ಬಿಎಸ್ ವೈ ಸರ್ಕಾರಕ್ಕೆ 'ಅವಿಶ್ವಾಸ' ಸಂಕಷ್ಟ: ಬಿಜೆಪಿ ಶಾಸಕರಿಗೆ ವಿಪ್ ಜಾರಿ

ಬಿಜೆಪಿ ಸರ್ಕಾರ ಮತ್ತೊಮ್ಮೆ ಇಕ್ಕಟಿಗೆ ಸಿಲುಕಿದೆ. ತಮ್ಮ ಸರ್ಕಾರ ಸುರಕ್ಷಿತವಾಗಿದೆ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಬೇಕಾದ ಪರೀಕ್ಷೆಗೆ ಸಿಎಂ ಯಡಿಯೂರಪ್ಪ ಸಿದ್ದರಾಗಿದ್ದಾರೆ. 
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ

ಬೆಂಗಳೂರು: ಬಿಜೆಪಿ ಸರ್ಕಾರ ಮತ್ತೊಮ್ಮೆ ಇಕ್ಕಟಿಗೆ ಸಿಲುಕಿದೆ. ತಮ್ಮ ಸರ್ಕಾರ ಸುರಕ್ಷಿತವಾಗಿದೆ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಬೇಕಾದ ಪರೀಕ್ಷೆಗೆ ಸಿಎಂ ಯಡಿಯೂರಪ್ಪ ಸಿದ್ದರಾಗಿದ್ದಾರೆ. 

ರಾಜ್ಯ ಸರ್ಕಾರದ ಮಂತ್ರಿ ಮಂಡಲದ ಮೇಲೆ ನಮಗೆ ನಂಬಿಕೆಯಿಲ್ಲ. ನಮಗೆ ಅವಿಶ್ವಾಸ ಮಂಡನೆಗೆ ಅವಕಾಶ ಕೊಡಬೇಕು ಎಂದು ಈಗಾಗಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ವೀಕರ್​ಗೆ ಮನವಿ ಮಾಡಿದ್ದಾರೆ. ಇದಕ್ಕೆ ಅನುಮತಿ ನೀಡಿರುವ ಸಭಾಧ್ಯಕ್ಷರು ಅವಿಶ್ವಾಸ ಮಂಡನೆಗೆ ಅನುಮತಿ ನೀಡಲಿದ್ದಾರೆ.

ನಗರದ ಖಾಸಗಿ ಹೋಟೆಲ್​ನಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಶಾಸಕಾಂಗ ಸಭೆ ನಡೆದಿದೆ. ಸಭೆಯಲ್ಲಿ 80ಕ್ಕೂ ಹೆಚ್ಚು ಶಾಸಕರು ಸಭೆಯಲ್ಲಿ ಭಾಗಿಯಾಗಿದ್ದು, ಕೋವಿಡ್ ನಿಂದ 15ಕ್ಕೂ ಹೆಚ್ಚು ಶಾಸಕರು ಗೈರಾಗಿದ್ದಾರೆ.  ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಕುರಿತು ಚರ್ಚೆ ನಡೆಸಿದ್ದು, ಕಾಂಗ್ರೆಸ್​ ತಂತ್ರಕ್ಕೆ ಪ್ರತಿತಂತ್ರ ಹೆಣೆಯುವುದರ ಕುರಿತು ನಾಯಕರು ಚರ್ಚಿಸಿದ್ದಾರೆ.

ಶುಕ್ರವಾರ ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ, ಕೋವಿಡ್ ಪಾಸಿಟಿವ್ ಇರುವವರು ದೂರವಿರಲು ವಿಶೇಷ ಅನುಮತಿ ಕೋರಿದವರನ್ನು ಹೊರತುಪಡಿಸಿ 80 ಶಾಸಕರು ಉಪಸ್ಥಿತರಿದ್ದರು.  

