ಕಾಂಗ್ರೆಸ್ ಬಗ್ಗೆ ಮಾತನಾಡುವುದಕ್ಕೂ ಮುನ್ನ ಸಿಟಿ ರವಿಯವರು ಆತ್ಮಾವಲೋಕನ ಮಾಡಿಕೊಳ್ಳಲಿ: ಈಶ್ವರ್ ಖಂಡ್ರೆ

ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಗುಜರಾತ್ ಶಾಸಕರಿಗೆ ಡಿಕೆ.ಶಿವಕುಮಾರ್ ಅವರು ರಕ್ಷಣೆ ಮಾಡಿದ್ದರು. ಈ ವೇಳೆ ಅವರು ಜೈಲಿಗೆ ಹೋಗಿದ್ದರು. ಬಿಜೆಪಿ ತನ್ನ ವಿರೋಧಿಗಳಲ್ಲಿ ಭಯ ಹುಟ್ಟಿಸಲು ಬ್ಲ್ಯಾಕ್ ಮೇಲ್ ಮಾಡುತ್ತಿದ್ದು, ಸೇಡಿನ ರಾಜಕೀಯದಲ್ಲಿ ತೊಡಗಿಕೊಂಡಿದೆ ಎಂದು ಕಾಂಗ್ರೆಸ್ ನಾಯಕ ಈಶ್ವರ್...
ಈಶ್ವರ್ ಖಂಡ್ರೆ
ಈಶ್ವರ್ ಖಂಡ್ರೆ

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಗುಜರಾತ್ ಶಾಸಕರಿಗೆ ಡಿಕೆ.ಶಿವಕುಮಾರ್ ಅವರು ರಕ್ಷಣೆ ಮಾಡಿದ್ದರು. ಈ ವೇಳೆ ಅವರು ಜೈಲಿಗೆ ಹೋಗಿದ್ದರು. ಬಿಜೆಪಿ ತನ್ನ ವಿರೋಧಿಗಳಲ್ಲಿ ಭಯ ಹುಟ್ಟಿಸಲು ಬ್ಲ್ಯಾಕ್ ಮೇಲ್ ಮಾಡುತ್ತಿದ್ದು, ಸೇಡಿನ ರಾಜಕೀಯದಲ್ಲಿ ತೊಡಗಿಕೊಂಡಿದೆ ಎಂದು ಕಾಂಗ್ರೆಸ್ ನಾಯಕ ಈಶ್ವರ್ ಖಂಡ್ರೆಯವರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. 

ಸಿಟಿ ರವಿಯವರು ಡಿಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಬಿಜೆಪಿ ತನ್ನದೇ ನಾಯಕರನ್ನು ಹೊಂದಿಲ್ಲ. ಹೀಗಾಗಿ ಕಾಂಗ್ರೆಸ್ ಶಾಸಕರನ್ನು ತಮ್ಮ ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಳ್ಳಲು ಆಪರೇಷನ್ ಕಮಲ ನಡೆಸುತ್ತಿದೆ. ಕಾಂಗ್ರೆಸ್ ಬಗ್ಗೆ ಮಾತನಾಡುವುದಕ್ಕೂ ಮುನ್ನ ಸಿಟಿ ರವಿಯವರು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ. 

ಉಪ ಚುನಾವಣೆ ಹತ್ತಿರ ಬರುತ್ತಿರುವ ನಡುವಲ್ಲೇ ಸಿಬಿಐ ಡಿಕೆ.ಶಿವಕುಮಾರ್ ಅವರ ನಿವಾಸದಮೇಲೆ ದಾಳಿ ನಡೆಸಿದೆ. ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಅಭ್ಯರ್ಥಿ ಮೇಲೆ ಎಫ್ಐಆರ್ ದಾಖಲಾಗುವಂತೆ ಬಿಜೆಪಿ ಮಾಡಿದೆ ಎಂದು ತಿಳಿಸಿದ್ದಾರೆ. 

ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಯನ್ನು ಪ್ರಸ್ತಾಪಿಸಿದ ಅವರು, ಕನಕಪುರದಿಂದ ಬಂದವರು ಗೂಂಡಾಗಿರಿ ನಡೆಸಿದರೆ, ಅದು ಇಲ್ಲಿ ಕೆಲಸಕ್ಕೆ ಬರುವುದಿಲ್ಲ. ಆರ್ ಆರ್ ನಗರ ಉಪಚುನಾವಣೆ ಬಳಿಕ ಬಿಜೆಪಿ ಸಿಹಿ ಸುದ್ದಿಯನ್ನು ಕೇಳಲಿದೆ ಎಂದಿದ್ದಾರೆ. ಕಳೆದ ಬಾರಿ ಮುನಿರತ್ನ ಅವರು ಗೂಂಡಾಗಿರಿಯಲ್ಲಿ ಭಾಗಿಯಾಗಿದ್ದಾರೆಂದು ಹೇಳಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆಂದು ಪ್ರಕರಣ ದಾಖಲಿಸಿಕೊಂಡಿತ್ತು. ಇದೀಗ ಆಪರೇಷನ್ ಕಮಲದ ಮೂಲಕ ಮುನಿರತ್ನ ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಮುನಿರತ್ನ ಅವರನ್ನು ಶುದ್ದೀಕರಿಸಿದ್ದಾರೆಯೇ? ಬಿಜೆಪಿ ನಾಯಕರೇ ಗೂಂಡಾಗಿರಿಯಲ್ಲಿ ಭಾಗಿಯಾಗುತ್ತಿದ್ದಾರೆ. ಇದೀಗ ಅವರ ನಿಜ ಬಣ್ಣ ಬಯಲಾಗಿದೆ ಎಂದು ಕಿಡಿಕಾರಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com