ಕುಮಾರಸ್ವಾಮಿ ಜೊತೆ ರಾಜಕೀಯ ವಿಷಯದ ಚರ್ಚೆ ನಡೆದಿಲ್ಲ; ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ
ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ಅವರ ಜೊತೆ ಯಾವುದೇ ರಾಜಕೀಯ ವಿಚಾರಗಳ ಚರ್ಚೆ ಆಗಲಿಲ್ಲ. ಡ್ರಗ್ಸ್ ದಂಧೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರು ಯಾರೇ ಇದ್ದರೂ ಕ್ರಮ ಖಚಿತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
Published: 12th September 2020 08:33 AM | Last Updated: 12th September 2020 08:33 AM | A+A A-

ಯಡಿಯೂರಪ್ಪ
ಬೆಂಗಳೂರು: ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ಅವರ ಜೊತೆ ಯಾವುದೇ ರಾಜಕೀಯ ವಿಚಾರಗಳ ಚರ್ಚೆ ಆಗಲಿಲ್ಲ. ಡ್ರಗ್ಸ್ ದಂಧೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರು ಯಾರೇ ಇದ್ದರೂ ಕ್ರಮ ಖಚಿತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ದಾಸರಹಳ್ಳಿ ಕ್ಷೇತ್ರದಲ್ಲಿ ಹೆಚ್ಚಿನ ಮಳೆ ಬಿದ್ದು ಸಾಕಷ್ಟು ಹಾನಿಯಾಗಿದೆ. ಕ್ಷೇತ್ರಕ್ಕೆ ಹೆಚ್ಚಿನ ಹಣ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಲು ಕುಮಾರಸ್ವಾಮಿ ಮತ್ತು ಶಾಸಕ ಮಂಜುನಾಥ್ ಬಂದಿದ್ದರು. ಇಂತಹ ಸಮಸ್ಯೆ ಆದಾಗ ಕೂಡಲೇ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು ಎಂದು ಹೇಳಿದರು.
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿದ ಅವರು, ನಾವು ಎಲ್ಲಾ ಅಧಿಕಾರಿಗಳಿಗೆ ಮುಕ್ತವಾಗಿ ಕೆಲಸ ಮಾಡಲು ಅವಕಾಶ ಕಲ್ಪಿಸಿದ್ದೇವೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಡ್ರಗ್ಸ್ ಬಗ್ಗೆ ಸಮಗ್ರವಾಗಿ ದೊಡ್ಡಮಟ್ಟದ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರು ಯಾರೇ ಅಗಲಿ ಎಷ್ಟೇ ಶಕ್ತಿವಂತರಾದರೂ ನಾವು ಅವರ ವಿರುದ್ದ ಕ್ರಮಕೈಗೊಳ್ಳುತ್ತೇವೆ ಎಂದು ಯಡಿಯೂರಪ್ಪ ಪುನರುಚ್ಚರಿಸಿದರು.