ಶಿರಾದಲ್ಲಿ ಬಂಡಾಯದ ಸೂಚನೆ: ಡಿಕೆಶಿ ಭೇಟಿ ಮಾಡಿದ ರಾಜಣ್ಣ

ಶಿರಾ ವಿಧಾನಸಭೆ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಪ್ರಬಲ ಆಕಾಂಕ್ಷಿಯಾಗಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ,  ಟಿಕೆಟ್ ಸಿಗದ ಕಾರಣ ಬಂಡಾಯದ ಮುನ್ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ರಾಜಣ್ಣ ಅವರೊಂದಿಗೆ ಸಮಾಲೋಚನೆ ನಡೆಸಿದರು. 
ಕೆ.ಎನ್. ರಾಜಣ್ಣ, ಡಿಕೆ ಶಿವಕುಮಾರ್
ಕೆ.ಎನ್. ರಾಜಣ್ಣ, ಡಿಕೆ ಶಿವಕುಮಾರ್

ಬೆಂಗಳೂರು: ಶಿರಾ ವಿಧಾನಸಭೆ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಪ್ರಬಲ ಆಕಾಂಕ್ಷಿಯಾಗಿರುವ ಮಾಜಿ ಶಾಸಕ ಕೆ.ಎನ್.ರಾಜಣ್ಣ, ಟಿಕೆಟ್ ಸಿಗದ ಕಾರಣ ಬಂಡಾಯದ ಮುನ್ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ರಾಜಣ್ಣ ಅವರೊಂದಿಗೆ ಸಮಾಲೋಚನೆ ನಡೆಸಿದರು. 

ಸದ್ಯ ಎಲ್ಲಾ ರಾಜಕೀಯ ಪಕ್ಷಗಳ ಚಿತ್ತ ಶಿರಾದತ್ತ ನೆಟ್ಟಿದ್ದು, ಉಪಚುನಾವಣೆ ಘೋಷಣೆಗೂ ಮುನ್ನ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಕಾಂಗ್ರೆಸ್ ನಿಂದ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರಿಗೆ ಟಿಕೆಟ್ ಅಂತಿಮಗೊಳ್ಳುವ ಸಾಧ್ಯತೆಯಿದ್ದು, ಪ್ರಬಲ ಆಕಾಂಕ್ಷಿಯಾಗಿರುವ ಕೆ.ಎನ್.ರಾಜಣ್ಣಗೆ ಇದು ನುಂಗಲಾರದ ಬಿಸಿ ತುಪ್ಪವಾಗಿದೆ.

ಕಳೆದ ಲೋಕಸಭೆ ಚುನಾವಣೆಯಲ್ಲಿಯೂ ಕಾಂಗ್ರೆಸ್ ನಿಂದ ಟಿಕೆಟ್ ಬಯಸಿದ್ದ ರಾಜಣ್ಣ ಅವರಿಗೆ ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ಹೆಚ್.ಡಿ.ದೇವೇಗೌಡ ತುಮಕೂರಿನಿಂದ ಸ್ಪರ್ಧಿಸುವುದು ಬೇಕಿರಲಿಲ್ಲ. ಹೀಗಾಗಿ ಮೈತ್ರಿ ಅಭ್ಯರ್ಥಿಯ ವಿರುದ್ಧವಾಗಿ ರಾಜಣ್ಣ ಕೆಲಸ ಮಾಡಿದ್ದರು. ಇದೀಗ ಅಂತಹದ್ದೇ ಬಂಡಾಯದ ಬಾವುಟವನ್ನು ರಾಜಣ್ಣ ಕಾಂಗ್ರೆಸ್ ನಿಂದ ಮತ್ತೊಮ್ಮೆ ಹಾರಿಸುವ ಎಚ್ಚರಿಕೆ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com