ಮುಂಬರುವ ಚುನಾವಣಾ ಫಲಿತಾಂಶ ಸರ್ಕಾರದ ಸಾಧನೆ ಬಗ್ಗೆ ಜನಾಭಿಪ್ರಾಯವಲ್ಲ: ಸಿದ್ದರಾಮಯ್ಯ
ನಾಲ್ಕು ವಿಧಾನ ಪರಿಷತ್ ಸ್ಥಾನಗಳ ಮತ್ತು ಉಪ ಚುನಾವಣೆಗಳ ಫಲಿತಾಂಶ ರಾಜ್ಯ ಸರ್ಕಾರದ ಸಾಧನೆ, ಕೆಲಸಗಳ ಬಗ್ಗೆ ಜನಾಭಿಪ್ರಾಯವಾಗುವುದಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
Published: 27th October 2020 08:49 AM | Last Updated: 27th October 2020 08:49 AM | A+A A-

ಕಲಬುರಗಿಯ ಜೇವರ್ಗಿ ತಾಲ್ಲೂಕಿನಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ ನಡೆಸುತ್ತಿರುವ ಸಿದ್ದರಾಮಯ್ಯ
ಕಲಬುರಗಿ: ನಾಲ್ಕು ವಿಧಾನ ಪರಿಷತ್ ಸ್ಥಾನಗಳ ಮತ್ತು ಉಪ ಚುನಾವಣೆಗಳ ಫಲಿತಾಂಶ ರಾಜ್ಯ ಸರ್ಕಾರದ ಸಾಧನೆ, ಕೆಲಸಗಳ ಬಗ್ಗೆ ಜನಾಭಿಪ್ರಾಯವಾಗುವುದಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ನಿನ್ನೆ ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ನಾಲ್ಕು ವಿಧಾನ ಪರಿಷತ್ ಮತ್ತು ಎರಡು ಉಪ ಚುನಾವಣಾ ಕ್ಷೇತ್ರಗಳ ಫಲಿತಾಂಶ ಸರ್ಕಾರದ ಸಾಧನೆಯ ಜನಮತವಾಗದಿದ್ದರೂ ಕೂಡ ಸರ್ಕಾರದ ಸಾಧನೆ ಬಗ್ಗೆ ಜನರ ಅಭಿಪ್ರಾಯ ಹೇಗಿದೆ ಎಂಬುದನ್ನು ಸೂಚಿಸುತ್ತದೆ ಎಂದರು.
ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಪರಿಹಾರ ನೀಡುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ವಿಫಲವಾಗಿವೆ, ಕೋವಿಡ್-19 ತಡೆಗಟ್ಟುವಲ್ಲಿ ಕೂಡ ಎಡವಿದೆ ಎಂದು ಟೀಕಿಸಿದರು.