ಜೆಡಿಎಸ್ ಮುಗಿಸುವುದೇ ಕಾಂಗ್ರೆಸ್ ನಾಯಕರ ಅಜೆಂಡಾ: ಕುಮಾರಸ್ವಾಮಿ ವಾಗ್ದಾಳಿ

ಜೆಡಿಎಸ್‌ ಮುಗಿಸಬೇಕು ಎಂಬುದೇ ಕಾಂಗ್ರೆಸ್‌ ಲೀಡರ್‌ಗಳ ಅಜೆಂಡಾ ಆಗಿದೆ. ಅದು ಆಕ್ರೋಶವೋ, ಭಯವೋ ಗೊತ್ತಿಲ್ಲ.ಬಿಜೆಪಿಗಿಂತ ಜೆಡಿಎಸ್‌ ಮೇಲೆಯೇ ಅವರಿಗೆ ಹೆಚ್ಚು ಸಿಟ್ಟಿದೆ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಎಚ್. ಡಿ. ಕುಮಾರಸ್ವಾಮಿ
ಎಚ್. ಡಿ. ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್‌ ಮುಗಿಸಬೇಕು ಎಂಬುದೇ ಕಾಂಗ್ರೆಸ್‌ ಲೀಡರ್‌ಗಳ ಅಜೆಂಡಾ ಆಗಿದೆ. ಅದು ಆಕ್ರೋಶವೋ, ಭಯವೋ ಗೊತ್ತಿಲ್ಲ.ಬಿಜೆಪಿಗಿಂತ ಜೆಡಿಎಸ್‌ ಮೇಲೆಯೇ ಅವರಿಗೆ ಹೆಚ್ಚು ಸಿಟ್ಟಿದೆ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಗ್ಗೆರೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ದೇವೇಗೌಡರ ಕುಟುಂಬವನ್ನು ದುಡ್ಡು ಕೊಟ್ಟುಕೊಂಡು ಕೊಳ್ಳಲು ಆಗುವುದಿಲ್ಲ.ಇಡೀ ದೇಶದಲ್ಲಿ ಸಾರ್ವಜನಿಕವಾಗಿ ಒಬ್ಬ ಮುಖ್ಯಮಂತ್ರಿ ದೇಶದಲ್ಲಿ ಕಣ್ಣೀರು ಹಾಕಿದ್ದಾರೆ ಅಂದರೆ ಅದು ನಾನು ಮಾತ್ರ.ಅಂತಹ ವಾತಾವರಣದಲ್ಲಿ ನಾನಿದ್ದೆ ಎಂದು ಬೇಸರ ವ್ಯಕ್ತಪಡಿಸಿದರು.

ಬಿಜೆಪಿ ಹಾಗೂ ಬಿಜೆಪಿ ಅಭ್ಯರ್ಥಿ ಬಗ್ಗೆ ಕುಮಾರಸ್ವಾಮಿ ಸಾಫ್ಟ್‌ಕಾರ್ನರ್‌ ಹೊಂದಿದ್ದಾರೆ ಎಂದು ಅಪ ಪ್ರಚಾರ ಮಾಡುತ್ತಿದ್ದಾರೆ.ಆದರೆ, ಜನರ ಹಣ ಲೂಟಿ ಹೊಡೆಯೋರ ಬಗ್ಗೆ ನಾನು ಮಾತಾಡಲ್ಲ.250 ಕೋಟಿ ರೂ.ಕಳ್ಳ ಬಿಲ್ ಮಾಡಿ ಹಣ ಗುಳುಂ ಮಾಡಿದ್ದಾರೆ ಎಂದು ಆರೋಪಿಸಿದರು.

ಬೆವರು ಸುರಿಸಿ ದುಡಿದ ಹಣದಲ್ಲಿ ನಮ್ಮ ಅಭ್ಯರ್ಥಿ ಕೃಷ್ಣಮೂರ್ತಿ ಕೊರೊನಾ ಸಮಯದಲ್ಲಿ ಜನಕ್ಕೆ ಸಹಾಯ ಮಾಡಿದ್ದಾರೆ. ಆದರೆ,ಜನರ ಪಾಪದ ಹಣದಲ್ಲಿ ಬಿಜೆಪಿ ಅಭ್ಯರ್ಥಿ ಫುಡ್‌ಕಿಟ್‌ ನೀಡಿದ್ದಾರೆ ಎಂದು ಮುನಿರತ್ನ ವಿರುದ್ಧ ವಾಗ್ದಾಳಿ ನಡೆಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com