ಕಾಂಗ್ರೆಸ್ ಗೆ ಉಪಚುನಾವಣೆ ಆಘಾತ: ಹಲವು ಕೈ ಮುಖಂಡರು ಬಿಜೆಪಿ ಸೇರ್ಪಡೆ

ರಾಜ ರಾಜೇಶ್ವರಿ ನಗರದ ಹಲವು ಕಾಂಗ್ರೆಸ್ ಮುಖಂಡರು ಭಾನುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ, ಇದರಿಂದ ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಯ್ಡು ಅವರಿಗೆ ಮತ್ತಷ್ಚು ಬೆಂಬಲ ಸಿಕ್ಕಂತಾಗಿದೆ.
ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು
ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

ಬೆಂಗಳೂರು: ರಾಜ ರಾಜೇಶ್ವರಿ ನಗರದ ಹಲವು ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಭಾನುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ, ಇದರಿಂದ ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಯ್ಡು ಅವರಿಗೆ ಮತ್ತಷ್ಚು ಬೆಂಬಲ ಸಿಕ್ಕಂತಾಗಿದೆ.

ಮಾಜಿ ಮೇಯರ್, ಕಾರ್ಪೋರೇಟರ್ಸ್ ಮತ್ತು ಸದಸ್ಯರು ಹಾಗೂ ಸ್ಥಳೀಯ ಕಾರ್ಪೋರೇಟಿವ್ ಸೊಸೈಟಿಯ ಸದಸ್ಯರು ಸೇರಿದಂತೆ 34 ಮಂದಿ ಬಿಜೆಪಿ ಸೇರಿದ್ದಾರೆ.

ವಿವಿಧ ಸಮುದಾಯಗಳ ಮುಖಂಡರು ಬಿಜೆಪಿ ಸೇರಿರುವುದರಿಂದ ನವೆಂಬರ್ 3 ರಂದು ನಡೆಯುವ ಉಪ ಚುನಾವಣೆ ರಂಗು ಮತ್ತಷ್ಟು ಏರಿದೆ.

ಜಾಲಹಳ್ಳಿ ವಾರ್ಡ್ ಮಾಜಿ ಕಾರ್ಪೊರೇಟರ್ ಹಾಗೂ ಮಾಜಿ ಮೇಯರ್ ನಾರಾಯಣಸ್ವಾಮಿ, ಜಾಲಹಳ್ಳಿ ವಾರ್ಡ್ ಮಾಜಿ ಕಾರ್ಪೊರೇಟರ್ ಶ್ರೀನಿವಾಸಮೂರ್ತಿ, ಯಶವಂತಪುರ ಮಾಜಿ ಕಾರ್ಪೊರೇಟರ್ ಜಿಕೆ ವೆಂಕಟೇಶ್, ಹೆಚ್ ಎಂ ಟಿ ವಾರ್ಡ್ ಮಾಜಿ ಕಾರ್ಪೊರೇಟರ್ ಆಶಾ ಸುರೇಶ್, ಲಕ್ಷ್ಮೀ ದೇವಿನಗರ ವಾರ್ಡ್ ಮಾಜಿ ಕಾರ್ಪೊರೇಟರ್ ವೇಲು, ಕೊಟ್ಟಿಗೆಪಾಳ್ಯ ವಾರ್ಡ್ ಮಾಜಿ ಕಾರ್ಪೊರೇಟರ್ ಮೋಹನ್ ಕುಮಾರ್, ಲಗ್ಗೆರೆ ವಾರ್ಡ್ ನ ನಾಮನಿರ್ದೇಶಿತ ಬಿಬಿಎಂಪಿ ಸದಸ್ಯ ಸಿದ್ದೇಗೌಡ , ಆರ್ ಆರ್ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುನಂದಾ ಬೋರೇಗೌಡ್ರು, ಜ್ಞಾನಭಾರತಿ ವಾರ್ಡ್ ಮಾಜಿ ಕಾರ್ಪೊರೇಟರ್ ಗೋವಿಂದರಾಜು ಸೇರಿದಂತೆ ಕೆಲ ಜೆಡಿಎಸ್​ ಮುಖಂಡರು ಬಿಜೆಪಿಗೆ ಸೇರ್ಪಡೆಯಾದರು.

2017ರಲ್ಲಿ ಬಿಬಿಎಂಪಿ ಕೌನ್ಸಿಲ್ ನಲ್ಲಿ ಕಾಂಗ್ರೆಸ್ ಶಾಸಕ ಮುನಿರತ್ನ ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮಾಜಿ ಕಾರ್ಪೋರೇಟರ್ ಮಮತಾ ವಾಸುದೇವ್ ಆತ್ಮಹತ್ಯೆ ಬೆದರಿಕೆ ಹಾಕಿದ್ದರು.

ಇದರ ಜೊತೆಗೆ ಕಾಂಗ್ರೆಸ್ ನ ಆಶಾ ಸುರೇಶ್ ಮತ್ತು ಜೆಡಿಎಸ್ ಮಂಜುಳಾ ನಾರಾಯಣಸ್ವಾಮಿ ಕೂಡ ಮುನಿರತ್ನ ವಿರುದ್ಧ ಪ್ರತಿಭಟನೆ ನಡೆಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com