ಎಸ್ ಸುರೇಶ್ ಕುಮಾರ್ ರಾಜೀನಾಮೆಗೆ ಡಿಕೆಶಿ ಒತ್ತಾಯಿಸುತ್ತಿರುವುದು ಹಾಸ್ಯಾಸ್ಪದ: ಎನ್. ರವಿಕುಮಾರ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವುದು ಹಾಸ್ಯಾಸ್ಪದ. 
ಸುರೇಶ್ ಕುಮಾರ್
ಸುರೇಶ್ ಕುಮಾರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವುದು ಹಾಸ್ಯಾಸ್ಪದ. 

ವಾಸ್ತವವಾಗಿ ಸುರೇಶ್ ಕುಮಾರ್ ಅವರ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಕೆಪಿಸಿಸಿ ಅಧ್ಯಕ್ಷರಿಗೆ ಇಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಹೇಳಿದ್ದಾರೆ.

ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಮತ್ತು ಸಿಇಟಿ ಪರೀಕ್ಷೆಗಳು ಸುರಕ್ಷಿತ ವಾತಾವರಣದಲ್ಲಿ ಸುಗಮವಾಗಿ ಮತ್ತು ಯಾವುದೇ ಒತ್ತಡವಿಲ್ಲದೆ ಮುಕ್ತವಾಗಿ ನಡೆದಿವೆ. ಶೇಕಡಾ 98ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದು ಆನಂದವಾಗಿ ಹೊರಬಂದಿದ್ದಾರೆ. 

ಸುರೇಶ್ ಕುಮಾರ್ ಎಲ್ಲಾ ಜಿಲ್ಲೆಗಳಿಗೂ ಪ್ರವಾಸ ಮಾಡಿ ಸುರಕ್ಷತಾ ಕ್ರಮಗಳ ಕುರಿತಂತೆ ಅಧಿಕಾರಿಗಳು, ಶಿಕ್ಷಕರು ಮತ್ತು ಪಾಲಕರೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಿ ಈ ಮೂರೂ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿ, ಪಾಲಕರು ಮತ್ತು ವಿದ್ಯಾರ್ಥಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ರವಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪರೀಕ್ಷೆಗಳು ನಡೆದ  ಆ ದಿನಗಳ ದಿನಪತ್ರಿಕೆಗಳನ್ನು ಕೆಪಿಸಿಸಿ ಅಧ್ಯಕ್ಷರು ಒಮ್ಮೆ ನೋಡಬೇಕು, ಎಲ್ಲಾ ಪತ್ರಿಕೆಗಳೂ ಸುಗಮವಾಗಿ ಪರೀಕ್ಷೆ  ನಡೆಸಿದ್ದಕ್ಕಾಗಿ ಸುರೇಶ್ ಕುಮಾರ್ ಅವರಿಗೆ 100ಕ್ಕೆ 100 ಅಂಕ ನೀಡಿದ್ದವು ಮತ್ತು ಶಿಕ್ಷಣ ಸಚಿವರು ಪ್ರಥಮ ರಾಂಕ್ ನಲ್ಲಿ ಪಾಸಾಗಿದ್ದಾರೆ ಎಂದು ಬಣ್ಣಿಸಿದ್ದವು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com