ಸರ್ಕಾರ ಅನುದಾನ ನೀಡುತ್ತಿಲ್ಲ, ಜನರಿಗೆ ನಾವು ಹೇಗೆ ಉತ್ತರಿಸಬೇಕು: ಅಧಿವೇಶನದಲ್ಲಿ ಶಾಸಕರ ಅಳಲು

ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಮತ್ತು ತೋಟಗಾರಿಕೆ ಸಚಿವ ಕೆಸಿ ನಾರಾಯಣಗೌಡ ವಿಧಾನಸಭೆಯಲ್ಲಿ ಸಾರ್ವಜನಿಕವಾಗಿಯೇ ಕೈ ಕೈ ಮಿಲಾಯಿಸಿದ್ದಾರೆ
ವಿಧಾನಸಭೆ
ವಿಧಾನಸಭೆ

ಬೆಂಗಳೂರು: ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಮತ್ತು ತೋಟಗಾರಿಕೆ ಸಚಿವ ಕೆಸಿ ನಾರಾಯಣಗೌಡ ವಿಧಾನಸಭೆಯಲ್ಲಿ ಸಾರ್ವಜನಿಕವಾಗಿಯೇ ಕೈ ಕೈ ಮಿಲಾಯಿಸಿದ್ದಾರೆ.

ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂಬುದು ಶಾಸಕರ ಆರೋಪವಾಗಿದೆ. ಖಜಾನೆ ಮತ್ತು ಪ್ರತಿಪಕ್ಷದ ಶಾಸಕರು ಹಣ ಒಣಗಿ ಹೋಗಿದ್ದಾರೆ ಮತ್ತು ಯೋಜನೆಗಳು ಸ್ಥಗಿತಗೊಂಡಿವೆ ಎಂದು ಶಾಸಕರು ನಿರಾಶೆಗೊಂಡಿದ್ದಾರೆ.

ರಾಜ್ಯದ ಆರ್ಥಿಕ ವ್ಯವಸ್ಥೆ ಸಂಪೂರ್ಣವಾಗಿ ನಾಶವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸರ್ಕಾರ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯ ಅನುದಾನ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಗಳು ಅರ್ಧಕ್ಕೆ ನಿಂತಿವೆ ಎಂದು ದೂರಿದ್ದಾರೆ.

ಇದು ಮೂಲ ಮತ್ತು ವಲಸಿಗರ ಬಿಜೆಪಿದರು ಎಂಬ ಕಾರಣಕ್ಕೆ ನಡೆಯುತ್ತಿರುವ ಜಗಳವಲ್ಲ,  ನಾನು ಕೂಡ ಕಾಂಗ್ರೆಸ್ ನಲ್ಲಿದ್ದೆ, ಆಮೇಲೆ ಜೆಡಿಎಸ್, ನಂತರ ಕೆಜೆಪಿ ಸೇರಿ ಈಗ ಬಿಜೆಪಿಯಲ್ಲಿದ್ದೇನೆ,  ಆದರೆ ಅಧಿಕಾರದಲ್ಲಿರುವವರು ಜವಾಬ್ದಾರಿಯಿಂದಿರಬೇಕು. ಅವರು ಸರಿಯಾಗಿ ಸ್ಪಂದಿಸುತ್ತಿಲ್ಲ, ನಮ್ಮ ಕರೆಗಳನ್ನು ಸ್ವೀಕರಿಸಿ ಸ್ಪಂದಿಸಬೇಕು, ಜನರಿಗೆ ನಾವು ಉತ್ತರ ಹೇಳಬೇಕಾಗಿದೆ ಎಂದು ಶಾಸಕ ಬೆಳ್ಳಿಪ್ರಕಾಶ್ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಶಾಸಕರ ಕರೆಗಳನ್ನು ಸಚಿವರು ಸ್ವೀಕರಿಸುತ್ತಿಲ್ಲ, ಇದುವೇ ಬಹುದೊಡ್ಡ ಸಮಸ್ಯೆಯಾಗಿದೆ, ನಮ್ಮ ಕುಂದುಕೊರತೆಗಳನ್ನು ಆಲಿಸಿ ಕೆಲಸ ಮಾಡಿಕೊಡಬೇಕು ಎಂದು ಬಿಜೆಪಿ ಶಾಸಕರೊಬ್ಬರು ತಿಳಿಸಿದ್ದಾರೆ. ತಮ್ಮ ತಮ್ಮ ಕ್ಷೇತ್ರಗಳ ಪ್ರದೇಶಾಭಿವೃದ್ಧಿ ನಿಧಿ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಆರೋಪಿಸಿದ್ದಾರೆ. ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿರುವುದಕ್ಕೆ ಜನರ ಪ್ರಶ್ನೆಗಳಿಗೆ ನಾವು ಉತ್ತರಿಸಲು ಆಗುತ್ತಿಲ್ಲ ಎಂದು ಆರೋಪಿಸಿದ್ದಾರೆ. 

ಕಳೆದ ಒಂದು ವರ್ಷದಿಂದ ಯಾವುದೇ ಅಭಿವೃದ್ಧಿ ಕೆಲಸಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ, ಜನರು ನಮ್ಮನ್ನು ಕ್ಷಮಿಸುವುದಿಲ್ಲ ಎಂದು ಜೆಡಿಎಸ್ ಶಾಸಕ ಎಚ್.ಕೆ ಕುಮಾರಸ್ವಾಮಿ ಹೇಳಿದ್ದಾರೆ, ಪ್ರತಿ ವರ್ಷ ಸ್ಥಳೀಯ ಪ್ರದೇಶಾಭಿವೃದ್ಧಿಗೆ ಸರ್ಕಾರ ಶಾಸಕರಿಗೆ 2 ಕೋಟಿ ರು ಅನುದಾನ ನೀಡುತ್ತದೆ, ಆದರೆ ಇದುವರೆಗೆ ಸರ್ಕಾರ 3.5 ಕೋಟಿ ರು ಹಣ ಬಾಕಿ ಉಳಿಸಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com