯೂರಪ್ಪ ಅವರ ನಾಯಕತ್ವದ ಕುರಿತು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್ ಮೇಲೆ ನಂಬಿಕೆ ಕಳೆದುಕೊಳ್ಳುತ್ತಿದ್ದಾರೆಂದು ಹೇಳಿದ್ದಾರೆ. 

ಚುನಾವಣಾ ರಾಜಕೀಯದಲ್ಲಿ ಜಾತಿ ಮತ್ತು ಹಣ ಬಲಯನ್ನು ಕೊನೆಗೊಳಿಸಲು ಬಿಜೆಪಿ ಪಕ್ಷವು ತಳಮಟ್ಟದಿಂದ ಮತ್ತು ಬೂತ್ ಮಟ್ಟದಿಂದ ಬಲಪಡಿಸಲು ದಕ್ಷಿಣ ಕನ್ನಡ ಮಾದರಿಯಲ್ಲಿ ಒತ್ತು ನೀಡಲಾಗುತ್ತಿದೆ, ಪಂಚಾಯತ್ ಚುನಾವಣೆಗೂ ಪಕ್ಷ ಸಜ್ಜಾಗುತ್ತಿದೆ ಎಂದು ತಿಳಿಸಿದ್ದಾರೆ. 

ಪಕ್ಷವು ಹೊಸ ಸದಸ್ಯರನ್ನು ಬೂತ್ ಮಟ್ಟದಲ್ಲಿ ಸೇರ್ಪಡೆಗೊಳಿಸಿಕೊಳ್ಳಲು ಮತ್ತು ಮುಂದಿನ ದಿನಗಳಲ್ಲಿ ಸರ್ಕಾರ ಮತ್ತು ಅದರ ಕಾರ್ಯಕ್ರಮಗಳನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯಲು ಬಯಸುತ್ತಿದೆ. ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷ ಗೆಲ್ಲಲು ಸಹಾಯ ಮಾಡುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಗೆಲುವು ಸಾಧಿಸಲು ಪರಿಶ್ರಮ ಪಡಲಾಗುತ್ತದೆ ಎಂದು ಹೇಳಿದ್ದಾರೆ. 

Stay up to date on all the latest ರಾಜಕೀಯ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp