ಮಾರುತಿ ಮಾನ್ಪಡೆ ಸಾವಿಗೆ ಸಿದ್ದರಾಮಯ್ಯ, ಡಿಕೆಶಿ ಕಾರಣ; ಪ್ರವಾಹ ನಿರ್ವಹಣೆಗೆ ಕೇಂದ್ರದಿಂದ ಅಗತ್ಯ ಪರಿಹಾರ: ಡಿವಿಎಸ್

ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟದಲ್ಲಿ ಭಾಗಿಯಾಗಿದ್ದ ರೈತ ಮುಖಂಡ ಮಾರುತಿ ಮಾನ್ಪಡೆ ಕೊರೋನಾದಿಂದ ಸಾವನ್ನಪ್ಪಿದ್ದಾರೆ, ಅವರ ಸಾವಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಶಿವಕುಮಾರ್ ನೇರಹೊಣೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಆರೋಪಿಸಿದ್ದಾರೆ.
ಡಿ.ವಿ ಸದಾನಂದಗೌಡ
ಡಿ.ವಿ ಸದಾನಂದಗೌಡ

ಬೆಂಗಳೂರು: ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟದಲ್ಲಿ ಭಾಗಿಯಾಗಿದ್ದ ರೈತ ಮುಖಂಡ ಮಾರುತಿ ಮಾನ್ಪಡೆ ಕೊರೋನಾದಿಂದ ಸಾವನ್ನಪ್ಪಿದ್ದಾರೆ, ಅವರ ಸಾವಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಶಿವಕುಮಾರ್ ನೇರಹೊಣೆ ಎಂದು ಕೇಂದ್ರ ಸಚಿವ ಡಿವಿ ಸದಾನಂದಗೌಡ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಭೂಸುಧಾರಣಾ ಕಾಯ್ದೆ ತಿದ್ದುಪಡಿ ಹೋರಾಟದಲ್ಲಿ ಹಳ್ಳಿಗಳಿಂದ ರೈತರನ್ನು ಕರೆದುಕೊಂಡು ಬಂದು ತಮ್ಮ ಸ್ವಾರ್ಥಕ್ಕಾಗಿ ಹೋರಾಟದಲ್ಲಿ ಕಾಂಗ್ರೆಸ್ ಮುಖಂಡರು ಬಳಸಿಕೊಂಡರು, ಮಾರುತಿ ಮಾನ್ಪಡೆ ರೈತ ಹೋರಾಟದಲ್ಲಿ ಭಾಗಿಯಾಗಿದ್ದರಿಂದ ಹಾಗೂ ರೈತ ಹೋರಾಟದ ನೆಪದಲ್ಲಿ ಕಾಂಗ್ರೆಸ್ ನಾಯಕರು ಕೊರೋನಾ ಹರಡಿದ್ದು ಅವರ ಸಾವಿಗೆ ಕಾರಣವಾಯಿತು ಎಂದಿದ್ದಾರೆ.

ಆರ್ ಆರ್ ನಗರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಸದಾನಂದಗೌಡ ಉಪ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಸುವ ವಿಶ್ವಾಸ ವ್ಯಕ್ತ ಪಡಿಸಿದರು.

ಇನ್ನೂ ರಾಜ್ಯದಲ್ಲಿ ನೆರೆ ಪರಿಸ್ಥಿತಿ ನಿರ್ವಹಣಗೆ ಕೇಂದ್ರ ಸರ್ಕಾರ ಸಂಪೂರ್ಣ ನೆರವು ನೀಡಲಿದೆ ಎಂದು ಸದಾನಂದ ಗೌಡ ತಿಳಿಸಿದ್ದಾರೆ.

ಸದ್ಯಕ್ಕೆ ಸಣ್ಣ ಮೊತ್ತದ ಪರಿಹಾರ ಹಣ ಬಿಡುಗಡೆ ಮಾಡಲಿದ್ದು, ಚುನಾವಣೆ ಇರುವುದರಿಂದ ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಇದನ್ನು ಪರಿಹರಿಸಲಿದೆ ಎಂದರು.

ಶೀಘ್ರದಲ್ಲೇ ಕೇಂದ್ರ ತಂಡ ರಾಜ್ಯಕ್ಕೆ ಭೇಟಿ ನೀಡಿ ಪ್ರವಾಹದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲಿದೆ. ಪ್ರಪಾಹದಿಂದ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಹಾನಿ ಉಂಟಾಗಿದೆ ಎಂದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com