6 ತಿಂಗಳಿಗೊಮ್ಮೆ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸಲಿ, ನನಗೂ ವಿಶ್ವಾಸ ಬರುತ್ತೆ: ಸಿಎಂ ಯಡಿಯೂರಪ್ಪ

ಕಾಂಗ್ರೆಸ್ ನಾಯಕರು ಪ್ರತಿ 6 ತಿಂಗಳಿಗೊಮ್ಮೆ ಹೀಗೆಯೇ ಅವಿಶ್ವಾಸ ನಿರ್ಣಯ ಮಂಡನೆ ಮಾಡುತ್ತಿರಲಿ. ಇದರಿಂದ ನನಗೂ 6 ತಿಂಗಳ ಕಾಲ ವಿಶ್ವಾಸ ಬರುತ್ತದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ. 
ಸುದ್ದಿಗಾರರೊಂದಿಗೆ ಮಾತನಾಡುತ್ತಿರುವ ಸಿಎಂ ಯಡಿಯೂರಪ್ಪ
ಸುದ್ದಿಗಾರರೊಂದಿಗೆ ಮಾತನಾಡುತ್ತಿರುವ ಸಿಎಂ ಯಡಿಯೂರಪ್ಪ

ಬೆಂಗಳೂರು: ಕಾಂಗ್ರೆಸ್ ನಾಯಕರು ಪ್ರತಿ 6 ತಿಂಗಳಿಗೊಮ್ಮೆ ಹೀಗೆಯೇ ಅವಿಶ್ವಾಸ ನಿರ್ಣಯ ಮಂಡನೆ ಮಾಡುತ್ತಿರಲಿ. ಇದರಿಂದ ನನಗೂ 6 ತಿಂಗಳ ಕಾಲ ವಿಶ್ವಾಸ ಬರುತ್ತದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ. 

ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಅವಿಶ್ವಾಸ ನಿರ್ಣಯ ಮಂಡನೆ ಮಾಡುವುದರಿಂದ ನನಗೆ 6 ತಿಂಗಳ ಕಾಲ ವಿಶ್ವಾಸ ಬರುತ್ತದೆ. ನನಗೆ ವಿಶ್ವಾಸ ಮೂಡಿಸುವ ಕೆಲಸವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. 

ಇದೇ ವೇಳೆ ರೈತರ ಹೋರಾಟದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಇಂದು ರೈತರ ಜೊತೆಗೆ ಚರ್ಚೆ ಮಾಡುತ್ತೇನೆ. ಭೂ ಸುಧಾರಣಾ ಕಾಯ್ದೆಯಿಂದ ರೈತರಿಗೆ ತೊಂದರೆ ಆಗುವುದಿಲ್ಲ. ನೀರಾವರಿ ಜಮೀನು ಖರೀದಿ ಮಾಡಿದವರು ಅದನ್ನು ನೀರಾವರಿಗೆ ಬಳಸಬೇಕು ಎಂದು ಷರತ್ತು ಹಾಕಿದ್ದೇವೆ. ಕೈಗಾರಿಕೆಗಳಿಗೋಸ್ಕರ ನಮ್ಮ ರಾಜ್ಯದಲ್ಲಿ ಬಳಸಿರುವುದು ಕೇವಲ ಶೇ.2 ರಷ್ಟು ಜಮೀನು ಮಾತ್ರ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com