ಪರಿಷತ್ ಚುನಾವಣೆ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಆಗ್ನೇಯ ಪದವೀಧರ ಕ್ಷೇತ್ರ, ಪಶ್ಚಿಮ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಮೂರು ಪಕ್ಷಗಳು ಸಹ ಬಿರುಸಿನ ಪ್ರಚಾರ ನಡೆಸಿದ್ದು, ಸೋಮವಾರ ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರ ಕಾರ್ಯ ಅಂತ್ಯಗೊಂಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಪ್ರಚಾರ ಕಾರ್ಯ ಅಂತ್ಯವಾಗಿದ್ದು ಅಕ್ಟೋಬರ್ 28ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 5 ರವೆರೆಗೆ ಮತದಾನ ನಡೆಯಲಿದ್ದು, ನವೆಂಬರ್ 2ರಂದು ಫಲಿತಾಂಶ ಪ್ರಕಟವಾಗಲಿದೆ. 

ಆಗ್ನೇಯ ಪದವೀಧರ ಕ್ಷೇತ್ರ, ಪಶ್ಚಿಮ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಮೂರು ಪಕ್ಷಗಳು ಸಹ ಬಿರುಸಿನ ಪ್ರಚಾರ ನಡೆಸಿದ್ದು, ಸೋಮವಾರ ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರ ಕಾರ್ಯ ಅಂತ್ಯಗೊಂಡಿದೆ.

ಒಟ್ಟು ಕಣದಲ್ಲಿ 15 ಅಭ್ಯರ್ಥಿಗಳಿದ್ದು ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ, ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಆರ್. ಚೌಡರೆಡ್ಡಿ, ಕಾಂಗ್ರೆಸ್‌ನಿಂದ ರಮೇಶ್ ಬಾಬು ಕಣಕ್ಕಿಳಿಯಲಿದ್ದಾರೆ. ಬಿಜೆಪಿಯಿಂದ ಚಿದಾನಂದ ಗೌಡ ಅಭ್ಯರ್ಥಿಯಾಗಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಬಿಜೆಪಿಯಿಂದ ಎಸ್.ವಿ. ಸಂಕನೂರ, ಕಾಂಗ್ರೆಸ್‌ನಿಂದ ಕುಬೇರಪ್ಪ, ಅಭ್ಯರ್ಥಿಯಾಗಿದ್ದಾರೆ.

ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಶರಣಪ್ಪ ಮಟ್ಟೂರ, ಬಿಜೆಪಿಯಿಂದ ಶಶಿಲ್ ನಮೋಶಿ, ಜೆಡಿಎಸ್‌ನಿಂದ ತಿಮ್ಮಯ್ಯ ಪುರ್ಲೆ ಅಭ್ಯರ್ಥಿಗಳಾಗಿದ್ದಾರೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಬಿಜೆಪಿಯಿಂದ ಪುಟ್ಟಣ್ಣ ಅಭ್ಯರ್ಥಿಯಾಗಿದ್ದಾರೆ. ಜೆಡಿಎಸ್‌ನಿಂದ ಎ. ಪಿ. ರಂಗನಾಥ್, ಕಾಂಗ್ರೆಸ್‌ನಿಂದ ಪ್ರವೀಣ್ ಪೀಟರ್ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com