ಕಾಡಿ ಬೇಡಿ ಮೋದಿ ಭೇಟಿಗೆ ಅವಕಾಶ ಪಡೆದಿದ್ದೀರಿ, ಇದನ್ನು ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿಗೆ ಬಳಸಿಕೊಳ್ಳಬೇಡಿ'

ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಪ್ರಯತ್ನ ಮಾಡುವ ಬದಲು, ರಾಜ್ಯದ ಹಿತರಕ್ಷಣೆಗೆ ಅಗತ್ಯ ಮಾತುಗಳನ್ನಾಡಿ ಎಂದು ಸಿಎಂ ಬಿಎಸ್ ಯಡಿಯೂರಪ್ಪಗೆ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಪ್ರಯತ್ನ ಮಾಡುವ ಬದಲು, ರಾಜ್ಯದಹಿತರಕ್ಷಣೆಗೆ ಅಗತ್ಯ ಮಾತುಗಳನ್ನಾಡಿ ಎಂದು ಸಿಎಂ ಬಿಎಸ್ ಯಡಿಯೂರಪ್ಪಗೆ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ರಾಷ್ಟ್ರೀಯ ನಾಯಕರ ಭೇಟಿ ಪ್ರಯುಕ್ತ ದಿಲ್ಲಿಗೆ ತೆರಳಿರುವ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ  ಮಾತುಕತೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ  ವೈಯಕ್ತಿಕ  ಅಭಿಲಾಷೆ ಮರೆತು, ರಾಜ್ಯದ ಹಿತದೃಷ್ಟಿಯ ಕುರಿತು ಮಾತನಾಡಿ ಎಂದು  ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಸಿಎಂಗೆ ಸಲಹೆ ನೀಡಿದ್ದಾರೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೇ, ಕಾಡಿ ಬೇಡಿ ಕೊನೆಗೂ ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಅವಕಾಶ ಪಡೆದಿದ್ದೀರಿ. ಈ ಅವಕಾಶವನ್ನು ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿಗೆ ಬಳಸಿಕೊಳ್ಳದೆ, ರಾಜ್ಯದ ಹಿತರಕ್ಷಣೆಗಾಗಿ ನಾಲ್ಕು ಮಾತುಗಳನ್ನು ಖಡಕ್ ಆಗಿ ಕೇಳಲು ಬಳಸಿಕೊಳ್ಳಿ. ರಾಜ್ಯದ ಜನ ನಿಮ್ಮ ಬೆನ್ನ ಹಿಂದಿದ್ದಾರೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಅವರೇ, ಕಳೆದ ವರ್ಷದ ಅತಿವೃಷ್ಟಿಗೆ ರೂ.35000 ಕೋಟಿ ಪರಿಹಾರ ಕೇಳಿದ್ದೀರಿ,‌ ಪ್ರಧಾನಮಂತ್ರಿ ನೀಡಿದ್ದು ಕೇವಲ ರೂ.1,869 ಕೋಟಿ‌. ಈ ಬಾರಿ  ರೂ.8000 ಕೋಟಿ ನಷ್ಟವಾಗಿದೆ ಎಂದು ಹೇಳುತ್ತಿದ್ದೀರಿ. ಕಳೆದ ವರ್ಷದ ಬಾಕಿ ಜೊತೆ ಈ ವರ್ಷದ ಪರಿಹಾರವನ್ನು ಉದಾರವಾಗಿ ಕೊಡುವಂತೆ ಕೇಳಿಕೊಳ್ಳಿ ಎಂದಿದ್ದಾರೆ

15ನೇ ಹಣಕಾಸು ಆಯೋಗದಿಂದ ಉಳಿದ ರಾಜ್ಯಗಳಿಗೆ ಹೋಲಿಸಿದರೆ ಹೆಚ್ಚು ನಷ್ಟವಾಗಿರುವುದು ಕರ್ನಾಟಕ ರಾಜ್ಯಕ್ಕೆ. ಈ ಅನ್ಯಾಯಕ್ಕೆ ಕಾರಣವಾಗಿರುವ  ಮಾನದಂಡಗಳನ್ನು ಪರಿಷ್ಕರಿಸಿ ತೆರಿಗೆ ಹಂಚಿಕೆ ಮತ್ತು ಎಸ್ ಡಿ ಆರ್ ಎಫ್ ನಲ್ಲಿ ರಾಜ್ಯಕ್ಕೆ ನ್ಯಾಯಬದ್ದ ಪಾಲು ಸಿಗುವಂತೆ ಮಾಡಿ ಎಂದು ಸಿಎಂಗೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com