ಆರ್ ಎಸ್ ಎಸ್ ಮಾದರಿಯಲ್ಲಿ ಕಾರ್ಯಕರ್ತರಿಗೆ ತರಬೇತಿ ನೀಡಲು ಮುಂದಾದ ಕಾಂಗ್ರೆಸ್!

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಾದರಿಯಲ್ಲಿ ತರಬೇತಿ ನೀಡಲು ಕಾಂಗ್ರೆಸ್ ಪಕ್ಷ ನೀಡಲು ಸಜ್ಜಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಮೇಲೆ ಪಕ್ಷವನ್ನು ತಳ ಮಟ್ಟದಿಂದ ಬೂತ್ ಮಟ್ಟದಲ್ಲಿ ಸಂಘಟಿಸಲು ನಿರ್ಧರಿಸಿದ್ದಾರೆ
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ಪಕ್ಷವನ್ನು ಪುನರುಜ್ಜೀವನಗೊಳಿಸಲು ಮುಂದಾಗಿರುವ ಕಾಂಗ್ರೆಸ್ ತನ್ನ ಕಾರ್ಯಕರ್ತರಿಗೆ ವಸತಿ ಶಿಬಿರದ ಮೂಲಕ ತರಬೇತಿ ನೀಡಲು ನಿರ್ಧರಿಸಿದೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಾದರಿಯಲ್ಲಿ ತರಬೇತಿ ನೀಡಲು ಕಾಂಗ್ರೆಸ್ ಪಕ್ಷ ನೀಡಲು ಸಜ್ಜಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಮೇಲೆ ಪಕ್ಷವನ್ನು ತಳ ಮಟ್ಟದಿಂದ ಬೂತ್ ಮಟ್ಟದಲ್ಲಿ ಸಂಘಟಿಸಲು ನಿರ್ಧರಿಸಿದ್ದಾರೆ. 

ಪಕ್ಷವನ್ನು ಸಂಘಟಿಸಲು ಕಾಂಗ್ರೆಸ್ ಸೇವಾ ದಳ ತಂಡ ರಚಿಸಿದ್ದು, ವಾರದಲ್ಲಿ ಮೂರು ದಿನ ತಾಲೂಕು ಮಟ್ಟದಲ್ಲಿ ಕಾರ್ಯಕರ್ತರಿಗೆ ತರಬೇತಿ ಶಿಬಿರ ನಡೆಸಲು  ಯೋಜಿಸಿದೆ, ಈ ಶಿಬಿರದಲ್ಲಿ  ಸಂವಿಧಾನ ಮತ್ತು ಸಿದ್ಧಾಂತಗಳ ಮೇಲೆ ಗಮನ ಕೇಂದ್ರೀಕರಿಸಲಾಗುತ್ತಿದೆ

ಕಾಂಗ್ರೆಸ್ ಕೇವಲ ರಾಜಕೀಯ ಪಕ್ಷ ಮಾತ್ರವಲ್ಲ, ಇದೊಂದು ಕ್ರಾಂತಿಕಾರಿ  ಮತ್ತು ಹೋರಾಟಗಾರ ಪಕ್ಷ, ಪಕ್ಷಕ್ಕೆ ತನ್ನದೇ ಆದ ಇತಿಹಾಸವಿದೆ, ಮೌಲ್ಯ, ಸಿದ್ಧಾಂತಗಳ ಜೊತೆಗೆ ಬ್ರಿಟಿಷರ ಜೊತೆ ಹೋರಾಟ ನಡೆಸಿದ ಪಕ್ಷವಾಗಿದೆ. ಸಮಾಜದ ಒಂದು ವರ್ಗವಾಗಿದೆ. ಕೆಲವು ರಾಜಕೀಯ ಪಕ್ಷಗಳು ಜನರ ದಾರಿ ತಪ್ಪಿಸುತ್ತಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.

ಇಂದಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಮಹಾತ್ಮ ಗಾಂಧಿ ಮತ್ತು ಜವಹರ್ ಲಾಲ್ ನೆಹರು ವಿರುದ್ದ ಸುಳ್ಳು ಸುದ್ದಿಗಳನ್ನು ಹರಿ ಬಿಡಲಾಗುತ್ತಿದೆ,. ನಾವು ಸತ್ಯವನ್ನು ಯುವಕರಿಗೆ ತಿಳಿಸಬೇಕಾಗಿದೆ.  ಜೊತೆಗೆ ಯಾವುದು ಸರಿ ಯಾವುದು ತಪ್ಪು ಎಂಬುದರ ಬಗ್ಗೆ ಅರಿವು ಮೂಡಿಸಬೇಕಾಗಿದೆ ಈ ನಿಟ್ಟಿನಲ್ಲಿ ಅವರಿಗೆ ತರಬೇತಿ ನೀಡಬೇಕಾಗಿದೆ ಎಂದು ಖಂಡ್ರೆ ತಿಳಿಸಿದ್ದಾರೆ.

ಹಾಸ್ಟೆಲ್, ಸಮುದಾಯ ಭವನ ಮತ್ತಿತರ ಸ್ಥಳಗಳಲ್ಲಿ ನಮ್ಮ ತರಬೇತಿ ಶಿಬಿರ ಆಯೋಜಿಸಲಿದ್ದೇವೆ, ಒಂದು ಬಾರಿಗೆ ಸುಮಾರು 100-150 ಜನರನ್ನು ಸೇರಿಸಿ ತರಬೇತಿ ನೀಡಲು ಸಾಧ್ಯವಾಗುವಂತ ಸ್ಥಳಗಳಲ್ಲಿ ಆಯೋಜನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ನಮ್ಮ ಆಂತರಿಕ ಸಂಪನ್ಮೂಲ ತಂಡವು ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ಆಸಕ್ತ ಯುವಕರಿಗೆ ಸಂಬಂಧಿಸಿದಂತೆ ಸಭೆಗಳನ್ನು ನಡೆಸಲಿದೆ ಎಂದು ಹೇಳಿದರು. ಪ್ರತಿ ವರ್ಷ ಆರ್ ಎಸ್ ಎಸ್ ಸಂಘಟನೆ ಕೆಲವು ಆಯ್ದ ಸದಸ್ಯರಿಗೆ ವಿಶೇಷವಾಗಿ ಯುವಕರಿಗೆ ಹಲವು ವಿಷಯಗಳ ಬಗ್ಗೆ ತರಬೇತಿ ನೀಡುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com