ಕರ್ನಾಟಕ ಬಂದ್ ಗೆ ಜೆಡಿಎಸ್ ಬೆಂಬಲ: ಎಚ್.ಡಿ ದೇವೇಗೌಡ

ರಾಜ್ಯ ಸರ್ಕಾರ ಜಾರಿ ಮಾಡಿರುವ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೋಮವಾರದ ಕರ್ನಾಟಕ ಬಂದ್ ಗೆ ಜೆಡಿಎಸ್ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಹೇಳಿದ್ದಾರೆ.

Published: 27th September 2020 12:31 PM  |   Last Updated: 27th September 2020 12:31 PM   |  A+A-


HD devegowda

ಎಚ್.ಡಿ ದೇವೇಗೌಡ

Posted By : Shilpa D
Source : Online Desk

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರಕಾರಗಳು ಅಂಗೀಕರಿಸಿರುವ ಕೃಷಿ ಸಂಬಂಧಿತ ಕಾನೂನುಗಳು ರೈತ ವಿರೋಧಿ ಎಂದು ಆರೋಪಿಸಿ ಸೋಮವಾರ ಕರೆ ನೀಡಿರುವ ಬಂದ್‌ಗೆ ವಿವಿಧ ರೈತ ಪರ ಸಂಘಟನೆಗಳು ಮತ್ತು ಕೆಲವು ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿದ್ದು, ರಾಜ್ಯಾದ್ಯಂತ ಪ್ರತಿಭಟನ ಸಭೆ, ಮೆರವಣಿಗೆ, ರಸ್ತೆ ತಡೆ ಚಳವಳಿ ನಡೆಯಲಿದೆ.

ರಾಜ್ಯ ಸರ್ಕಾರ ಜಾರಿ ಮಾಡಿರುವ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೋಮವಾರದ ಕರ್ನಾಟಕ ಬಂದ್ ಗೆ ಜೆಡಿಎಸ್ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ರಾಜ್ಯದ ರೈತ ಸಂಘಗಳು ಹಾಗೂ ಅನೇಕ ಸಂಘಟನೆಗಳು ಹಮ್ಮಿಕೊಂಡಿರುವ ನಾಳಿನ ರಾಜ್ಯಾದ್ಯಂತ ಬಂದ್ ಗೆ ನಮ್ಮ ಜೆಡಿಎಸ್ ಪಕ್ಷದ ಸಂಪೂರ್ಣ ಬೆಂಬಲವಿರುತ್ತದೆ ಎಂದಿದ್ದಾರೆ.

ಇನ್ನೂ ಕರ್ನಾಟಕ ಬಂದ್ ಗೆ  ಕಬಿನಿ ರೈತ ಹಿತರಕ್ಷಣ ಸಮಿತಿ, ರಾಜ್ಯ ಕೃಷಿ ಪಂಪ್‌ ಸೆಟ್‌ ಬಳಕೆದಾರರ ಸಂಘ, ಮಹಾದಾಯಿ ನೀರು ಹೋರಾಟ ಸಮಿತಿ, ಕರ್ನಾಟಕ ರಕ್ಷಣ ವೇದಿಕೆ  ಸಹಿತ ಹಲವು ರೈತ ಸಂಘಟನೆಗಳು ಮತ್ತು ಕನ್ನಡಪರ ಸಂಘಟನೆಗಳು ಬೆಂಬಲ ನೀಡಿವೆ


 

Stay up to date on all the latest ರಾಜಕೀಯ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp