ಮಾಜಿ ಪ್ರಧಾನಿ ಎಚ್.ಡಿ  ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ!

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ಎಚ್‍ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗುವ ಮೂಲಕ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಹಿರಿಯ ಪುತ್ರ ಸೂರಜ್ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ.

Published: 20th September 2020 07:57 AM  |   Last Updated: 20th September 2020 07:57 AM   |  A+A-


Suraj Revanna

ಡಾ. ಸೂರಜ್ ರೇವಣ್ಣ

Posted By : Shilpa D
Source : Online Desk

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ಎಚ್‍ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗುವ ಮೂಲಕ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಹಿರಿಯ ಪುತ್ರ ಸೂರಜ್ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ.

ಮಾಜಿ ಸಚಿವ ರೇವಣ್ಣ ಅವರ ಹಿರಿಯ ಪುತ್ರ ಡಾ.ಸೂರಜ್ ರೇವಣ್ಣ ಹಾಸನದ ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ಡಾ.ಸೂರಜ್ ರೇವಣ್ಣ ಹೊಳೆ ನರಸೀಪುರ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಸಂಘಗಳ ಕ್ಷೇತ್ರದಿಂದ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ  ಸಲ್ಲಿಸಿದ್ದು ಅವರ ವಿರುದ್ಧ ಯಾರೊಬ್ಬರು ನಾಮಪತ್ರ ಸಲ್ಲಿಸದೆ ಇದ್ದುದರಿಂದ ಸೂರಜ್ ರೇವಣ್ಣ ಹೆಚ್.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗುವಲ್ಲಿ ಸಫಲರಾಗಿದ್ದಾರೆ. 

ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿರುವ ಡಾ,ಸೂರಜ್ ರೇವಣ್ಣ ದಂಡಿಗನಹಳ್ಳಿ ಜಿ.ಪಂ ಕ್ಷೇತ್ರದ ವ್ಯಾಪ್ತಿಯಲ್ಲಿತಮ್ಮದೇ ಆದ ಸಾಮಾಜಿಕ ಕಾರ್ಯಗಳ ಮೂಲಕ ಜನಮನ್ನಣೆ ಗಳಿಸಿದ್ದರು. 

Stay up to date on all the latest ರಾಜಕೀಯ news
Poll
Farmers_Protest1

ಹೊಸ ಕೃಷಿ ಕಾನೂನುಗಳ ಬಗ್ಗೆ ರೈತರನ್ನು ದಾರಿ ತಪ್ಪಿಸಲಾಗುತ್ತಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp