ವಿಧಾನ ಮಂಡಲ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ತಿರುಗಿ ಬೀಳಲು ಪ್ರತಿಪಕ್ಷ ಕಾಂಗ್ರೆಸ್ ಸಜ್ಜು

ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಶ್ನಾವಳಿಯೊಂದಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಮುಗಿ ಬೀಳಲು ಕಾಂಗ್ರೆಸ್ ಶಾಸಕರು ಸಜ್ಜುಗೊಂಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಶ್ನಾವಳಿಯೊಂದಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಮುಗಿ ಬೀಳಲು ಕಾಂಗ್ರೆಸ್ ಶಾಸಕರು ಸಜ್ಜುಗೊಂಡಿದ್ದಾರೆ.

ವಿವಿಧ ವಿಚಾರಗಳ ಬಗ್ಗೆ ಸರ್ಕಾರದ ವಿರುದ್ಧ ದಾಳಿ ನಡೆಸಲು ಪ್ರಶ್ನೆ ಬ್ಯಾಂಕ್  ಬಳಸಿಕೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ , ಕಾಂಗ್ರೆಸ್ ಶಾಸಕಾಂಗ ಸಭೆಯ ವೇಳೆಯಲ್ಲಿ ತನ್ನ ಸಹೋದ್ಯೋಗಿಗಳಿಗೆ ಹೇಳಿದ್ದಾರೆ.

ಪ್ರವಾಹ, ಸಾಂಕ್ರಾಮಿಕ ರೋಗ, ಕೋವಿಡ್-19 ಸಲಕರಣೆಗಳ ಖರೀದಿಯಲ್ಲಿ ಭ್ರಷ್ಟಾಚಾರ, ಜಿಎಸ್ ಟಿ ಪರಿಹಾರ, ಸಾಲದ ಹೆಚ್ಚಳ ಮತ್ತಿತರ ವಿಚಾರಗಳನ್ನು ಮುಂದಿಟುಕೊಂಡು ಸರ್ಕಾರದ ವಿರುದ್ಧ ತಿರುಗಿ ಬೀಳುವಂತೆ ಅವರು ಸೂಚಿದ್ದಾರೆ.

ಎಪಿಎಂಸಿ ಕಾಯ್ದೆ ತಿದ್ದುಪಡಿಗೂ ಮುನ್ನ ಅಭಿಪ್ರಾಯ ಸಂಗ್ರಹಿಸಲು ರಾಜ್ಯಸರ್ಕಾರಕ್ಕೆ ಕೇಂದ್ರ ಸರ್ಕಾರ ಹೇಳಿಲ್ಲ, ರಾಜ್ಯ ಸರ್ಕಾರವನ್ನು ಸ್ಥಳೀಯ ಸಂಸ್ಥೆಯಂತೆ ಕೇಂದ್ರ ಸರ್ಕಾರ ಪರಿಗಣಿಸಿದೆ. ಸುಗ್ರೀವಾಜ್ಞೆಗಳ ಮೂಲಕ ಅನೇಕ ತಿದ್ದುಪಡಿಗಳನ್ನು ಸರ್ಕಾರ ಮಾಡಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ  ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರವಾಹ ಮತ್ತು ಬರ ಪರಿಹಾರದ ಬಗ್ಗೆ ಗಮನ ಸೆಳೆಯುವ ನಿರ್ಣಯವನ್ನು ಮಂಡಿಸಲು ಪಕ್ಷವು ಎದುರು ನೋಡುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com