ಎವೆರಿ ಡೇ ಈಸ್ ನಾಟ್ ಸಂಡೆ; ಕೆ.ಆರ್ ಪೇಟೆಯಂತೆ ಶಿರಾದಲ್ಲಿ ಕಮಲ ಅರಳಿಸಲಾಗದು: ಎಚ್ ಡಿಕೆ ಟಾಂಗ್
ಆರ್.ಆರ್ ನಗರ ಮತ್ತು ಶಿರಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಹಣಬಲದ ಮೂಲಕ ಗೆಲುವು ಸಾಧಿಸಲು ಬಿಜೆಪಿಯವರು ಹೊರಟಿದ್ದಾರೆ. ಆದರೆ ಶಿರಾದಲ್ಲಿ ಹಣಬಲದಿಂದ ಗೆಲ್ಲಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.
Published: 21st October 2020 01:45 PM | Last Updated: 21st October 2020 01:49 PM | A+A A-

ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಆರ್.ಆರ್ ನಗರ ಮತ್ತು ಶಿರಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಹಣಬಲದ ಮೂಲಕ ಗೆಲುವು ಸಾಧಿಸಲು ಬಿಜೆಪಿಯವರು ಹೊರಟಿದ್ದಾರೆ. ಆದರೆ ಶಿರಾದಲ್ಲಿ ಹಣಬಲದಿಂದ ಗೆಲ್ಲಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಮಾಜಿ ಹೆಚ್.ಡಿ ಕುಮಾರಸ್ವಾಮಿ, ಹಣಬಲದಿಂದ ಶಿರಾದಲ್ಲಿ ಗೆಲ್ಲಲು ಆಗಲ್ಲ. ಹಣಬಲದಿಂದ ಗೆಲ್ಲುತ್ತೇವೆ ಎನ್ನುವುದು ಭ್ರಮೆ. ಕೆ.ಆರ್ ಪೇಟೆಯಲ್ಲಿ ಕಮಲ ಅರಳಿಸಿದಂತೆ ಶಿರಾದಲ್ಲಿ ಕಮಲ ಅರಳಿಸಲು ಆಗುವುದಿಲ್ಲ. ಅಂದಿನ ಚುನಾವಣೆಗೂ ಇಂದಿನ ಚುನಾವಣೆಗೂ ವ್ಯತ್ಯಾಸವಿದೆ. ‘ಎವೆರಿ ಡೇಸ್ ಇಸ್ ನಾಟ್ ಸಂಡೆ’ ಎಂದು ಹೇಳಿದರು.
ನಳೀನ್ ಕುಮಾರ್ ಕಟೀಲ್ ಗೆ ಘನತೆಯೇ ಇಲ್ಲ. ಮುಖ್ಯಮಂತ್ರಿಯ ಆಗಿದ್ದಾಗ ಹೇಗಿದ್ದೆ ಎಂದು ಜನತೆಗೆ ಗೊತ್ತು. ನನ್ನಷ್ಟು ಜನಸಾಮಾನ್ಯರಿಗೆ ಸಿಗುವವವರು ಯಾರು ಇಲ್ಲ. ಅಧಿಕಾರ ಇಲ್ಲದಿದ್ದರೂ ಜನ ನಮ್ಮ ಮನೆಗೆ ಬರುತ್ತಾರೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಎಷ್ಟು ಬಡವರಿಗೆ ಸಹಾಯ ಮಾಡಿದ್ದಾರೆ ಎಂದು ನಳೀನ್ ಕುಮಾರ್ ಕಟೀಲ್ ವಿರುದ್ಧ ಕಿಡಿಕಾರಿದರು.