ಡಿ.ಕೆ.ಶಿವಕುಮಾರ್ ಸೀಸನ್ ರಾಜಕಾರಣಿ: ಕೃಷಿ ಸಚಿವ ಬಿ.ಸಿ.ಪಾಟೀಲ್
ಒಳಗೊಂದು ಹೊರಗೊಂದು ಮಾತನಾಡುವುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಅಭ್ಯಾಸವಾಗಿ ಬಿಟ್ಟಿದೆ. ಶಿವಕುಮಾರ್ ಸೀಸನ್ ರಾಜಕಾರಣಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
Published: 23rd September 2020 10:16 AM | Last Updated: 23rd September 2020 10:16 AM | A+A A-

ಬಿ.ಸಿ.ಪಾಟೀಲ್
ಬೆಂಗಳೂರು: ಒಳಗೊಂದು ಹೊರಗೊಂದು ಮಾತನಾಡುವುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಅಭ್ಯಾಸವಾಗಿ ಬಿಟ್ಟಿದೆ. ಶಿವಕುಮಾರ್ ಸೀಸನ್ ರಾಜಕಾರಣಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಸದನದ ಒಳಗೆ ಬಿ ಸಿ ಪಾಟೀಲ್ ತಮ್ಮ ಆತ್ಮೀಯ ಸ್ನೇಹಿತ ಎಂದವರು ಸಂಜೆಹೊತ್ತಿಗೆ ತಮ್ಮ ಮಾತು ಬದಲಾಯಿಸಿದ್ದಾರೆ. ಒಳಗೊಂದು, ಹೊರಗೊಂದು, ರೂಂನಲ್ಲೊಂದು ಮಾತನಾಡುವುದು ಶಿವಕುಮಾರ್‌ಗೆ ಅಭ್ಯಾಸವಾಗಿದೆ. ಅವರು ತಮ್ಮ ತೆವಳಿಗೆ ಮಾತನಾಡುವುದನ್ನು ಬಿಡಲಿ ಎಂದು ತಿರುಗೇಟು ನೀಡಿದರು.
ಎಪಿಎಂಸಿ ಕಾಯ್ದೆಯಿಂದ ಯಾವುದೇ ನಷ್ಟವಿಲ್ಲ. ರೈತರಿಗೆ ಒಳ್ಳೆಯದೇ ಆಗಲಿದೆ. ರೈತರು ಯಾವ ಕಾರಣಕ್ಕಾಗಿ ಹೋರಾಟ ಮಾಡುತ್ತಿದ್ದಾರೆಂಬುದು ಸ್ಪಷ್ಟವಾಗಬೇಕು. ರೈತರು ತಮ್ಮ ಹೋರಾಟ ಕೈಬಿಡಬೇಕೆಂದು ಬಿ.ಸಿ.ಪಾಟೀಲರು ಮನವಿ ಮಾಡಿದರು.