ಜನರ ಮತಗಳನ್ನು ದುರುಪಯೋಗಪಡಿಸಿಕೊಂಡವರಿಗೆ ಪಾಠ ಕಲಿಸಿ: ನಿಖಿಲ್ ಕುಮಾರಸ್ವಾಮಿ

ಹಣದಿಂದ ಮತಗಳನ್ನು ಖರೀದಿಸುತ್ತೇವೆ ಎಂಬ ದುರಹಂಕಾರದಿಂದ ವರ್ತಿಸುವ ಹಾಗೂ ರಾಷ್ಟ್ರೀಯ ಪಕ್ಷಗಳಿಗೆ ಜನರ ಮತಗಳನ್ನು ದುರುಪಯೋಗ ಪಡಿಸಿಕೊಂಡವರಿಗೆ ಉಪಚುನಾವಣೆಯಲ್ಲಿ ರಾಜ್ಯದ ಜನತೆ ತಕ್ಕಪಾಠ ಕಲಿಸಬೇಕೆಂದು ಜೆಡಿಎಸ್ ಯುವಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ನಿಖಿಲ್ ಕುಮಾರಸ್ವಾಮಿ
ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಹಣದಿಂದ ಮತಗಳನ್ನು ಖರೀದಿಸುತ್ತೇವೆ ಎಂಬ ದುರಹಂಕಾರದಿಂದ ವರ್ತಿಸುವ ಹಾಗೂ ರಾಷ್ಟ್ರೀಯ ಪಕ್ಷಗಳಿಗೆ ಜನರ ಮತಗಳನ್ನು ದುರುಪಯೋಗ ಪಡಿಸಿಕೊಂಡವರಿಗೆ ಉಪಚುನಾವಣೆಯಲ್ಲಿ ರಾಜ್ಯದ ಜನತೆ ತಕ್ಕಪಾಠ ಕಲಿಸಬೇಕೆಂದು ಜೆಡಿಎಸ್ ಯುವಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಆರ್.ಆರ್.ನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಪರ ಪ್ರಚಾರ ನಡೆಸಿ ಮಾತನಾಡಿದ ನಿಖಿಲ್, ಪರಮಾವಧಿಯಲ್ಲಿ ಬಿಜೆಪಿ, ಕಾಂಗ್ರೆಸ್‌ ಪಕ್ಷಗಳಿವೆ. ನಿಮ್ಮ ಮತಗಳನ್ನು ದುರುಪಯೋಗಪಡಿಸಿಕೊಂಡವರಿಗೆ ತಕ್ಕ ಪಾಠ ಕಲಿಸಿ ಎಂದು ಮನವಿ ಮಾಡಿದರು.

ಕಾಂಗ್ರೆಸ್ ನಿಂದ ಕುಸುಮಾ ಸ್ಪರ್ಧಿಸುತ್ತಿದ್ದರೆ ಬಿಜೆಪಿಯಿಂದ ಮುನಿರತ್ನ ಇನ್ನು ಜೆಡಿಎಸ್ ನಿಂದ ಕೃಷ್ಣಮೂರ್ತಿ ಕಣದಲ್ಲಿದ್ದಾರೆ.

ನ. 3ರಂದು ಮತದಾತ ನಡೆಯಲಿದ್ದು ಮುಂಜಾಗ್ರತ ಕ್ರಮವಾಗಿ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ನವೆಂಬರ್ 1ರ ಸಂಜೆ 5 ಗಂಟೆಯಿಂದ ನ.3ರ ಮಧ್ಯಾರಾತ್ರಿ 12 ಗಂಟೆವರೆಗೆ ಮದ್ಯ ಮಾರಾಟ ನಿಷೇಧಗೊಳಿಸಲಾಗಿದ್ದು ಇದೇ ವೇಳೆ ಮತ ಎಣಿಕೆ ನಡೆಯಲಿರುವ ನವೆಂಬರ್ 10ರಂದು ಸಹ ನಿಷೇಧ ಜಾರಿಗೊಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com