ಜೆಡಿಎಸ್ ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಕಾಂಗ್ರೆಸ್ ಸೇರ್ಪಡೆ

ಜೆಡಿಎಸ್ ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ವಕ್ತಾರ ರಮೇಶ್ ಬಾಬು ಅವರು ಶನಿವಾರ ಅಧಿಕೃತವಾಗಿ ಕಾಂಗ್ರೆಸ್‌ ಸೇರಿದ್ದಾರೆ.

Published: 19th September 2020 05:58 PM  |   Last Updated: 19th September 2020 05:58 PM   |  A+A-


ramesh-babu1

ರಮೇಶ್ ಬಾಬು

Posted By : Lingaraj Badiger
Source : The New Indian Express

ಬೆಂಗಳೂರು: ಜೆಡಿಎಸ್ ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ವಕ್ತಾರ ರಮೇಶ್ ಬಾಬು ಅವರು ಶನಿವಾರ ಅಧಿಕೃತವಾಗಿ ಕಾಂಗ್ರೆಸ್‌ ಸೇರಿದ್ದಾರೆ.

ಇಂದು ಮಧ್ಯಾಹ್ನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಮೇಶ್‌ ಬಾಬು ಅವರ ಕಾಂಗ್ರೆಸ್ ಸೇರ್ಪಡೆಯಾದರು.

ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ ವಕ್ತಾರರು ಆಗಿದ್ದ ರಮೇಶ್ ಬಾಬು ಅವರು ವಿಧಾನ ಪರಿಷತ್ ಚುನಾವಣೆಯಲ್ಲಿ ಟಿಕೆಟ್‌ ನೀಡಲಿಲ್ಲ ಎಂಬ ಕಾರಣಕ್ಕೆ ಮುನಿಸಿಕೊಂಡು ಇತ್ತೀಚೆಗಷ್ಟೆ ಜೆಡಿಎಸ್‌ ಗೆ ರಾಜೀನಾಮೆ ನೀಡಿದ್ದರು.

ನಿನ್ನೆಯಷ್ಟೇ ಕಾಂಗ್ರೆಸ್‌ ಸೇರುತ್ತಿರುವುದಾಗಿ ರಮೇಶ್‌ ಬಾಬು ಅವರು ಘೋಷಿಸಿದ್ದರು. ಅದರಂತೆ ಈಗ ಕಾಂಗ್ರೆಸ್‌ ಸೇರಿದ್ದಾರೆ.

Stay up to date on all the latest ರಾಜಕೀಯ news
Poll
Rohit Sharma

ಮುಂಬರುವ ಆಸ್ಟ್ರೇಲಿಯಾ ಪ್ರವಾಸದಲ್ಲಿ ರೋಹಿತ್ ಶರ್ಮಾ ಅವರ ಅನುಪಸ್ಥಿತಿಯು ಟೀಮ್ ಇಂಡಿಯಾದ ಸಾಧನೆಯ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp