ಶಿರಾ ಉಪಚುನಾವಣೆ ಹಿನ್ನೆಲೆ: ಕಾಡುಗೊಲ್ಲ ಅಭಿವೃದ್ಧಿ ನಿಗಮ ಅಸ್ಥಿತ್ವಕ್ಕೆ

ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಂಡಳಿ ಮತ್ತು ಗೊಲ್ಲ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪನೆಯ ವಿಚಾರ ಗೊಂದಲ ತಾರಕಕ್ಕೇರಿ, ಸರ್ಕಾರ ಅಂತಿಮವಾಗಿ "ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಂಡಳಿ" ಸ್ಥಾಪನೆ ಮಾಡಲು ಆದೇಶ ಹೊರಡಿಸಿದೆ. ಈ ಮೂಲಕ ಗೊಂದಲಕ್ಕೆ ತೆರೆ ಎಳೆದಂತಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಂಡಳಿ ಮತ್ತು ಗೊಲ್ಲ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪನೆಯ ವಿಚಾರ ಗೊಂದಲ ತಾರಕಕ್ಕೇರಿ, ಸರ್ಕಾರ ಅಂತಿಮವಾಗಿ "ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಂಡಳಿ" ಸ್ಥಾಪನೆ ಮಾಡಲು ಆದೇಶ ಹೊರಡಿಸಿದೆ. ಈ ಮೂಲಕ ಗೊಂದಲಕ್ಕೆ ತೆರೆ ಎಳೆದಂತಾಗಿದೆ.

ಉಪ ಚುನಾವಣೆ ನಿಗದಿಯಾಗಿರುವ ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಕಾಡುಗೊಲ್ಲ ಜಾತಿಯ 25ಸಾವಿರಕ್ಕೂ ಹೆಚ್ಚು ಮತದಾರರಿದ್ದಾರೆ. ಅವರ ಮತ ಸೆಳೆಯುವುದಕ್ಕಾಗಿಯೇ ನಿಗಮ ಸ್ಥಾಪನೆಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಬಿಜೆಪಿ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್‌ ಗೌಡ, ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್‌. ರವಿಕುಮಾರ್‌ ಸೇರಿದಂತೆ ಹಲವರು ಮಂಗಳವಾರ ಬೆಳಿಗ್ಗೆ ಮುಖ್ಯಮಂತ್ರಿಯವರ ಮನವೊಲಿಸಿದ್ದಾರೆ. ಆ ಬಳಿಕ ‘ಕಾಡುಗೊಲ್ಲ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಪರಿಷ್ಕೃತ ಆದೇಶ ಹೊರಡಿಸಲಾಯಿತು ಎಂದು ಮೂಲಗಳು ತಿಳಿಸಿವೆ.

‘ಕಾಡುಗೊಲ್ಲ ಅಭಿವೃದ್ಧಿ ನಿಗಮ’ ಸ್ಥಾಪನೆಯ ಪ್ರಸ್ತಾವವನ್ನು ‘ಗೊಲ್ಲ ಅಭಿವೃದ್ಧಿ ನಿಗಮ’ ಎಂಬುದಾಗಿ ಬದಲಿಸಿದ್ದಕ್ಕೆ ತುಮಕೂರು, ಚಿತ್ರದುರ್ಗ ಸೇರಿದಂತೆ ಕಾಡುಗೊಲ್ಲ ಸಮುದಾಯದ ಜನರು ಹೆಚ್ಚಾಗಿರುವ ಭಾಗಗಳಿಂದ ವಿರೋಧ ವ್ಯಕ್ತವಾಗಿತ್ತು. ಇದೆಲ್ಲವನ್ನೂ ಗಮನಕ್ಕೆ ತಂದ ಬಳಿಕವೇ ಮುಖ್ಯಮಂತ್ರಿಯವರು ಆದೇಶ ಪರಿಷ್ಕರಿಸಲು ಸೂಚನೆ ನೀಡಿದರು ಎಂದು ಹೇಳಲಾಗಿದೆ.

ಜೆಡಿಎಸ್ ಮತಗಳನ್ನು  ವಿಭಜಿಸಲು ನಿರ್ಧರಿಸಿರುವ ಜೆಡಿಯು ಕುಂಚಟಿಗ ಒಕ್ಕಲಿಗ ಅಭ್ಯರ್ಥಿ ಚೇತನ್ ಕುಮಾರ್ ಲಿಂಗದಹಳ್ಳಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಇತ್ತೀಚೆಗಷ್ಟೆ ಶಿರಾ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಕೆಆರ್ ಪೇಟೆ ಉಪ ಚುನಾವಣೆ ತಂತ್ರ ಅನುಸರಿಸುವುದಾಗಿ ತಿಳಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com