ಪರಿಷತ್ ಮತ್ತು ಉಪ ಚುನಾವಣೆ ನಂತರ ಕಾಂಗ್ರೆಸ್ ಕೋಮಾಗೆ ಜಾರಲಿದೆ: ಶೆಟ್ಟರ್, ಜೋಷಿ ಲೇವಡಿ

ವಿಧಾನ ಪರಿಷತ್ ಮತ್ತು ವಿಧಾನ ಸಭೆ ಉಪ ಚುನಾವಣೆಗಳ ನಂತರ ಕಾಂಗ್ರೆಸ್ ಪಕ್ಷ ಕೋಮಾಗೆ ಜಾರಲಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದಾರೆ.
ಜಗದೀಶ್ ಶೆಟ್ಟರ್ ಮತ್ತು ಪ್ರಹ್ಲಾದ್ ಜೋಶಿ
ಜಗದೀಶ್ ಶೆಟ್ಟರ್ ಮತ್ತು ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ವಿಧಾನ ಪರಿಷತ್ ಮತ್ತು ವಿಧಾನ ಸಭೆ ಉಪ ಚುನಾವಣೆಗಳ ನಂತರ ಕಾಂಗ್ರೆಸ್ ಪಕ್ಷ ಕೋಮಾಗೆ ಜಾರಲಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಪ್ರಹ್ಲಾದ್ ಜೋಶಿ ಮತ್ತು ಶೆಟ್ಟರ್ ಕಾಂಗ್ರೆಸ್‌ಗೆ ಸಂವಿಧಾನದ ಮೂಲ ಆಶಯಗಳ ಮೇಲೆ ನಂಬಿಕೆಯಿಲ್ಲ. ಕಾಂಗ್ರೆಸ್ ಸತತವಾಗಿ‌ ಪ್ರಜಾಪ್ರಭುತ್ವದ ಅವಹೇಳನ ಮಾಡುತ್ತಾ ಬಂದಿದೆ ಎಂದರು.

ಕಾಂಗ್ರೆಸ್ ದೇಶದಲ್ಲಿ ದೀರ್ಘಕಾಲ ಆಡಳಿತ ನಡೆಸಿದರೂ ಯಾವುದೇ ಸಕಾರಾತ್ಮಕ ಬದಲಾವಣೆಯನ್ನು ತರಲು ಆಗಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ರಾಹುಲ್‌ ಗಾಂಧಿ ಚೀನಾದ ವಿಚಾರದಲ್ಲಿ ಹಾಸ್ಯಾಸ್ಪದ ಹೇಳಿಕೆ ನೀಡುತ್ತಿದ್ದಾರೆ ಎಂದು ಗಂಭಿರ ಆರೋಪ ಮಾಡಿದರು.

ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದಲ್ಲಿ ಆಂತರಿಕ ಗಲಾಟೆಗಳಿಂದ ತನ್ನ ಪಕ್ಷವನ್ನು ಉಳಿಸಿಕೊಳ್ಳಲು ಎಡವಟ್ಟುಗಳನ್ನು ಸೃಷ್ಟಿಸುವುದು ಕಾಂಗ್ರೆಸ್ ಕೆಲಸವಾಗಿದೆ ಎಂದು ಜೋಶಿ ಹೇಳಿದರು.

ತನ್ನ ಪಕ್ಷದ ಸಮಸ್ಯೆಯನ್ನು ದೇಶದ ಸಮಸ್ಯೆ ಎಂಬಂತೆ ಬಿಂಬಿಸುವುದು ಕಾಂಗ್ರೆಸ್ ವರ್ತನೆಯಾಗಿದೆ, ದೇಶದ  ಜನರನ್ನು ಎಲ್ಲಾ ಸಮಯದಲ್ಲಿಯೂ ಮೂರ್ಖರನ್ನಾಗಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಎಪಿಎಂಸಿ ತಿದ್ದುಪಡಿ ಕಾಯಿದೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡು ಪಕ್ಷಗಳು ವಿರೋಧ ವ್ಯಕ್ತ ಪಡಿಸುತ್ತಿವೆ  ಹೀಗಾಗಿ ಪರಿಷತ್ ನಲ್ಲಿ ಕಾಯಿದೆ ಅನುಮೋದನೆ ಮಾಡಲು ಅವಕಾಶ ನೀಡುತ್ತಿಲ್ಲ ಎಂದು ಶೆಟ್ಟರ್ ಆರೋಪಿಸಿದರು.

ಗಾಂಧಿ ಕುಟುಂಬದ "ಆಳಲು ಹುಟ್ಟಿದ" ಮನಸ್ಥಿತಿಯು ಕಾಂಗ್ರೆಸ್ ಪಕ್ಷವನ್ನು ಅವನತಿಯ ಹಾದಿ ಹಿಡಿಯುವಂತೆ ಮಾಡುತ್ತಿದೆ ಎಂದು ಜೋಶಿ ಆರೋಪಿಸಿದರು.

ಉತ್ತರ ಕರ್ನಾಟಕದ ಪ್ರವಾಹ ಪರಿಸ್ಥಿತಿ ಬಗ್ಗೆ ಮಾತನಾಡಿದ ಇಬ್ಬರು ನಾಯಕರು ಹಿಂದೆಂದೂ ಇಂತಹ ಪರಿಸ್ಥಿತಿ ಬಂದಿರಲಿಲ್ಲ, ಸರ್ಕಾರ ಸೂಕ್ತ ಪರಿಹಾರ ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com