ಕೊಲಂಬೋ ಪ್ರವಾಸ ಮಾಡಿದ್ದುನಿಜ, ಕದ್ದು ಮುಚ್ಚಿ 'ಕೊಲಂಬೋ ಯಾತ್ರೆ' ಮಾಡಿರಲಿಲ್ಲ: ಕುಮಾರಸ್ವಾಮಿ
ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ ಹಾಗೂ ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು ಹಾಗೂ ಪ್ರಮುಖ ನಾಯಕರೊಂದಿಗೆ ಶ್ರೀಲಂಕಾದ ಕೊಲಂಬೋಗೆ ಒಮ್ಮೆ ಪ್ರವಾಸ ಹೋಗಿದ್ದು ನಿಜ. ಆದರೆ, ಕದ್ದು ಮುಚ್ಚಿ 'ಕೊಲಂಬೋ ಯಾತ್ರೆ' ಮಾಡಿರಲಿಲ್ಲ ಎಂದು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ
Published: 12th September 2020 03:37 PM | Last Updated: 12th September 2020 03:37 PM | A+A A-

ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ ಹಾಗೂ ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು ಹಾಗೂ ಪ್ರಮುಖ ನಾಯಕರೊಂದಿಗೆ ಶ್ರೀಲಂಕಾದ ಕೊಲಂಬೋಗೆ ಒಮ್ಮೆ ಪ್ರವಾಸ ಹೋಗಿದ್ದು ನಿಜ. ಆದರೆ, ಕದ್ದು ಮುಚ್ಚಿ 'ಕೊಲಂಬೋ ಯಾತ್ರೆ' ಮಾಡಿರಲಿಲ್ಲ ಎಂದು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಮಾಜಿ ಸಚಿವ, ಶಾಸಕ ಜಮೀರ್ ಅಹಮದ್ ಖಾನ್ ತಾವು ಏಳರಿಂದ ಎಂಟು ಬಾರಿ ಕೊಲಂಬೋ ಹೋಗಿದ್ದೆ, ಆದರೆ ಡ್ರಗ್ಸ್ ವಿಚಾರದಲ್ಲಿ ಉದ್ಯಮಿ ಪ್ರಶಾಂತ್ ಸಂಬರಗಿ ಹೇಲಿದಂತೆ ಸಂಜನಾ ಗಲ್ರಾನಿ ಜತೆಗಲ್ಲ ಎಂದು ಹೇಳಿದ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ತಾವು "ಕದ್ದು ಮುಚ್ಚಿ ಕೊಲಂಬೋ ಯಾತ್ರೆ ಮಾಡಿಲ್ಲ" ಎಂದು ಟ್ವೀಟ್ ಮಾಡಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿದ ಕುಮಾರಸ್ವಾಮಿ "ಒಂದಾನೊಂದು ಕಾಲದಲ್ಲಿ ನಮ್ಮ ಪಕ್ಷದಲ್ಲಿದ್ದ ರಾಜಕಾರಣಿಯೊಬ್ಬರು ಜೆಡಿಎಸ್ ಶಾಸಕರು ಮತ್ತು ನಾನು ಕೊಲಂಬೋ ಪ್ರವಾಸ ಕೈಗೊಂಡಿದ್ದಾಗಿ ನೀಡಿರುವ ಹೇಳಿಕೆ ಎತ್ತಣ ಮಾಮರ ಎತ್ತಣ ಕೋಗಿಲೆ ಎಂಬಂತಿದೆ.
"2014 ರ ಜೂನ್ ತಿಂಗಳಲ್ಲಿ ಪಕ್ಷ ಸಂಘಟನೆ ಬಗ್ಗೆ ವಿಸ್ತೃತವಾಗಿ ಚರ್ಚಿಸಲು ಕೊಲಂಬೋಗೆ ಪ್ರವಾಸ ಹೋಗುವುದಾಗಿ ಬಹಿರಂಗವಾಗಿಯೇ ಮಾಧ್ಯಮಗಳಿಗೆ ಹೇಳಿ ಹೋಗಿದ್ದಲ್ಲದೇ, ಅಲ್ಲಿ ನಡೆದ ಶಾಸಕರ ಜೊತೆಗಿನ ಚರ್ಚೆಯ ದೃಶ್ಯಾವಳಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದೆವು. ಇದರಲ್ಲಿ ಯಾವುದೇ ಗುಟ್ಟು ಇರಲಿಲ್ಲ.
"ನೆರೆಯ ರಾಜ್ಯ ಗೋವಾ ಇಲ್ಲವೇ ರಾಜ್ಯದ ರೆಸಾರ್ಟ್ನಲ್ಲಿ ಸಭೆ ನಡೆಸುವುದಕ್ಕಿಂತ ಯಾವುದೇ ಅಡಚಣೆ ಇಲ್ಲದೆ ಶಾಸಕರೊಂದಿಗೆ ಮುಕ್ತವಾಗಿ ಚರ್ಚಿಸಲು ಕೊಲಂಬೋ ಪ್ರವಾಸ ದುಬಾರಿಯಲ್ಲ ಎಂಬ ಕಾರಣಕ್ಕೆ ಇಂತಹ ಸಭೆ ನಡೆಸಿದ್ದು ನಿಜ. ವಿಮಾನ ಹತ್ತುವಾಗಲೂ ಮತ್ತು ವಾಪಸು ಬಂದಾಗ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದೇನೆ.
ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ ಹಾಗೂ ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು ಹಾಗೂ ಪ್ರಮುಖ ನಾಯಕರೊಂದಿಗೆ ಶ್ರೀಲಂಕಾದ ಕೊಲಂಬೋಗೆ ಒಮ್ಮೆ ಪ್ರವಾಸ ಹೋಗಿದ್ದು ನಿಜ. ಆದರೆ, ಕದ್ದು ಮುಚ್ಚಿ 'ಕೊಲಂಬೋ ಯಾತ್ರೆ' ಮಾಡಿರಲಿಲ್ಲ.
— H D Kumaraswamy (@hd_kumaraswamy) September 12, 2020
1/6
"ಕೊಲಂಬೋ ಪ್ರಯಾಣ ಅದೇ ಮೊದಲು ಮತ್ತು ಕೊನೆ. ಇದರಲ್ಲಿ ಬಚ್ಚಿಡುವುದು ಏನೇನೂ ಇಲ್ಲ. ಅವರು ನಮ್ಮೊಂದಿಗೆ ಬಂದಿದ್ದರೆ ಹೊರತು ನಾವು ಅವರೊಂದಿಗೆ ಹೋಗಿರಲಿಲ್ಲ." ಎಂದಿದ್ದಾರೆ ಮಾತ್ರವಲ್ಲದೆ ಪುರಂದರದಾಸರ "ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ" ದಾಸರ ಪದವನ್ನೂ ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.