ಉಪ ಚುನಾವಣೆ ಕಸರತ್ತು: ರಾಮನಗರ, ಕನಕಪುರ, ಮಂಡ್ಯಗಳಿಂದ ಕಾರ್ಯಕರ್ತರನ್ನು ಕರೆಸಿಕೊಂಡ ಕಾಂಗ್ರೆಸ್, ಜೆಡಿಎಸ್

ಆರ್ ಆರ್ ನಗರ ಮತ್ತು ಶಿರಾ ಕ್ಷೇತ್ರಗಳ ಉಪ ಚುನಾವಣೆಗಳು ರಾಮನಗರ, ಕನಕಪುರ ಮತ್ತು ಮಂಡ್ಯದ ಕೆಲವು ಭಾಗಗಳ ಮೇಲೆ ಕೂಡ ಪರಿಣಾಮ ಬೀರಲಿದೆ ಎಂಬುದು ರಾಜಕೀಯ ಪಂಡಿತರ ಲೆಕ್ಕಾಚಾರ.
ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಸಚಿವರುಗಳ ಪ್ರಚಾರ
ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಸಚಿವರುಗಳ ಪ್ರಚಾರ

ಮೈಸೂರು: ಆರ್ ಆರ್ ನಗರ ಮತ್ತು ಶಿರಾ ಕ್ಷೇತ್ರಗಳ ಉಪ ಚುನಾವಣೆಗಳು ರಾಮನಗರ, ಕನಕಪುರ ಮತ್ತು ಮಂಡ್ಯದ ಕೆಲವು ಭಾಗಗಳ ಮೇಲೆ ಕೂಡ ಪರಿಣಾಮ ಬೀರಲಿದೆ ಎಂಬುದು ರಾಜಕೀಯ ಪಂಡಿತರ ಲೆಕ್ಕಾಚಾರ.

ಮೂರು ವಿಧಗಳಲ್ಲಿ ಬಿಜೆಪಿ ಜೊತೆ ಸ್ಪರ್ಧಿಸುವ ಮೂಲಕ ಒಕ್ಕಲಿಗ ಪ್ರಾಬಲ್ಯವಿರುವ ಈ ಕ್ಷೇತ್ರಗಳಲ್ಲಿನ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಶತಪ್ರಯತ್ನಗಳನ್ನು ಮಾಡುತ್ತಿವೆ.

