ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ತೀರ್ಮಾನ: ಸಿದ್ದರಾಮಯ್ಯ

ಮುಖ್ಯಮಂತ್ರಿ ಯಡಿಯೂರಪ್ಪ ಮಗ, ಮೊಮ್ಮಗ, ಅಳಿಯ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವುದರಿಂದ ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ರಾಜ್ಯದ ಜನರ ವಿಶ್ವಾಸ ಕಳೆದುಕೊಂಡಿದೆ. ಆದ್ದರಿಂದ ನಾವು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ತೀರ್ಮಾನಿಸಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಮಗ, ಮೊಮ್ಮಗ, ಅಳಿಯ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವುದರಿಂದ ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ರಾಜ್ಯದ ಜನರ ವಿಶ್ವಾಸ ಕಳೆದುಕೊಂಡಿದೆ. ಆದ್ದರಿಂದ ನಾವು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ತೀರ್ಮಾನಿಸಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ತಮ್ಮ ನೇತೃತ್ವದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆ ಬಳಿಕ ಸಿದ್ದರಾಮಯ್ಯ ಮಾತನಾಡಿ, ರಾಜ್ಯದಲ್ಲಿ ವೈದ್ಯಕೀಯ ಉಪಕರಣ, ಲ್ಯಾಪ್‌ಟಾಪ್, ವಿದ್ಯುತ್ ಪರಿವರ್ತಕ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ, ಅಭಿವೃದ್ಧಿ ಕುಂಠಿತಗೊಂಡು ಆರ್ಥಿಕ ಅಧೋಗತಿಗೆ ಹೋಗುತ್ತಿದೆ. ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡುವ ಮೂಲಕ ಕಾರ್ಮಿಕ ವಿರೋಧಿ ಕಾನೂನು ತಂದಿದ್ದಾರೆ.

 ಒಂದು ವರ್ಷ ನಾಲ್ಕು ತಿಂಗಳಲ್ಲಿ ರಾಜ್ಯ ಅಧೋಗತಿಗೆ ಹೋಗಿದೆ. ಯಡಿಯೂರಪ್ಪ ಸರ್ಕಾರ ಒಂದು ಲಕ್ಷ, ಒಂದು ಸಾವಿರ ಕೋಟಿ ಸಾಲ ಮಾಡಿದೆ. ಯಡಿಯೂರಪ್ಪ ಮಂತ್ರಿ ಮಂಡಲ ವಿಶ್ವಾಸ ಕಳೆದುಕೊಂಡಿದೆ. ಈಗಾಗಲೇ ನೋಟಿಸ್ ಕೊಟ್ಟಿದ್ದು, ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡುತ್ತೇವೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com