ಯಾವ್ಯಾವ ನಾಯಕರಿಗೆ, ಏನೇನೂ ಸೇವೆ ಮಾಡಿ 15 ವರ್ಷದಲ್ಲಿ 2 ಬಾರಿ ಮುಖ್ಯಮಂತ್ರಿಗಳಾದಿರಿ ?

ಯಾವ್ಯಾವ ನಾಯಕರಿಗೆ, ಏನೇನೂ ಸೇವೆ ಮಾಡಿ 1೫ ವರ್ಷದಲ್ಲಿ 2 ಬಾರಿ ಮುಖ್ಯಮಂತ್ರಿಗಳಾದಿರಿ ಎಂಬ ಬಗ್ಗೆಯೂ ಒಮ್ಮೆ ತಮ್ಮನ್ನು ಕೇಳಬಹುದೇ? 
ಎಚ್ .ಡಿ ಕುಮಾರಸ್ವಾಮಿ
ಎಚ್ .ಡಿ ಕುಮಾರಸ್ವಾಮಿ

ಬೆಂಗಳೂರು: ಯಾವ್ಯಾವ ನಾಯಕರಿಗೆ, ಏನೇನೂ ಸೇವೆ ಮಾಡಿ 1೫ ವರ್ಷದಲ್ಲಿ 2 ಬಾರಿ ಮುಖ್ಯಮಂತ್ರಿಗಳಾದಿರಿ ಎಂಬ ಬಗ್ಗೆಯೂ ಒಮ್ಮೆ ತಮ್ಮನ್ನು ಕೇಳಬಹುದೇ? ಪಕ್ಕದಲ್ಲಿ ಧರಮ್ ಸಿಂಗ್  ಅವರನ್ನು ಇಟ್ಟುಕೊಂಡು, ಕೆಲವು ಸ್ನೇಹಿತರೊಂದಿಗೆ ರಾತ್ರೋರಾತ್ರಿ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದ್ದ ಹಿನ್ನಲೆ ಬಗ್ಗೆ ಜನರೇ ಮಾತನಾಡುತ್ತಿದ್ದಾರೆ. ಒಮ್ಮೆ ಕೇಳಿಸಿಕೊಳ್ಳಿ  ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರಿಗೆ ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್ ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿಯನ್ನು ಕುಟುಕಿದ ಸುಧಾಕರ್‌ನಾನು ಯಾವ ಮುಂಬೈಗೂ ಹೋಗಿಲ್ಲ. ಡ್ರಗ್ ಮಾಫಿಯಾ ಹಣದಿಂದ ಈ ಸರ್ಕಾರ ಬಂದಿದ್ದರೆ, ಅದು ಖಂಡಿತ ಇರಬಾರದು. ಮಾಜಿ ಮುಖ್ಯಮಂತ್ರಿಗಳಾಗಿ ಇಂಥ ಗಂಭೀರ ಆರೋಪಗಳಿಗೆ ಪುರಾವೆಯನ್ನೂ ನೀಡಲೇಬೇಕಾಗುತ್ತದೆ. ಇದನ್ನು ತಾವು ಸಾಬೀತು ಮಾಡಿದರೆ ನಾನು ರಾಜೀನಾಮೆ ಕೊಡುತ್ತೇನೆ ಆಗದಿದ್ದರೆ
ರಾಜಕೀಯ ನಿವೃತ್ತಿ ತೆಗೆದುಕೊಳ್ಳುವಿರಾ? ಎಂದು ಕುಮಾರಸ್ವಾಮಿಗೆ ಸುಧಾಕರ್‌ ಸವಾಲು ಹಾಕಿದ್ದಾರೆ.

ಈ ಹಿಂದೆ ಟ್ವೀಟ್ ಮೂಲಕ ಡಾ| ಸುಧಾಕರ್ ವಿರುದ್ಧ ವ್ಯಯಕ್ತಿಕ ದಾಳಿ‌‌ ಮಾಡಿದ್ದ ಕುಮಾರಸ್ವಾಮಿ, "ಕಳೆದ ಎರಡು ದಶಕಗಳಿಂದ ಸುಧಾಕರ್ ಅವರು ಯಾವ್ಯಾವ ನಾಯಕರಿಗೆ ಎಂತೆಂಥ ಸೇವೆಗಳನ್ನು ಮಾಡಿದ್ದಾರೆ ಎಂಬ ಹಿನ್ನೆಲೆ ಬಗ್ಗೆ ನಾನು ಮಾತನಾಡಲಾರೆ. ಅವರು ರಾಜಕೀಯ ನೆಲೆ ಬದಲಿಸಿ ರಾತ್ರೋರಾತ್ರಿ ವಿಮಾನವೇರಿದ ಮುಂಬೈವೀರ" ಎಂದು
ಸುಧಾಕರ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇನ್ನೂ ಕುಮಾರಸ್ವಾಮಿ ಅವರ ಆರೋಪಗಳಿಗೂ ಉತ್ತರ ನೀಡಿರುವ ಸುಧಾಕರ್‌, "ಸರ್ಕಾರದ ವಿರುದ್ಧ ತಮ್ಮ ಆರೋಪಗಳಿಗೆ ಪುರಾವೆ ನೀಡಿ. ಸರ್ಕಾರದಲ್ಲಿ ಸಚಿವನಾಗಿ ಸರ್ಕಾರದ ವಿರುದ್ಧ ಆಧಾರರಹಿತ ಆರೋಪ ಮಾಡಿದರೆ ಅದಕ್ಕೆ ಪುರಾವೆ ಕೇಳುವುದು ಹೆಗಲು ಮುಟ್ಟಿಕೊಳ್ಳುವ ಪ್ರಮೇಯ ಹೇಗಾದೀತು?

ತಮ್ಮ ಆರೋಪಗಳ ಹಿನ್ನಲೆ ಆಧಾರಗಳ ಬಗ್ಗೆ ಕೇಳಿದ್ದೇನೆ. ನಾನು ಮಾಜಿ ಮುಖ್ಯಮಂತ್ರಿ ಮಾಜಿ ಪ್ರಧಾನಮಂತ್ರಿಯ ಮಗನಲ್ಲ, ಒಬ್ಬ ಸಾಮಾನ್ಯ ಶಾಲಾ ಶಿಕ್ಷಕನ ಮಗನಾಗಿ ಸ್ವಸಾಮರ್ಥ್ಯದಿಂದ, ಜನರ ಆಶೀರ್ವಾದದಿಂದ ರಾಜಕೀಯದಲ್ಲಿ ಸಕ್ರಿಯನಾಗಿದ್ದೇನೆ. ನಾನೆಂದೂ ಯಾರ ಹೆಸರಿನಲ್ಲೂ ರಾಜಕೀಯ ಮಾಡಿಲ್ಲ. ಎಲ್ಲರ ಹಿನ್ನಲೆಗಳನ್ನೂ ರಾಜ್ಯದ ಜನರು ಗ್ರಹಿಸಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com