ಅವಿಶ್ವಾಸ ನಿರ್ಣಯ ಮಂಡನೆಗೂ ಮೊದಲು ಕಾಂಗ್ರೆಸ್ ನಾಯಕರು ನಮ್ಮನ್ನು ಸಂಪರ್ಕಿಸಿಲ್ಲ: ಹೆಚ್.ಡಿ. ಕುಮಾರಸ್ವಾಮಿ

ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡುವುದಕ್ಕೂ ಮುನ್ನ ಕಾಂಗ್ರೆಸ್ ನಾಯಕರು ನಮ್ಮನ್ನು ಸಂಪರ್ಕಿಸಿಲ್ಲ ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಶುಕ್ರವಾರ ಹೇಳಿದ್ದಾರೆ. 
ಹೆಚ್.ಡಿ.ಕುಮಾರಸ್ವಾಮಿ
ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡುವುದಕ್ಕೂ ಮುನ್ನ ಕಾಂಗ್ರೆಸ್ ನಾಯಕರು ನಮ್ಮನ್ನು ಸಂಪರ್ಕಿಸಿಲ್ಲ ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಶುಕ್ರವಾರ ಹೇಳಿದ್ದಾರೆ. 

ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರೆಗೂ ಕಾಂಗ್ರೆಸ್ ಪಕ್ಷದ ಯಾವುದೇ ಸ್ನೇಹಿತರೂ ನಮ್ಮನ್ನು ಸಂಪರ್ಕಿಸಿ ಮಾತುಕತೆ ನಡೆಸಿಲ್ಲ. ನಿನ್ನೆ ಕಾಂಗ್ರೆಸ್ ಪಕ್ಷ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದ್ದಾರೆ. ಆದರೂ ನಮ್ಮ ಅಭಿಪ್ರಾಯವನ್ನು ಕೇಳಿಲ್ಲ. ಕಾಂಗ್ರೆಸ್ ನಾಯಕರ ವರ್ತನೆ ಹೇಗಿದೆ ಎಂದರೆ, ಅವರಿಗೆ ನಮ್ಮ ಬೆಂಬಲ ಅಗತ್ಯವಿಲ್ಲ ಎಂದೆನಿಸುತ್ತಿದೆ. ಸ್ವತಂತ್ರವಾಗಿ ಹೋರಾಟ ಮಾಡಲು ಅವರು ನಿರ್ಧರಿಸುವಂತಿದೆ ಎಂದು ಹೇಳಿದ್ದಾರೆ. 

ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರವು ಸದನದ ವಿಶ್ವಾಸವನ್ನು ಕಳೆದುಕೊಂಡಿದೆ ಎಂದು ನಿನ್ನೆಯಷ್ಟೇ ಪ್ರತಿಪಕ್ಷ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದ್ದು, ಈ ಅವಿಶ್ವಾಸ ಪ್ರಸ್ತಾಪಕ್ಕೆ ಅನುಮತಿ ದೊರೆತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com