ಈ ಮೂರು ಕಡೆಗಳಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಚಾರಕ್ಕಾಗಿ ಮೂಲ ಪ್ರಚಾರಕನ್ನು ಕರೆಸಿಕೊಂಡಿದೆ. ಈ ಬಾರಿಯ ಉಪ ಚುನಾವಣೆ ಆಡಳಿತಾರೂಢ ಕಾಂಗ್ರೆಸ್ ಗೆ ಪ್ರತಿಷ್ಠೆಯ ವಿಷಯವಾಗಿದ್ದರೆ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರಿಬ್ಬರಿಗೂ ಹೆಮ್ಮೆಯ ವಿಷಯ. ಒಕ್ಕಲಿಗ ಸಮುದಾಯದ ಮೇಲೆ ಪ್ರಾಬಲ್ಯ ಸ್ಥಾಪಿಸಲು ಈ ಇಬ್ಬರು ನಾಯಕರು ಪ್ರಯತ್ನ ನಡೆಸುತ್ತಿದ್ದು, ಈ ಬಾರಿಯ ಉಪ ಚುನಾವಣೆಯಲ್ಲಿ ಗೆದ್ದರೆ ಮುಂದಿನ ವಿಧಾನಸಭೆ ಚುನಾವಣೆಗೆ ಸಹಾಯವಾಗಲಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಪಕ್ಷಗಳು ಹತ್ತಿರದ ರಾಮನಗರ, ಕನಕಪುರ ಕ್ಷೇತ್ರಗಳಿಂದ ನಿಷ್ಠಾವಂತ ಕಾರ್ಯಕರ್ತರನ್ನು ಕರೆಸಿಕೊಂಡು ಪ್ರಚಾರ ಮಾಡಿಸುತ್ತಿದ್ದಾರೆ. ಶಿರಾ ಕ್ಷೇತ್ರದಲ್ಲಿ ಜೆಡಿಎಸ್ ನಾಯಕರಾದ ಹೆಚ್ ಡಿ ದೇವೇಗೌಡ ಮತ್ತು ಹೆಚ್ ಡಿ ಕುಮಾರಸ್ವಾಮಿ ಇಬ್ಬರೂ ಪ್ರಚಾರ ತೀವ್ರಗೊಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೇಲೆ ಡಿ ಕೆ ಶಿವಕುಮಾರ್ ಅವರಿಗೆ ಇದು ಮೊದಲ ಚುನಾವಣೆ. ಕನಕಪುರ, ರಾಮನಗರ ಮತ್ತು ಮಂಡ್ಯದ ಮಳವಳ್ಳಿ ಭಾಗದಿಂದ ನಿಷ್ಠಾವಂತರನ್ನು ಕರೆಸಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದ್ದಾರೆ. ಚಾಮರಾಜನಗರ ಮಾಜಿ ಸಂಸದ ಆರ್ ಧ್ರುವನಾರಾಯಣ, ಜಿಲ್ಲಾಧ್ಯಕ್ಷ ಗಂಗಾಧರ್, ಜಿಲ್ಲಾ ಪಂಚಾಯತ್ ಮುಖ್ಯಸ್ಥ ಹೆಚ್ ಎನ್ ಅಶೋಕ್, ವಿಧಾನ ಪರಿಷತ್ ಸದಸ್ಯ ರವಿ, ಮಾಜಿ ಶಾಸಕ ಬಾಲಕೃಷ್ಣ, ಜಿಲ್ಲಾ ಪಂಚಾಯತ್ ಮಾಜಿ ಮುಖ್ಯಸ್ಥ ಇಕ್ಬಾಲ್ ಹುಸೇನ್, ಮಾಜಿ ಶಾಸಕ ನರೇಂದ್ರ ಸ್ವಾಮಿ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಸದಸ್ಯರುಗಳಿಗೆ ಮತದಾರರನ್ನು ತಲುಪಲು ವಿಶೇಷ ಕೆಲಸಗಳನ್ನು ವಹಿಸಲಾಗಿದೆ.

ಡಿ.ಕೆ. ಶಿವಕುಮಾರ್ ಅವರೇ ಮುಂದೆ ನಿಂತು ಪ್ರಚಾರ ನಡೆಸುತ್ತಿದ್ದಾರೆ, ಒಕ್ಕಲಿಗ ಮತದಾರರ ಬಲವರ್ಧನೆಯತ್ತ ಗಮನ ಹರಿಸಿದ್ದಾರೆ. ಮಾಜಿ ಸಚಿವ ನರೇಂದ್ರಸ್ವಾಮಿ ಅವರು ಆರ್.ಆರ್.ನಗರ ಸ್ಥಾನವನ್ನು ಉಳಿಸಿಕೊಳ್ಳಲು ಶ್ರಮಿಸುತ್ತಿದ್ದಾರೆ ಮತ್ತು ಮೊದಲ ಬಾರಿಗೆ ಚುನಾವಣಾ ಸ್ಪರ್ಧಿ ಎಚ್.ಕುಸುಮಾ ಅವರ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ. ಇನ್ನು ಜೆಡಿಎಸ್ ನಿಂದ 90ರ ಆಸುಪಾಸು ಸಮೀಪದಲ್ಲಿರುವ ದೇವೇಗೌಡರು ಮತ್ತು ಎಚ್ ಡಿ ಕುಮಾರಸ್ವಾಮಿ ಕೂಡ ತಮ್ಮದೇ ಕ್ಷೇತ್ರದ ನಾಯಕರನ್ನು ಎರಡೂ ಕ್ಷೇತ್ರಗಳಿಗೆ ಕರೆತಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com