ಕೊರೋನಾದಿಂದ ಸಾವಿಗೀಡಾಗುವ ಪೌರಕಾರ್ಮಿಕರಿಗೆ ರೂ.50 ಲಕ್ಷ ರೂ ಪರಿಹಾರ ಕೊಡಿ: ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಕರ್ತವ್ಯ ನಿರತ ಪೌರಕಾರ್ಮಿಕರು ಕೊರೋನಾ ಸೋಂಕಿನಿಂದ ಸಾವಿಗೆ ತುತ್ತಾದರೆ ಅವರ ಅವಲಂಭಿತ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಕುಮಾರಸ್ವಾಮಿ
ಕುಮಾರಸ್ವಾಮಿ

ಬೆಂಗಳೂರು: ಕರ್ತವ್ಯ ನಿರತ ಪೌರಕಾರ್ಮಿಕರು ಕೊರೋನಾ ಸೋಂಕಿನಿಂದ ಸಾವಿಗೆ ತುತ್ತಾದರೆ ಅವರ ಅವಲಂಭಿತ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಪೌರಕಾರ್ಮಿಕ ದಿನಾಚರಣೆಯ ಶುಭಾಶಯ ಕೋರಿ ಸರಣಿ ಟ್ವಿಟ್ ಮಾಡಿರುವ ಅವರು, ಪೌರಕಾರ್ಮಿಕ ಸಮುದಾಯವನ್ನು ಸದಾ ಕೃತಜ್ಞತೆಯಿಂದ ಸ್ಮರಿಸುವುದು, ಅವರ ಬೇಡಿಕೆಗಳನ್ನು ಈಡೇರಿಸುವುದೇ ಸಮಾಜ ಅವರಿಗೆ ಸಲ್ಲಿಸಬಹುದಾದ ನಿಜ ಗೌರವವಾಗಿದೆ ಎಂದರು.

ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ತ್ಯಾಗ, ಸೇವೆ, ಸಮರ್ಪಣೆ, ಕಾರುಣ್ಯದಿಂದ ಸದಾ ಜೀವ ತೇಯುತ್ತಿರುವ ಪೌರಕಾರ್ಮಿಕರನ್ನು ಈ ಸಮಾಜ ಪ್ರತಿಕ್ಷಣವು ತಾಯ್ತನದಿಂದ ಕಾಣುವುದೇ ನಾವು ಅವರಿಗೆ ಸಲ್ಲಿಸಬಹುದಾದ ದೊಡ್ಡ ಕೃತಜ್ಞತೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com