ದೆಹಲಿಯಲ್ಲಿ ಸಂಪುಟ ಸರ್ಕಸ್: ಇಂದು ಪ್ರಧಾನಿ ಮೋದಿ, ನಡ್ಡಾ ಜೊತೆಗೆ ಸಿಎಂ ಯಡಿಯೂರಪ್ಪ ಚರ್ಚೆ

ರಾಜ್ಯದಲ್ಲಿ ಮತ್ತೆ ಸಂಪುಟ ಕಸರತ್ತು ಆರಂಭವಾಗಿದ್ದು, ಆಡಳಿತಾರೂಢ ಬಿಜೆಪಿಯ ರಾಷ್ಟ್ರೀಯ ನಾಯಕರು ನೀಡುವ ಸೂಚನೆ ಮೇಲೆ ಮುಂದಿನ ಬೆಳವಣಿಗೆಗಳು ಅವಲಂಬಿಸಿವೆ.
ಸಚಿವ ರಾಜನಾಥ್ ಸಿಂಗ್ ಅವರನ್ನು ಗುರುವಾರ ಭೇಟಿಯಾದ ಸಿಎಂ ಯಡಿಯೂರಪ್ಪ
ಸಚಿವ ರಾಜನಾಥ್ ಸಿಂಗ್ ಅವರನ್ನು ಗುರುವಾರ ಭೇಟಿಯಾದ ಸಿಎಂ ಯಡಿಯೂರಪ್ಪ

ನವದೆಹಲಿ: ರಾಜ್ಯದಲ್ಲಿ ಮತ್ತೆ ಸಂಪುಟ ಕಸರತ್ತು ಆರಂಭವಾಗಿದ್ದು, ಆಡಳಿತಾರೂಢ ಬಿಜೆಪಿಯ ರಾಷ್ಟ್ರೀಯ ನಾಯಕರು ನೀಡುವ ಸೂಚನೆ ಮೇಲೆ ಮುಂದಿನ ಬೆಳವಣಿಗೆಗಳು ಅವಲಂಬಿಸಿವೆ. ಈಗಾಗಲೇ ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಪ್ರಧಾನಮಂಡ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ, ಚರ್ಚೆ ನಡೆಸಲಿದ್ದಾರೆ. 

ಪ್ರಧಾನಿ ಮೋದಿ ಹಾಗೂ ಜೆಪಿ. ನಡ್ಡಾ ಅವರೊಂದಿಗೆ ಯಡಿಯೂರಪ್ಪ ಅವರು ಮಾತುಕತೆ ನಡೆಸಿದ ಬಳಿಕವಷ್ಟೇ ಸಂಪುಟ ವಿಸ್ತರಣೆ ಕುರಿತ ಸ್ಪಷ್ಟ ಚಿತ್ರಣಗಳು ಲಭ್ಯವಾಗಲಿದೆ. 

ಯಡಿಯೂರಪ್ಪ ಭೇಟಿ ಬೆನ್ನಲ್ಲೇ ಕೆಲ ಸಚಿವಾಕಾಂಕ್ಷಿಗಳೂ ಕೂಡ ಗುರುವಾರ ಪ್ರತ್ಯೇಕವಾಗಿ ದೆಹಲಿಗೆ ದೌಡಾಯಿಸಿದ್ದಾರೆ. ಶಾಸಕರಾದ ಹೆಚ್.ವಿಶ್ವನಾಥ್, ಸಿಪಿ ಯೋಗೀಶ್ವರ್, ಎಂ.ಪಿ.ರೇಣುಕಾಚಾರ್ಯ ಅವರು ಪಕೋಕ್ಷವಾಗಿ ಲಾಬಿ ನಡೆಸಿದ್ದಾರೆಂದು ಹೇಳಲಾಗುತ್ತಿದೆ. 

ಈ ನಡುವೆ ವಿಧಾನಮಂಡಲ ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ ಮಾಡಬೇಕೆಂಬುದು ನನ್ನ ಅಪೇಕ್ಷೆ ಆದರೆ, ರಾಜ್ಯದಲ್ಲಿ ಸಂಪುಟ ನಡೆಸಬೇಕೋ ಅಥವಾ ಪುನರ್ ರಚನೆ ಮಾಡಬೇಕೋ ಎಂಬ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com