ಶಿರಾ, ಆರ್ ಆರ್ ನಗರ ಉಪಚುನಾವಣೆ: ಕಣದಲ್ಲಿ 31 ಅಭ್ಯರ್ಥಿಗಳು

ನವೆಂಬರ್ 3 ರಂದು ನಡೆಯುವ ರಾಜ ರಾಜೇಶ್ವರಿ ನಗರ ಮತ್ತು ಶಿರಾ ಉಪಚುನಾವಣೆಯಿಂದ ಆರು ಅಭ್ಯರ್ಥಿಗಳು ನಾಮಪತ್ರ ವಾಪಸ್ ತೆಗೆದುಕೊಂಡ ಹಿನ್ನೆಲೆಯಲ್ಲಿ ಕಣದಲ್ಲಿ ಒಟ್ಟು 31 ಅಭ್ಯರ್ಥಿಗಳು ಉಳಿದಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ನವೆಂಬರ್ 3 ರಂದು ನಡೆಯುವ ರಾಜ ರಾಜೇಶ್ವರಿ ನಗರ ಮತ್ತು ಶಿರಾ ಉಪಚುನಾವಣೆಯಿಂದ ಆರು ಅಭ್ಯರ್ಥಿಗಳು ನಾಮಪತ್ರ ವಾಪಸ್ ತೆಗೆದುಕೊಂಡ ಹಿನ್ನೆಲೆಯಲ್ಲಿ ಕಣದಲ್ಲಿ ಒಟ್ಟು 31 ಅಭ್ಯರ್ಥಿಗಳು ಉಳಿದಿದ್ದಾರೆ.

ರಾಜ ರಾಜೇಶ್ವರಿ ನಗರ ವಿಧಾನ ಸಭೆ  ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮತ್ತು ಬಿಜೆಪಿ ಅಭ್ಯರ್ಥಿ ಮುನಿರತ್ನ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಸೇರಿದಂತೆ ಒಟ್ಟು 16 ಅಭ್ಯರ್ಥಿಗಳಿದ್ದಾರೆ.

ಮುನಿರತ್ನ ಎಂಬ ಹೆಸರಿನ ನಾಲ್ಕು ಅಭ್ಯರ್ಥಿಗಳು ಸ್ವತಂತ್ರ್ಯವಾಗಿನಾಮಪತ್ರ ಸಲ್ಲಿಸಿದ್ದಾರೆ. ಮುನಿರತ್ನಮ್ಮ, ಆನಂದನ್, ಮತ್ತು ಆರ್ ಕುಮಾರ್ ಎಂಬುವರು ನಾಮಪತ್ರ ವಾಪಸ್ ಪಡೆದಿದ್ದಾರೆ.

ಶಿರಾದಲ್ಲಿ ತ್ರಿಕೋಣ ಸ್ಫರ್ಧೆ ಏರ್ಪಟ್ಟಿದ್ದು, 15 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇದೇ ಮೊದಲ ಬಾರಿಗೆ ಶಿರಾದಲ್ಲಿ ಗೆಲ್ಲುವ ಕನಸು ಕಾಣುತ್ತಿದೆ ಬಿಜೆಪಿ, ಶಿರಾ ಕಣದಲ್ಲಿ ಒಟ್ಟು 15 ಅಭ್ಯರ್ಥಿಗಳಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 10 ಸಾವಿರ ಮತಗಳಿಂದ ಸೋಲನುಭವಿಸಿತ್ತು.

ಜೆಡಿಎಸ್ ತನ್ನ ಸೀಟು ಉಳಿಸಿಕೊಳ್ಳಲು ಅನುಕಂಪ ಕಾರ್ಡ್ ಪ್ಲೇ ಮಾಡುತ್ತಿದೆ, ದಿವಂಗತ ಸತ್ಯನಾರಾಯಣ ಅವರ ನಿಧನದಿಂದ ತೆರವಾಗಿದ್ದ ಶಿರಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದ್ದು, ಜೆಡಿಎಸ್ ನಿಂದ ಅಮ್ಮಾಜಮ್ಮ ಕಣಕ್ಕಿಳಿದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com