ತೇಜಸ್ವಿ ಸೂರ್ಯ ಹೇಳಿಕೆಗೆ ಸಿಎಂ ಸಮರ್ಥನೆ: ಕಾಂಗ್ರೆಸ್ ಕಿಡಿ; ನೆಟ್ಟಿಗರ ಆಕ್ರೋಶ

ಬೆಂಗಳೂರು ಉಗ್ರರ ತಾಣ ವಾಗಿದೆ ಎಂದು ಹೇಳಿಕೆ ನೀಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಜೊತೆಗೆ ಸಂಸದರನ್ನು ವಜಾಗೊಳಿಸುವಂತೆ ಆಗ್ರಹಿಸಿದೆ
ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ

ಬೆಂಗಳೂರು: ಬೆಂಗಳೂರು ಉಗ್ರರ ತಾಣ ವಾಗಿದೆ ಎಂದು ಹೇಳಿಕೆ ನೀಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಜೊತೆಗೆ ಸಂಸದರನ್ನು ವಜಾಗೊಳಿಸುವಂತೆ ಆಗ್ರಹಿಸಿದೆ.

ತೇಜಸ್ವಿ ಹೇಳಿಕೆ ಬೆಂಗಳೂರು ನಗರಕ್ಕೆ ಅನ್ಯಾಯ ವುಂಟು ಮಾಡಿದೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಆದರೆ ತೇಜಸ್ವಿ ಹೇಳಿಕೆಯನ್ನು ಸಿಎಂ ಯಡಿಯೂರಪ್ಪ ಸಮರ್ಥಿಸಿಕೊಂಡಿದ್ದಾರೆ.

ಸಿಲಿಕಾನ್​ ಸಿಟಿಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್​ಐಎ) ಶಾಶ್ವತ ಕಚೇರಿ  ಸ್ಥಾಪನೆಗೆ ಕೇಂದ್ರ ಸರ್ಕಾರ ಒತ್ತಾಯಿಸಿದ್ದ, ಮಾತನಾಡಿದ ಬಿಜೆಪಿ ಸಂಸದ  ಬೆಂಗಳೂರು ಉಗ್ರರ ಚಟುವಟಿಕೆ ತಾಣವಾಗಿದೆ. ಇಲ್ಲಿ ಇದರ ಕೇಂದ್ರ ಕಚೇರಿ ಸ್ಥಾಪಿಸುವುದರಿಂದ ಅವರ ಮಟ್ಟ ಹಾಕಲು ಸಾಧ್ಯವಾಗುತ್ತದೆ ಎಂದಪು ಹೇಳಿದ್ದರು, ಸದ್ಯ ತೇಜಸ್ವಿ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆ.

ತಮ್ಮ ಪಕ್ಷದ ಸಂಸದನ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಸಿಎಂ ಯಡಿಯೂರಪ್ಪ , ತೇಜಸ್ವಿ ಹೇಳಿರುವುದು, ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಉಗ್ರರ ಚಟುವಟಿಕೆಗಳು ಹೆಚ್ಚುತ್ತಿದ್ದು ಅದನ್ನು ನಿಯಂತ್ರಿಸಲು ಬೆಂಗಳೂರಿನಲ್ಲಿ ಎನ್ ಐ ಎ ಕಚೇರಿ ಸ್ಥಾಪಿಸಬೇಕೆಂಬ ಅರ್ಥದಲ್ಲಿ ಹೇಳಿದ್ದಾಗಿ ಸಮರ್ಥಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಎಷ್ಟು ಭಯೋತ್ಪಾದಕ ಚಟುವಟಿಕೆಗಳನ್ನು ಆಯೋಜಿಸಲಾಗಿದೆ ಎಂದು ವಿವರಿಸುವಂತೆ ಶಾಸಕ ಪ್ರಿಯಾಂಕ್ ಖರ್ಗೆ ರಾಜ್ಯದ ಬಿಜೆಪಿ ಮುಖಂಡರಿಗೆ ಆಗ್ರಹಿಸಿದ್ದಾರೆ.

ಇಂತಹ ಹೇಳಿಕೆ ನೀಡುವುದು ನಾಚಿಕೆಗೇಡಿನ ಸಂಗತಿ ಎಂದು ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಬಣ್ಣಿಸಿದ್ದಾರೆ. ಬೆಂಗಳೂರಿನ ಬಗ್ಗೆ ಇಂತ ಹೇಳಿಕೆ ನೀಡಿರುವುದಕ್ಕೆ ತೇಜಸ್ವಿ ಸೂರ್ಯ ಕ್ಷಮೆ ಕೇಳಬೇಕು ಎಂದು ನೆಟ್ಟಿಗರು ಸಾಮಾಜಿಕ ಮಾಧ್ಯಮದಲ್ಲಿ ಒತ್ತಾಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com