ಬಿಜೆಪಿಗೆ ಅನುಕೂಲವಾಗುವಂತೆ ಸರ್ಕಾರ ಗ್ರಾಮಪಂಚಾಯತ್ ಮೀಸಲಾತಿ ಸಿದ್ದಪಡಿಸಿದೆ: ದೇವೇಗೌಡ

ಗ್ರಾಮ ಪಂಚಾಯತ್ ಚುನಾವಣೆಗಾಗಿ ಸರ್ಕಾರ ಸಿದ್ದಪಡಿಸಿರುವ ಮೀಸಲಾತಿ ಸಂಪೂರ್ಣ ರಾಜಕೀಯವಾಗಿದ್ದು ಮುಂದಿನ ದಿನಗಳಲ್ಲಿ ಜೆಡಿಎಸ್ ಇದರ ವಿರುದ್ಧ ಹೋರಾಟ ನಡೆಸುವುದು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಎಚ್ಚರಿಸಿದ್ದಾರೆ.

Published: 04th September 2020 08:25 AM  |   Last Updated: 04th September 2020 08:25 AM   |  A+A-


HD devegowda

ಎಚ್.ಡಿ ದೇವೇಗೌಡ

Posted By : Shilpa D
Source : The New Indian Express

ಬೆಂಗಳೂರು: ಗ್ರಾಮ ಪಂಚಾಯತ್ ಚುನಾವಣೆಗಾಗಿ ಸರ್ಕಾರ ಸಿದ್ದಪಡಿಸಿರುವ ಮೀಸಲಾತಿ ಸಂಪೂರ್ಣ ರಾಜಕೀಯವಾಗಿದ್ದು ಮುಂದಿನ ದಿನಗಳಲ್ಲಿ ಜೆಡಿಎಸ್ ಇದರ ವಿರುದ್ಧ ಹೋರಾಟ ನಡೆಸುವುದು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಎಚ್ಚರಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಜೆಡಿಎಸ್ ಮುಖಂಡರು ಮತ್ತು ಜಿಲ್ಲಾ ಹಾಗೂ ತಾಲೂಕು ಅಧ್ಯಕ್ಷರ ಜೊತೆ ನಡೆಸಿದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು ಮೀಸಲಾತಿ ಪಟ್ಟಿ ವಿರುದ್ಧ ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಜೆಡಿಎಸ್ ಸಿದ್ಧತೆ ನಡೆಸುತ್ತಿದ್ದು, ಚುನಾವಣಾ ಸಮಯದಲ್ಲಿ ಪಕ್ಷವನ್ನು ವ್ಯವಸ್ಥಿತ ರೀತಿಯಲ್ಲಿ ನಿರ್ಮಿಸಬೇಕೆಂದು ಅವರು ಆಗ್ರಹಿಸಿದರು. ಈಗಾಗಲೇ ಗ್ರಾಮ ಪಂಚಾಯತಿ ಮೀಸಲಾತಿ ಪಟ್ಟಿ ಬಿಡುಗಡೆಯಾಗಿದೆ, ಇದರ ವಿರುದ್ಧ ಹೋರಾಟ ನಡೆಸುವುದಾಗಿ ದೇವೇಗೌಡ ತಿಳಿಸಿದ್ದಾರೆ. 

ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ತಮ್ಮ ಅವಶ್ಯಕತೆಗೆ ಅನುಗುಣವಾಗಿ ಮೀಸಲಾತಿ ಪಟ್ಟಿ ಸಿದ್ದಮಾಡಿಕೊಂಡಿದೆ, ಜೆಡಿಎಸ್ ಮೇಲುಗೈ ಇರುವ ಪ್ರದೇಶಗಳಲ್ಲಿ ಮೀಸಲಾತಿ ಬದಲಾವಣೆ ಮಾಡಲಾಗಿದೆ ಎಂದು ಶಾಸಕ ಬಂಡೆಪ್ಪ ಕಾಶೆಂಪೂರ್ ಆರೋಪಿಸಿದ್ದಾರೆ.

Stay up to date on all the latest ರಾಜಕೀಯ news
Poll
RBI

ಕಾರ್ಪೊರೇಟ್‌ ಕಂಪನಿಗಳಿಗೆ ಬ್ಯಾಂಕ್‌ ಆರಂಭಿಸಲು ಅನುಮತಿಸುವಂತೆ ಕೇಂದ್ರ ಸರ್ಕಾರಕ್ಕೆ ಆರ್ ಬಿಐ ನೀಡಿರುವ ಸಲಹೆಯನ್ನು ಸ್ವಾಗತಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp