ಪರಿಷತ್ ಚುನಾವಣೆ: ಬಂಡಾಯ ಅಭ್ಯರ್ಥಿ ಟಿ.ಟಿ ಶ್ರೀನಿವಾಸ್ ಬಿಜೆಪಿಯಿಂದ ಉಚ್ಛಾಟನೆ

ಪಕ್ಷದ ಸೂಚನೆ ಕಡೆಗಣಿಸಿ, ವಿಧಾನಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದಿಂದ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಡಿ.ಟಿ.ಶ್ರೀನಿವಾಸ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ
ಡಿ.ಟಿ ಶ್ರೀನಿವಾಸ್
ಡಿ.ಟಿ ಶ್ರೀನಿವಾಸ್

ಬೆಂಗಳೂರು: ಪಕ್ಷದ ಸೂಚನೆ ಕಡೆಗಣಿಸಿ, ವಿಧಾನಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದಿಂದ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಡಿ.ಟಿ.ಶ್ರೀನಿವಾಸ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ. 

ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆದೇಶದ ಮೇರೆಗೆ , ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿ, ಭಾರತೀಯ ಜನತಾ ಪಾರ್ಟಿಯ ಚುನಾವಣೆಗೆ ಮುಜುಗರ ತಂದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ. 

ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಶ್ರೀನಿವಾಸ್ ಅವರು ಕಣದಿಂದ ಹಿಂದಕ್ಕೆ ಸರಿಯುವಂತೆ ತಿಳಿಸಿದ್ದರೂ ಪಕ್ಷದ ಸೂಚನೆ ಕಡೆಗಣಿಸಿ, ಮುಜುಗರಕ್ಕೆ ಕಾರಣರಾಗಿದ್ದಾರೆ. ಆದ್ದರಿಂದ ಅವರನ್ನು ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ ಎಂಬುದಾಗಿ ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com