ಸಿಎಂ ಯಡಿಯೂರಪ್ಪ ಭೇಟಿ ಮಾಡಿದ ಹೆಚ್.ಡಿ ಕುಮಾರಸ್ವಾಮಿ; ಕುತೂಹಲ ಮೂಡಿಸಿದ ಭೇಟಿ

ಮೈತ್ರಿ ಸರ್ಕಾರ ಪತನಗೊಂಡು ಒಂದು ವರ್ಷವಾದ‌ ಬಳಿಕ ಇದೇ ಮೊದಲ‌ ಬಾರಿಗೆ ಮಹತ್ವದ ರಾಜಕೀಯ ಬೆಳವಣಿಕೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಕುತೂಹಲ‌ ಮೂಡಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮೈತ್ರಿ ಸರ್ಕಾರ ಪತನಗೊಂಡು ಒಂದು ವರ್ಷವಾದ‌ ಬಳಿಕ ಇದೇ ಮೊದಲ‌ ಬಾರಿಗೆ ಮಹತ್ವದ ರಾಜಕೀಯ ಬೆಳವಣಿಕೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಕುತೂಹಲ‌ ಮೂಡಿಸಿದೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿ‌ ಅನುದಾನ ಹಂಚಿಕೆ ಸೇರಿದಂತೆ ಮತ್ತಿತರ ವಿಷಯಗಳ ಕುರಿತು ಚರ್ಚಿಸಿದರು.

ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕಳೆದೆರಡು ದಿನದಿಂದ ಬೆಂಗಳೂರಿನಲ್ಲಿ ಸಾಕಷ್ಟು ಮಳೆ ಆಗುತ್ತಿದ್ದು, ಪಕ್ಷದ ಶಾಸಕ‌ ಮಂಜುನಾಥ್ ದಾಸರಹಳ್ಳಿ ಅವರ ಕ್ಷೇತ್ರದಲ್ಲಿಯೂ ಸಾಕಷ್ಟು ಹಾನಿ ಆಗಿದೆ. ತಾವು ಮುಖ್ಯಮಂತ್ರಿಯಾಗಿದ್ದಾಗ 515 ಕೋಟಿಯ ಯೋಜನೆಗೆ ಅನುಮೋದನೆ ಕೊಟ್ಟಿದ್ದೆ.ಆದರೆ ಈಗಿನ ಸರ್ಕಾರ ಕೇವಲ 16 ಕೋಟಿ‌‌ ಮಾತ್ರ ನೀಡಿದೆ. ಹೀಗಾಗಿ ಮಳೆ ಅನಾಹುತ ನಿರ್ವಹಣೆ ಅಗತ್ಯ ನೆರವು ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com