ಅವಿಶ್ವಾಸ ಮಂಡನೆಯಾಗುತ್ತಿರುವ ಹಿನ್ನಲೆ ಎಲ್ಲಾ ಬಿಜೆಪಿ ಶಾಸಕರು ಸದನಕ್ಕೆ ಕಡ್ಡಾಯವಾಗಿ ಹಾಜರಿರಬೇಕು ಎಂದು ಸಿಎಂ ಯಡಿಯೂರಪ್ಪ ವಿಪ್​ ಜಾರಿಮಾಡಿದ್ದಾರೆ. ಅಲ್ಲದೇ ಬೆಳಗ್ಗೆಯಿಂದ ಸಂಜೆವರೆಗೂ ಸದನದಲ್ಲಿ ಹಾಜರಿರಬೇಕು. ಯಾರು ಗೈರಾಗಬಾರದು ಎಂದು ತಿಳಿಸಿದ್ದಾರೆ.

ಕಾಂಗ್ರೆಸ್​ಗಿಂತ ಬಿಜೆಪಿ ಸದಸ್ಯರು ಹೆಚ್ಚಿದ್ದರೂ ಕೊರೋನಾ ಹಿನ್ನಲೆ ಸರ್ಕಾರದ ಅನೇಕ ಸಚಿವರು, ಶಾಸಕರು ಹಾಜರಾಗುವಂತೆ ಇಲ್ಲ. ಈ ಹಿನ್ನಲೆ ಸರ್ಕಾರ ವಿಪ್​ ಜಾರಿ ಮೊರೆ ಹೋಗಿದೆ.

ಬಸವರಾಜ್ ಬೊಮ್ಮಾಯಿ, ಬೈರತಿ ಬಸವರಾಜ್, ಕೆ ಗೋಪಾಲಯ್ಯ ಮತ್ತು ಹರತಾಳು ಹಾಲಪ್ಪ ಹಾಜರಿರಲಿಲ್ಲ. ರಾಜ್ಯ ಪಕ್ಷದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಿಎಂ ಬಿಎಸ್ ಯಡಿಯೂರಪ್ಪ ಅವರೊಂದಿಗೆ ಶನಿವಾರ ಮತದಾನದ ಕಾರ್ಯತಂತ್ರದ ಬಗ್ಗೆ ಸದಸ್ಯರಿಗೆ ವಿವರಿಸಿದರು.

ಈ ನಡುವೆ ದಿಢೀರ್​ ಬೆಳವಣಿಗೆಯಲ್ಲಿ ಜೆಡಿಎಸ್​ ನಾಯಕ ಕುಮಾರಸ್ವಾಮಿ , ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರನ್ನು ಗೌಪ್ಯವಾಗಿ ಭೇಟಿ ಮಾಡಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಕಳೆದ ಹದಿನೈದು ದಿನಗಳಲ್ಲಿ  ಮೂರನೇ ಬಾರಿ ಕುಮಾರಸ್ವಾಮಿಯವರು ಸಿಎಂ ಬಿಎಸ್​ವೈ  ಭೇಟಿಯಾಗಿ ರಹಸ್ಯ ಮಾತುಕತೆ ನಡೆಸಿದ್ದಾರೆ.

ಅವಿಶ್ವಾಸ ನಿರ್ಣಯ ಪ್ರಕ್ರಿಯೆಯಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ. ಅವಿಶ್ವಾಸ ನಿರ್ಣಯ ಸಂಬಂಧ ಕಾಂಗ್ರೆಸ್ ನಮ್ಮನ್ನು ಸಂಪರ್ಕಿಸಿಲ್ಲ, ಹೀಗಾಗಿ ನಾವು ಭಾಗವಹಿಸುತ್ತಿಲ್ಲ ಎಂದು ಜೆಡಿಎಸ್ ಶಾಸಕ ಬಂಡೆಪ್ಪ ಕಾಶೆಂಪೂರ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com