ಸಂಪುಟ ವಿಸ್ತರಣೆ: ಮತ್ತೆ ದೆಹಲಿಗೆ ಹಾರಿದ ಜಾರಕಿಹೊಳಿ, 6 ವಾರದಲ್ಲಿ 3ನೇ ಪ್ರಯಾಣ

ಕರ್ನಾಟಕ ಸಂಪುಟ ವಿಸ್ತರಣೆ ವಿಚಾರ ಪ್ರಚಲಿತವಾಗುತ್ತಿದ್ದಂತೆಯೇ ಇತ್ತ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಮತ್ತೆ ದೆಹಲಿಗೆ ಹಾರಿದ್ದು, ಕಳೆದ 6 ವಾರಗಳಲ್ಲಿ ಇದು ಅವರ 3ನೇ ಪ್ರಯಾಣವಾಗಿದೆ.
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ

ಬೆಂಗಳೂರು: ಕರ್ನಾಟಕ ಸಂಪುಟ ವಿಸ್ತರಣೆ ವಿಚಾರ ಪ್ರಚಲಿತವಾಗುತ್ತಿದ್ದಂತೆಯೇ ಇತ್ತ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಮತ್ತೆ ದೆಹಲಿಗೆ ಹಾರಿದ್ದು, ಕಳೆದ 6 ವಾರಗಳಲ್ಲಿ ಇದು ಅವರ 3ನೇ ಪ್ರಯಾಣವಾಗಿದೆ.

ಸಂಪುಟ ವಿಸ್ತರಣೆ ವಿಚಾರ ಪ್ರಚಲಿತವಾಗುತ್ತಿದ್ದಂತೆಯೇ ರಮೇಶ್ ಜಾರಕಿಹೊಳಿ ಅವರ ದೆಹಲಿ ಪ್ರಯಾಣ ಕುತೂಹಲ ಕೆರಳಿಸಿದ್ದು, ಶೀಘ್ರದಲ್ಲೇ ಸಿಎಂ ಬಿಎಸ್ ಯಡಿಯೂರಪ್ಪ ಅವರೂ ಕೂಡ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೆಲ ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದಾರೆ. ಬಳಿಕ ಕೇಂದ್ರದ ಬಿಜೆಪಿ  ನಾಯಕರನ್ನು ಭೇಟಿ ಚರ್ಚಿಸಲಿದ್ದಾರೆ. 

ಅಧಿಕೃತವಾಗಿ ಸಚಿವ ರಮೇಶ್ ಜಾರಕಿಹೊಳಿ ಅವರು ದೆಹಲಿಯಲ್ಲಿ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಪ್ರಕಾಶ್ ಜವಡೇಕರ್ ಅವರನ್ನು ಭೇಟಿ ಕರ್ನಾಟಕ ಬಹು ನಿರೀಕ್ಷಿತ ಮೇಕೆದಾಟು ಯೋಜನೆ ಕುರಿತು ಚರ್ಚಿಸಲಿದ್ದಾರೆ ಎನ್ನಲಾಗಿದೆ. ಇದಕ್ಕೆ ಪೂರಕ ಎಂಬಂತೆ ಸಚಿವ ಜಾರಕಿಹೊಳಿ ಅವರು, ಕನಕಪುರ  ತಾಲ್ಲೂಕಿನ ಸಂಗಮ-ಮೇಕೆದಾಟು ಪ್ರದೇಶಕ್ಕೆ ಸೋಮವಾರ ಭೇಟಿ ನೀಡಿ, ಅಧಿಕಾರಿಗಳ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ಯೋಜನೆಗಾಗಿ 9 ಸಾವಿರ ಕೋಟಿ ವೆಚ್ಚದ ಡಿಪಿಆರ್ ಈಗಾಗಲೇ ಸಿದ್ಧವಾಗಿದೆ. ಕಳೆದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲೇ ಇದರ ಡಿಪಿಆರ್ ಸಿದ್ಧವಾಗಿದ್ದು, ನಂತರ  ನನೆಗುದಿಗೆ ಬಿದ್ದಿತ್ತು. ಈಗ ಮತ್ತೊಮ್ಮೆ ಪರಿಷ್ಕೃತ ಪ್ರಸ್ತಾವ ಸಲ್ಲಿಸಲಾಗುವುದು. ಮುಂದಿನ ವರ್ಷ ತಮಿಳುನಾಡಿನಲ್ಲಿ‌ ಚುನಾವಣೆ ಇದೆ. ಹೀಗಾಗಿ ನೆರೆಯ ರಾಜ್ಯದಿಂದ ಸಹಜವಾಗಿಯೇ ಇದಕ್ಕೆ ಅಡೆತಡೆ ಹೆಚ್ಚಿದೆ. ಅಗತ್ಯ ಬಿದ್ದರೆ ತಮಿಳುನಾಡು ಸರ್ಕಾರದ ಜೊತೆ ಮಾತುಕತೆ ನಡೆಸಲಾಗುವುದು ಎಂದರು.

ಅಂತೆಯೇ ತಾವು ದೆಹಲಿಗೆ ತೆರಳಿ ಯೋಜನೆ ಕುರಿತಂತೆ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸುತ್ತೇನೆ ಎಂದು ಹೇಳಿದರು. ಜಲಸಂಪನ್ಮೂಲ ಸಚಿವಾಲಯ ನೀಡಿರುವ ಮಾಹಿತಿ ಮೇರೆಗೆ ನಾಳೆ ಅಂದರೆ ಬುಧವಾರ ಸಚಿವರು ದೆಹಲಿಗೆ ತೆರಳಲಿದ್ದು, ಕೇಂದ್ರ ವಿವಿಧ ನಾಯಕರನ್ನು ಭೇಟಿ ಮಾಡಲಿದ್ದಾರೆ ಎಂದು  ಹೇಳಲಾಗಿದೆ. ಅಂತೆಯೇ ಶುಕ್ರವಾರದವರೆಗೂ ದೆಹಲಿಯಲ್ಲೇ ಉಳಿಯಲಿರುವ ಜಾರಕಿಹೊಳಿ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಲಾಭಿ ನಡೆಸುವ ಸಾಧ್ಯತೆ ಕೂಡ ಇದೆ ಎಂದು ಹೇಳಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com